ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಸ್ಟ್ 23 ರಂದು ಉಕ್ರೇನ್‌ಗೆ (Ukraine) ಭೇಟಿ ನೀಡುವ ಸಾಧ್ಯತೆಯಿದೆ.
ರಷ್ಯಾ (Russia) ಜೊತೆಗಿನ ಯುದ್ಧದ ನಂತರ ಉಕ್ರೇನ್‌ಗೆ ಮೊದಲ ಬಾರಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಈ ಹಿಂದೆ ಒಂದು ತಿಂಗಳ ಹಿಂದೆ ಇಟಲಿಯಲ್ಲಿ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಝೆಲೆನ್ಸ್ಕಿ ಅವರನ್ನು ಭೇಟಿಯಾಗಿದ್ದರು. ಇದನ್ನೂ ಓದಿ: ಬೆಂಗಳೂರು ಪಿಜಿಯಲ್ಲಿ ಯುವತಿಯ ಹತ್ಯೆ – ತಲೆಮರೆಸಿಕೊಂಡಿದ್ದ ಆರೋಪಿ ಮಧ್ಯಪ್ರದೇಶದಲ್ಲಿ ಅರೆಸ್ಟ್
ಪ್ರಧಾನಿ ನರೇಂದ್ರ ಮೋದಿ ಅವರು 22 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಪುಟಿನ್ (Vladimir Putin) ಅವರ ಆಹ್ವಾನದ ಮೇರೆಗೆ ಜುಲೈ 8 ರಂದು ಎರಡು ದಿನಗಳ ಭೇಟಿಗಾಗಿ ಮಾಸ್ಕೋಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ, ಪರಮಾಣು ಶಕ್ತಿ ಮತ್ತು ಹಡಗು ನಿರ್ಮಾಣ ಸೇರಿದಂತೆ ವಿವಿಧ ವಲಯಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಎರಡೂ ದೇಶಗಳು ಒಪ್ಪಿಕೊಂಡಿದ್ದವು. ಈ ವೇಳೆ ಮೋದಿಯವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಗೌರವವನ್ನು ಪುಟಿನ್ ನೀಡಿ ಗೌರವಿಸಿದ್ದರು.
ರಷ್ಯಾಗೆ ಭೇಟಿ ನೀಡಿದ ಒಂದೇ ತಿಂಗಳ ಅಂತರದಲ್ಲಿ ಮೋದಿ ಅವರು ಉಕ್ರೇನ್ ಭೇಟಿ ನೀಡುತ್ತಿರುವುದು ಕುತೂಹಲ ಮೂಡಿಸಿದೆ.