ಮಂಬೈ: ನಾಯಕ ರೋಹಿತ್ ಶರ್ಮಾ (Rohit Sharma) ಭರ್ಜರಿ ಅರ್ಧ ಶತಕ ಹಾಗೂ ಸಂಘಟಿತ ಬೌಲಿಂಗ್ ದಾಳಿ ನೆರವಿನಿಂದ ಮುಂಬೈ ಇಂಡಿಯನ್ಸ್ (Mumbai Indians) ತಂಡವು ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ 2023 ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆದಿದೆ. ಆದರೆ ಡೆಲ್ಲಿ ಸತತ 4ನೇ ಸೋಲಿನೊಂದಿಗೆ ಮುಖಭಂಗ ಅನುಭವಿಸಿದೆ.
Advertisement
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.4 ಓವರ್‌ಗಳಲ್ಲಿ 172 ರನ್ ಗಳಿಸಿ ಸರ್ವಪತನ ಕಂಡಿತು. 173 ರನ್ ಗುರಿ ಬೆನ್ನತ್ತಿದ್ದ ಮುಂಬೈ ಇಂಡಿಯನ್ಸ್ ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿ ಗೆಲುವು ಸಾಧಿಸಿತು. ಇದನ್ನೂ ಓದಿ: IPL 2023: ಸೋಲಿನ ಬೆನ್ನಲ್ಲೇ RCBಗೆ ಶಾಕ್ – ನಾಯಕ ಡುಪ್ಲೆಸಿಸ್‌ಗೆ 12 ಲಕ್ಷ ದಂಡ
Advertisement
Advertisement
ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ 45 ಎಸೆತಗಳಲ್ಲಿ 65 ರನ್ (6 ಬೌಂಡರಿ, 4 ಸಿಕ್ಸರ್), ಇಶಾನ್ ಕಿಶನ್ 31 ರನ್ ಹಾಗೂ ತಿಲಕ್ ವರ್ಮಾ 29 ಎಸೆತಗಳಲ್ಲಿ 4 ಸಿಕ್ಸರ್, 1 ಬೌಂಡರಿ ನೆರವಿನೊಂದಿಗೆ 41 ರನ್ ಗಳಿಸುವ ಮೂಲಕ ತಂಡಕ್ಕೆ ಜಯ ತಂದುಕೊಡುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ಸಿಕ್ಸರ್, ಬೌಂಡರಿಗಳಿಂದಲೇ 50 ರನ್ – ಇಬ್ಬರು ವಿಶೇಷ ವ್ಯಕ್ತಿಗಳಿಗೆ ಅರ್ಧಶತಕ ಅರ್ಪಿಸಿದ ಪೂರನ್
Advertisement
ಇನ್ನೂ ಡೆಲ್ಲಿ ಕ್ಯಾಪಿಟಲ್ಸ್ ಪರ ಡೇವಿಡ್ ವಾರ್ನರ್ (David Warner) ಮಂದಗತಿಯ ಬ್ಯಾಟಿಂಗ್ ನಡೆಸಿ 47 ಎಸೆತಗಳಲ್ಲಿ 51 ರನ್ ಗಳಿಸಿದರೆ, ಕೊನೆಯಲ್ಲಿ ಅಕ್ಷರ್ ಪಟೇಲ್ (Axar Patel) 25 ಎಸೆತಗಳಲ್ಲಿ ಸ್ಫೋಟಕ 54 ರನ್ (5 ಸಿಕ್ಸರ್, 4 ಬೌಂಡರಿ) ಚಚ್ಚಿ ತಂಡದ ಮೊತ್ತ 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.
ಮುಂಬೈ ಇಂಡಿಯನ್ಸ್ ಪರ ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್ಡಾರ್ಫ್ ತಲಾ ಮೂರು ವಿಕೆಟ್ ಕಿತ್ತರೆ, ರಿಲೆ ಮೆರೆಡಿತ್ 2 ವಿಕೆಟ್, ಹೃತಿಕ್ ಶೋಕೀನ್ ಒಂದು ವಿಕೆಟ್ ಕಿತ್ತರು. ಇನ್ನೂ ಡೆಲ್ಲಿ ಪರ ಮುಕೇಶ್ ಕುಮಾರ್ 2 ವಿಕೆಟ್ ಕಿತ್ತರೆ ಮುಸ್ತಫರ್ ರೆಹ್ಮಾನ್ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.