– ಕೆಕೆಆರ್‌ಗೆ ತವರಿನಲ್ಲಿ ಜಯದ ಶುಭಾರಂಭ
ಕೋಲ್ಕತ್ತಾ: ಆಲ್‌ರೌಂಡರ್ ಶಾರ್ದೂಲ್ ಠಾಕೂರ್ (Shardul Thakur) ಬೆಂಕಿ ಬ್ಯಾಟಿಂಗ್ ಹಾಗೂ ಶಿಸ್ತುಬದ್ಧ ಬೌಲಿಂಗ್ ದಾಳಿ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತವರಿನಲ್ಲಿ ಆರ್‌ಸಿಬಿ ವಿರುದ್ಧ 81 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 16ನೇ ಆವೃತ್ತಿಯ ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆದಿದೆ.
ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 2ನೇ ಪಂದ್ಯದಲ್ಲೇ ಹೀನಾಯವಾಗಿ ಸೋತು ತೀವ್ರ ಮುಖಭಂಗ ಅನುಭವಿಸಿದೆ.
Advertisement
Advertisement
ಈಡನ್ ಗಾರ್ಡನ್‌ನಲ್ಲಿ ಅಂಗಳದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿತ್ತು. 205 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ಕಳಪೆ ಬ್ಯಾಟಿಂಗ್‌ನಿಂದ 17.4 ಓವರ್‌ಗಳಲ್ಲೇ 123 ರನ್‌ಗಳಿಗೆ ಸರ್ವಪತನ ಕಂಡಿತು.
Advertisement
ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (Faf du Plessis) ಹಾಗೂ ವಿರಾಟ್ ಕೊಹ್ಲಿ (Virat Kohli) ಉತ್ತಮ ಆರಂಭ ನೀಡಿದ್ದರು. 4.5 ಓವರ್‌ಗಳಲ್ಲಿ ಈ ಜೋಡಿ 44 ರನ್ ಕಲೆಹಾಕಿತ್ತು. ಅಷ್ಟರಲ್ಲೇ ವಿರಾಟ್ ಕೊಹ್ಲಿ 21 ರನ್ (18 ಎಸೆತ, 3 ಬೌಂಡರಿ) ಗಳಿಸಿ ಔಟಾದರು. ಈ ಬೆನ್ನಲ್ಲೇ 23 (12 ಎಸೆತ, 2 ಸಿಕ್ಸರ್, 2 ಬೌಂಡರಿ) ರನ್ ಗಳಿಸಿದ್ದ ಸಹ ವಿಕೆಟ್ ಒಪ್ಪಿಸಿದರು.
Advertisement
ವಿರಾಟ್, ಡುಪ್ಲೆಸಿಸ್ ಜೋಡಿ ವಿಕೆಟ್ ಬೀಳುತ್ತಿದ್ದಂತೆ ಕೆಕೆಆರ್ ಬೌಲರ್‌ಗಳ ಅಬ್ಬರಕ್ಕೆ ನಲುಗಿದ ಆರ್‌ಸಿಬಿ ತಂಡ ಒಂದೊಂದೆ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. ಪರಿಣಾಮ ತಂಡ ಹೀನಾಯ ಸೋಲಿನತ್ತ ಮುಖ ಮಾಡಿತು. ಅಂತಿಮವಾಗಿ ಆರ್‌ಸಿಬಿ 17.4 ಓವರ್‌ಗಳಲ್ಲಿ 123 ರನ್ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡರು.
ಕೆಕೆಆರ್ ಪರ ಮಿಂಚಿನ ಬೌಲಿಂಗ್ ದಾಳಿ ನಡೆಸಿದ ವರುಣ್ ಚಕ್ರವರ್ತಿ (Varun Chakravarthy) 3.4 ಓವರ್‌ಗಳಲ್ಲಿ 4 ವಿಕೆಟ್ ಕಿತ್ತರೆ, ಸುಯಶ್ ಶರ್ಮಾ 3 ವಿಕೆಟ್, ಸುನೀಲ್ ನರೇನ್ (Sunil Narine) 2 ವಿಕೆಟ್ ಹಾಗೂ ಶಾರ್ದೂಲ್ ಠಾಕೂರ್ 1 ವಿಕೆಟ್ ಪಡೆದು ಮಿಂಚಿದರು.
ಮೊದಲು ಟಾಸ್ ಸೋತು ಬ್ಯಾಟಿಂಗ್ ಇಳಿದ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ರಹಮಾನುಲ್ಹಾ ಗುರ್ಬಾಜ್ ಉತ್ತಮ ಆರಂಭ ನೀಡಿದರೆ, ಮತ್ತೊಂದೆಡೆ ವಿಕೆಟ್ ಪತನ ಆರಂಭಗೊಂಡಿತು. ವೆಂಕಟೇಶ್ ಅಯ್ಯರ್ ಕೇವಲ 3 ರನ್ ಸಿಡಿಸಿ ಔಟಾದರು. ಇತ್ತ ಮನ್ದೀಪ್ ಸಿಂಗ್ ಡಕೌಟ್ ಆದರು ಇದರಿಂದ ಕೆಕೆಆರ್ 26 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿತ್ತು. ನಾಯಕ ನಿತೀಶ್ ರಾಣಾ ಕೇವಲ 1 ರನ್ ಸಿಡಿಸಿ ಔಟಾದರು. ಬಳಿಕ ರಿಂಕು ಸಿಂಗ್ ಜೊತೆ ಬ್ಯಾಟಿಂಗ್ ಮುಂದುವರಿಸಿದ ಗುರ್ಬಾಜ್ ಅರ್ಧ ಶತಕ ಸಿಡಿಸಿ ಮಿಂಚಿದರು.
ಗುರ್ಬಾಜ್ 44 ರನ್‌ಗೆ 57 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ಆ್ಯಂಡ್ರೆ ರೆಸೆಲ್ ವಿಕೆಟ್ ಪತನಗೊಂಡಿತು. ರಸೆಲ್ ವಿಕೆಟ್ ಪತನದ ನಂತರ ಕೆಕೆಆರ್ ತಂಡಕ್ಕೆ ತೀವ್ರ ಆಘಾತ ನೀಡಿತು. ಕೊನೆಯಲ್ಲಿ ರಿಂಕು ಸಿಂಗ್ ಹಾಗೂ ಶಾರ್ದೂಲ್ ಠಾಕೂರ್ ಜೊತೆಯಾಟ ಕೆಕೆಆರ್ ತಂಡಕ್ಕೆ ಹೊಸ ಚೈತನ್ಯ ನೀಡಿತು. ಆರ್‌ಸಿಬಿ ಬೌಲರ್‌ಗಳನ್ನು ಬೆಂಡೆತ್ತಿದ್ದ ಶಾರ್ದೂಲ್ ಠಾಕೂರ್ ಕೇವಲ 20 ಎಸೆತಗಳಲ್ಲಿ 50 ರನ್ ಚಚ್ಚಿ ಮಿಂಚಿದರು. 29 ಎಸೆತಗಳಲ್ಲಿ ಬರೋಬ್ಬರಿ 68 ರನ್ (9 ಬೌಂಡರಿ, 3 ಸಿಕ್ಸರ್) ಸಿಡಿಸಿದ್ದರು.
ಇದರಿಂದ ಅಲ್ಪ ಮೊತ್ತಕ್ಕೆ ಕಟ್ಟಿಹಾಕುವ ಲೆಕ್ಕಾಚಾರದಲ್ಲಿದ್ದ ಆರ್‌ಸಿಬಿ ಪಂದ್ಯದ ಮೇಲೆ ನಿಯಂತ್ರಣ ಕಳೆದುಕೊಂಡಿತು. ಇದರ ನಡುವೆ ರಿಂಕು ಸಿಂಗ್ 33 ಎಸೆತದಲ್ಲಿ 46 ರನ್ (2 ಬೌಂಡರಿ, 3 ಸಿಕ್ಸರ್) ಸಿಡಿಸಿ ನಿರ್ಗಮಿಸಿದರು. 45 ಎಸೆತಗಳಲ್ಲಿ 6ನೇ ವಿಕೆಟ್‌ಗೆ ಈ ಜೋಡಿ 102 ರನ್ ಚಚ್ಚಿದ ಪರಿಣಾಮ ಕೋಲ್ಕತ್ತಾ ದೊಡ್ಡ ಮೊತ್ತ ಕಲೆ ಹಾಕಿತು. ಅಂತಿಮವಾಗಿ ಕೆಕೆಆರ್ 7 ವಿಕೆಟ್ ನಷ್ಟಕ್ಕೆ 204 ರನ್ ಸಿಡಿಸಿತು.