ಚೆನ್ನೈ: ಸಂಘಟಿತ ಬೌಲಿಂಗ್ ದಾಳಿ ಹಾಗೂ ಭರ್ಜರಿ ಬ್ಯಾಟಿಂಗ್ ನೆರವಿನಿಂದ ತವರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings), ಮುಂಬೈ ಇಂಡಿಯನ್ಸ್ (Mumba Indians) ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಪಾಯಿಟ್ಸ್ ಪಟ್ಟಿಯಲ್ಲಿ ಒಂದು ಸ್ಥಾನ ಮೇಲಕ್ಕೆ ಜಿಗಿದಿದೆ.
11 ಪಂದ್ಯಗಳ ಪೈಕಿ 6 ರಲ್ಲಿ ಗೆಲುವು ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ 13 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿದರೆ, 10 ಪಂದ್ಯಗಳಲ್ಲಿ ತಲಾ 5ರಲ್ಲಿ ಗೆಲುವು ಸಾಧಿಸಿರುವ ಲಕ್ನೋ ಸೂಪರ್ ಜೈಂಟ್ಸ್ 11 ಅಂಕಗಳೊಂದಿಗೆ 3 ಹಾಗೂ ರಾಜಸ್ಥಾನ್ ರಾಯಲ್ಸ್ 10 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಗುಜರಾತ್ ಟೈಟಾನ್ಸ್‌ಗೆ 9 ವಿಕೆಟ್‌ಗಳ ಭರ್ಜರಿ ಜಯ – ಪಾಂಡ್ಯ ಪಡೆ ಬಹುತೇಕ ಪ್ಲೇ ಆಫ್‌ಗೆ; ಈ ಸಲ ಕಪ್ ಯಾರದ್ದು?
Advertisement
Advertisement
ಶನಿವಾರ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತ್ತು. 140 ರನ್ ಗುರಿ ಪಡೆದ ಸಿಎಸ್‌ಕೆ 17.4 ಓವರ್‌ಗಳಲ್ಲೇ 4 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿ ಜಯ ಸಾಧಿಸಿತು. ಇದನ್ನೂ ಓದಿ: ಯುದ್ಧ ಮುಂದುವರಿಸಲಿ – ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ದಾದಾ
Advertisement
Advertisement
ಗೆಲುವಿಗೆ 140 ರನ್‌ಗಳ ಸಾಧಾರಣ ರನ್ ಗುರಿ ಪಡೆದ ಚೆನ್ನೈ ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಮಾಡಲು ಮುಂದಾಯಿತು. ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಭರ್ಜರಿ ಸಿಕ್ಸರ್, ಬೌಂಡರಿ ಸಿಡಿದರು. ಆದ್ರೆ 16 ಎಸೆತಗಳಲ್ಲಿ 30 ರನ್ (4 ಬೌಂಡರಿ, 2 ಸಿಕ್ಸರ್) ಗಳಿಸುತ್ತಿದ್ದಂತೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಬಳಿಕ ಕಣಕ್ಕಿಳಿದ ಅಜಿಂಕ್ಯಾ ರಹಾನೆ (Ajinkya Rahane) ಕೂಡ ಭರ್ಜರಿ ಬ್ಯಾಟಿಂಗ್ ಮಾಡಿದರು. ಒಂದೆಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ರನ್ ಕಲೆಹಾಕುತ್ತಾ ಸಾಗಿದ ಚೆನ್ನೈ ಬಹುಬೇಗನೆ ಗುರಿ ತಲುಪಿತು.
ಸಿಎಸ್‌ಕೆ ಪರ ಋತುರಾಜ್ ಗಾಯಕ್ವಾಡ್ 30 ರನ್, ಡಿವೋನ್ ಕಾನ್ವೆ (Devon Conway) 44 ರನ್ (42 ಎಸೆತ, 4 ಬೌಂಡರಿ), ಅಜಿಂಕ್ಯಾ ರಹಾನೆ 21 (17 ಎಸೆತ, 1 ಸಿಕ್ಸರ್, 1 ಬೌಂಡರಿ), ಅಂಬಟಿ ರಾಯುಡು 12 ರನ್ ಹಾಗೂ ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಶಿವಂ ದುಬೆ 25 ರನ್ (17 ಎಸೆತ, 3 ಸಿಕ್ಸರ್) ಚಚ್ಚಿದರು. ನಾಯಕ ಎಂ.ಎಸ್ ಧೋನಿ (MS Dhoni) 3 ಎಸೆತಗಳಲ್ಲಿ 2 ರನ್ ಗಳಿಸಿ ಅಜೇಯರಾಗುಳಿದರು.
ಮುಂಬೈ ಪರ ಪಿಯೂಷ್ ಚಾವ್ಲಾ 2 ವಿಕೆಟ್ ಕಿತ್ತರೆ, ಟ್ರಿಸ್ಟಾನ್ ಸ್ಟಬ್ಸ್ ಹಾಗೂ ಆಕಾಶ್ ಮಧ್ವಾಲ್ ತಲಾ ಒಂದೊಂದು ವಿಕೆಟ್ ಪಡೆದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನ ನೀಡಿತು. ಆರಂಭಿಕರಾಗಿ ಕಣಕ್ಕಿಳಿದ ಕ್ಯಾಮರೂನ್ ಗ್ರೀನ್ 6 ರನ್, ಇಶಾನ್ ಕಿಶನ್ 7 ರನ್ ಗಳಿಸಿ ಔಟಾಗುತ್ತಿದ್ದಂತೆ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತೆ ಡಕೌಟ್ ಆಗಿ ನಿರಾಸೆ ಅನುಭವಿಸಿದರು. ಮಧ್ಯಮ ಕ್ರಮಾಂಕದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ನೆಹಾಲ್ ವಧೇರಾ ಸಣ್ಣ ಜೊತೆಯಾಟ ನೀಡಿದರು. 46 ಎಸೆತಗಳಲ್ಲಿ ಈ ಜೋಡಿ 55 ರನ್ ಗಳಿಸಿತ್ತು. ಆದ್ರೆ ಸೂರ್ಯಕುಮಾರ್ (Suryakumar Yadav) ಔಟಾಗಿ ಮತ್ತೆ ನಿರಾಸೆ ಮೂಡಿಸಿದರು. ಏಕಾಂಗಿ ಹೋರಾಟ ನಡೆಸಿದ ನೆಹಾಲ್ ವಧೇರಾ (Nehal Wadhera) ಅರ್ಧಶತಕ ಗಳಿಸಿ ತಂಡಕ್ಕೆ ಆಸರೆಯಾದರು.
ಮುಂಬೈ ಪರ ನೆಹಾಲ್ ವಧೇರಾ 64 ರನ್ (51 ಎಸೆತ, 8 ಬೌಂಡರಿ, 1 ಸಿಕ್ಸರ್), ಸೂರ್ಯಕುಮಾರ್ ಯಾದವ್ 26 ರನ್ (22 ಎಸೆತ, 3 ಬೌಂಡರಿ), ಟ್ರಿಸ್ಟಾನ್ ಸ್ಟಬ್ಸ್ 20 ರನ್ (21 ಎಸೆತ, 2 ಬೌಂಡರಿ) ಗಳಿಸಿದ್ದು ಬಿಟ್ಟರೆ, ಉಳಿದ ಯಾರೊಬ್ಬರೂ 10 ರನ್ ಸಹ ಗಳಿಸದ್ದೇ ಇದ್ದದ್ದು ತಂಡದ ಸೋಲಿಗೆ ಕಾರಣವಾಯಿತು.
ಸಿಎಸ್‌ಕೆ ಪರ ಮಿಂಚಿನ ಬೌಲಿಂಗ್ ದಾಳಿ ನಡೆಸಿದ ಮಹೇಶ್ ಪತಿರಣ 3 ವಿಕೆಟ್ ಕಿತ್ತರೆ, ದೀಪಕ್ ಚಹಾರ್ ಹಾಗೂ ತುಷಾರ್ ದೇಶ್‌ಪಾಂಡೆ ತಲಾ 2 ವಿಕೆಟ್ ಹಾಗೂ ರವೀಂದ್ರ ಜಡೇಜಾ 1 ವಿಕೆಟ್ ಪಡೆದು ಮಿಂಚಿದರು.