ನವದೆಹಲಿ: ಭರ್ಜರಿ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ದಾಳಿ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings), ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 77 ರನ್‌ಗಳ ಭರ್ಜರಿ ಜಯ ಸಾಧಿಸಿ 2023ರ ಐಪಿಎಲ್ ಪ್ಲೇ ಆಫ್ (IPL Playoffs) ಪ್ರವೇಶಿಸಿದೆ. ಈ ಆವೃತ್ತಿಯಲ್ಲಿ ಕೊನೆಯ ಲೀಗ್ ಪಂದ್ಯವನ್ನಾಡಿದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಹೀನಾಯವಾಗಿ ಸೋತು ವಿದಾಯ ಹೇಳಿದೆ.
Advertisement
14ರ ಪೈಕಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ 17 ಅಂಕ ಪಡೆದು +0652 ರನ್‌ರೇಟ್‌ನೊಂದಿಗೆ ಚೆನ್ನೈ 2ನೇ ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಪ್ಲೇ ಆಫ್ ಪ್ರವೇಶಿಸಿದ 2ನೇ ತಂಡವಾಗಿದೆ.
Advertisement
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ 3 ವಿಕೆಟ್ ನಷ್ಟಕ್ಕೆ 223 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿ ಸೋಲೊಪ್ಪಿಕೊಂಡಿತು.
Advertisement
Advertisement
ಚೇಸಿಂಗ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಿಂದಲೇ ರನ್ ಕದಿಯಲು ಹೆಣಗಾಡುತ್ತಿತ್ತು. ಜೊತೆಗೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ನಾಯಕ ಡೇವಿಡ್ ವಾರ್ನರ್ (David Warner) ಅರ್ಧಶತಕ ಗಳಿಸಿದರೂ ನಿಧಾನಗತಿಯ ಬ್ಯಾಟಿಂಗ್‌ನಿಂದ ತಂಡವನ್ನು ಸೋಲಿನ ಸುಳಿಗೆ ತಳ್ಳಿದರು. ಅಂತಿಮವಾಗಿ ಡೆಲ್ಲಿ 146 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಇದನ್ನೂ ಓದಿ: RCB ಮ್ಯಾಚ್ ನೋಡಲು ಟಿಕೆಟ್ ಸಿಗದಿದ್ದಕ್ಕೆ ರೊಚ್ಚಿಗೆದ್ರು ಫ್ಯಾನ್ಸ್ – ದ್ರಾವಿಡ್ ಕಾರಿಗೆ ಮುತ್ತಿಗೆ
ಡೆಲ್ಲಿ ಪರ ಡೇವಿಡ್ ವಾರ್ನರ್ 86 ರನ್ (58 ಎಸೆತ, 5 ಸಿಕ್ಸರ್, 7 ಬೌಂಡರಿ) ಗಳಿಸಿ ಏಕಾಂಗಿ ಹೋರಾಟ ನಡೆಸಿದ್ದು ಬಿಟ್ಟರೆ, ಯಾರೊಬ್ಬರೂ ಸ್ಥಿರವಾಗಿ ನಿಲ್ಲದ ಕಾರಣ ಡೆಲ್ಲಿ ತಂಡ ಹೀನಾಯವಾಗಿ ಸೋಲಬೇಕಾಯಿತು. ಇದನ್ನೂ ಓದಿ: IPL 2023: ಸಂಜು ಸೈನ್ಯಕ್ಕೆ ಪ್ಲೇ ಆಫ್ ಕನಸು ಜೀವಂತ – ರಾಜಸ್ಥಾನ್‌ಗೆ 4 ವಿಕೆಟ್‌ಗಳ ರೋಚಕ ಜಯ
ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ತಂಡದ ಆರಂಭಿಕರು ಡೆಲ್ಲಿ ಬೌಲರ್‌ಗಳನ್ನ ಚೆಂಡಾಡಿದರು. ಋತುರಾಜ್ ಗಾಯಕ್ವಾಡ್ (Ruturaj Gaikwad) ಹಾಗೂ ಡಿವೋನ್ ಕಾನ್ವೆ (Devon Conway) ಜೋಡಿ ಮೊದಲ ವಿಕೆಟ್ ಪತನಕ್ಕೆ 14.3 ಓವರ್‌ಗಳಲ್ಲಿ 141 ರನ್ ಪೇರಿಸಿತ್ತು. ಇದರೊಂದಿಗೆ ಶಿವಂ ದುಬೆ, ರವೀಂದ್ರ ಜಡೇಜಾ ಅವರ ಸ್ಫೋಟಕ ಬ್ಯಾಟಿಂಗ್ ಸಹ ತಂಡದ ಬೃಹತ್ ಮೊತ್ತಕ್ಕೆ ಕಾರಣವಾಯಿತು.
ಸಿಎಸ್‌ಕೆ ಪರ ಋತುರಾಜ್ ಗಾಯಕ್ವಾಡ್ 79 ರನ್ (50 ಎಸೆತ, 7 ಸಿಕ್ಸರ್, 3 ಬೌಂಡರಿ), ಡಿವೋನ್ ಕಾನ್ವೆ 87 ರನ್ (52 ಎಸೆತ, 11 ಬೌಂಡರಿ, 3 ಸಿಕ್ಸರ್), ಶಿವಂ ದುಬೆ 22 ರನ್ (9 ಎಸೆತ, 3 ಸಿಕ್ಸರ್), ರವೀಂದ್ರ ಜಡೇಜಾ 20 ರನ್ (7 ಎಸೆತ, 3 ಬೌಂಡರಿ, 1 ಸಿಕ್ಸರ್) ಗಳಿಸಿದರೆ, ನಾಯಕ ಎಂ.ಎಸ್ ಧೋನಿ (MS Dhoni) 4 ಎಸೆತಗಳಲ್ಲಿ 5 ರನ್ ಗಳಿಸಿ ಅಜೇಯರಾಗುಳಿದರು.