ಅಹಮದಾಬಾದ್: ಶುಭಮನ್ ಗಿಲ್ (Shubman Gill), ವೃದ್ಧಿಮಾನ್ ಸಾಹಾ (Wriddhiman Saha) ಶತಕದ ಜೊತೆಯಾಟ ಹಾಗೂ ಸಂಘಟಿತ ಬೌಲಿಂಗ್ ದಾಳಿ ನೆರವಿನಿಂದ ಗುಜರಾತ್ ಟೈಟಾನ್ಸ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 56 ರನ್‌ಗಳ ಭರ್ಜರಿ ಜಯ ಸಾಧಿಸಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ (Gujarat Titans) 227 ರನ್ ಪೇರಿಸಿತು. 228 ರನ್‌ಗಳ ಬೃಹತ್ ಮೊತ್ತದ ಗುರಿ ಪಡೆದ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ನಯನತಾರಾ ದಂಪತಿ IPL ಕ್ರೇಜ್ – CSKಗೆ ಬಲ ತುಂಬಿದ ಲೇಡಿ ಸೂಪರ್ ಸ್ಟಾರ್
Advertisement
Advertisement
ಗೆಲುವಿಗೆ 228 ರನ್‌ಗಳ ಗುರಿ ಪಡೆದ ಲಕ್ನೋ ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಕೈಲ್ ಮೇಯರ್ಸ್ ಹಾಗೂ ಕ್ವಿಂಟನ್ ಡಿಕಾಕ್ 8.2 ಓವರ್‌ಗಳಲ್ಲಿ 88 ರನ್‌ಗಳ ಜೊತೆಯಾಟವಾಡಿದ್ದರು. ಈ ಜೋಡಿ ವಿಕೆಟ್ ಕಳೆದುಕೊಳ್ಳುತ್ತಿದ್ದಂತೆ ರನ್ ವೇಗವೂ ಕಡಿಮೆಯಾಯಿತು. ಅಂತಿಮವಾಗಿ ಲಕ್ನೋ 171 ರನ್ ಗಳಿಸಲಷ್ಟೇ ಸಾಧ್ಯವಾಯಿತು.
Advertisement
ಲಕ್ನೋ ಪರ ಕ್ವಿಂಟನ್ ಡಿಕಾಕ್ 70 ರನ್ (41 ಎಸೆತ, 7 ಬೌಂಡರಿ, 3 ಸಿಕ್ಸರ್), ಕೈಲ್ ಮೇಯರ್ಸ್ 48 ರನ್ (32 ಎಸೆತ, 7 ಬೌಂಡರಿ, 2 ಸಿಕ್ಸರ್), ದೀಪಕ್ ಹೂಡಾ 11 ರನ್, ಆಯುಷ್ ಬದೋನಿ 21 ರನ್ ಗಳಿಸಿದರು. ಇದನ್ನೂ ಓದಿ: ಐಪಿಎಲ್ ಅಖಾಡದಲ್ಲಿ ಪಾಂಡ್ಯ ಸಹೋದರರ ಸವಾಲ್ – ಯಾರಿಗೆ ಒಲಿಯಲಿದೆ ಜಯದ ಕಿರೀಟ?
Advertisement
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿ ಗುಜರಾತ್ ಟೈಟಾನ್ಸ್ ತಂಡ ಸ್ಫೋಟಕ ಪ್ರದರ್ಶನ ನೀಡಿತು. ಆರಂಭಿಕ ಆಟಗಾರರಾದ ಶುಭಮನ್ ಗಿಲ್ ಹಾಗೂ ವೃದ್ಧಿಮಾನ್ ಸಾಹಾ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ, ಸಿಕ್ಸರ್, ಬೌಂಡರಿಗಳ ಮಳೆ ಸುರಿಸಿದರು. ಮೊದಲ ವಿಕೆಟ್‌ಗೆ ಈ ಜೋಡಿ 12.1 ಓವರ್‌ಗಳಲ್ಲಿ ಬರೋಬ್ಬರಿ 142 ರನ್‌ಗಳಿಸಿತು. ಸಾಹಾ ಕೇವಲ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿ 81 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಮತ್ತೊಂದೆಡೆ ಶುಭಮನ್ ಗಿಲ್ ಕೊನೆಯವರೆಗೂ ವಿಕೆಟ್ ಕಳೆದುಕೊಳ್ಳದೆ ತಂಡದ ಮೊತ್ತವನ್ನು ಹೆಚ್ಚಿಸಿದರು.
ಹಾರ್ದಿಕ್ ಪಾಂಡ್ಯ 15 ಎಸೆತಗಳಲ್ಲಿ 25 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ನಂತರ ಡೇವಿಡ್ ಮಿಲ್ಲರ್ ಕೂಡ ಸ್ಫೋಟಕ ಪ್ರದರ್ಶನ ನೀಡಿದರು. ಮಿಲ್ಲರ್ 12 ಎಸೆತಗಳನ್ನು ಎದುರಿಸಿ 21 ರನ್‌ಗಳಿಸಿ ಅಜೇಯರಾಗುಳಿದರು. ಇನ್ನೂ ಆರಂಭದಿಂದ ಕೊನೆಯವರೆಗೂ ಲಕ್ನೋ ಸೂಪರ್ ಜೈಂಟ್ಸ್ ಬೌಲರ್‌ಗಳನ್ನು ಚೆಂಡಾಡಿದ ಗಿಲ್ ಅಜೇಯ 94 ರನ್ (2 ಬೌಂಡರಿ, 7 ಸಿಕ್ಸರ್) ಗಳಿಸಿದರು.
ಗುಜರಾತ್ ಟೈಟಾನ್ಸ್ ಪರ ಮೋಹಿತ್ ಶರ್ಮಾ 4 ವಿಕೆಟ್ ಕಿತ್ತರೆ, ಮೊಹಮ್ಮದ್ ಶಮಿ, ರಶೀದ್ ಖಾನ್, ನೂರ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು.