ಕೋಪನ್‌ಹೇಗನ್: ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ್ದ ಪ್ರಧಾನಿ ನರೇಂದ್ರ ಮೋದಿ, ಉಕ್ರೇನ್‌ನಲ್ಲಿ ನಡೆಯುತ್ತಿರುವ ನಾಗರಿಕರ ಹತ್ಯೆಗಳ ಬಗ್ಗೆ ಕಳಕಳಿ ವ್ಯಕ್ತಪಡಿಸಿದ್ದು, ಉಭಯ ರಾಷ್ಟ್ರಗಳು ಬಿಕ್ಕಟ್ಟು ಪರಿಹರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
Advertisement
ಉಕ್ರೇನ್‌ನಲ್ಲಿ ತಕ್ಷಣ ಕದನ ವಿರಾಮ ಘೋಷಿಸಿ ಉಭಯ ದೇಶಗಳು ಮಾತುಕತೆಯ ಮೂಲಕ ಬಿಕ್ಕಟ್ಟು ಪರಿಹರಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಇದೇ ವೇಳೆ ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟುಗಳ ಬಗ್ಗೆ ಚರ್ಚೆ ನಡೆಸಿ, ವಿಶ್ವಸಂಸ್ಥೆಯ ಚಾರ್ಟರ್‌ನಲ್ಲಿ ತಿಳಿಸಿದಂತೆ ಮಾತುಕತೆಯ ಬಿಕ್ಕಟ್ಟನ್ನು ಪರಿಹರಿಸಲು ಉಭಯ ದೇಶಗಳು ಮುಂದಾಗಬೇಕು ಎಂದು ಕರೆ ನೀಡಿದರು.
Advertisement
Grateful to the Indian community in Denmark for their warm reception. Addressing a programme in Copenhagen. https://t.co/PCjwh3ZM9p
— Narendra Modi (@narendramodi) May 3, 2022
Advertisement
ಯುದ್ಧದಲ್ಲಿ ಯಾರೂ ಗೆದ್ದಿಲ್ಲ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಯಾವುದೂ ಗೆದ್ದಿಲ್ಲ. ಯುದ್ಧವನ್ನು ಶಾಂತಿಯುತವಾಗಿ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ಉಕ್ರೇನ್ ಸಂಘರ್ಷದಿಂದಾಗಿ ತೈಲ ಬೆಲೆಗಳು ಗಗನಕ್ಕೇರುತ್ತಿವೆ ಮತ್ತು ವಿಶ್ವದ ಅನೇಕ ಭಾಗಗಳಲ್ಲಿ ಆಹಾರ ಧಾನ್ಯಗಳು ಮತ್ತು ರಸಗೊಬ್ಬರಗಳ ಕೊರತೆಯಿದೆ. ಇದು ಅಭಿವೃದ್ಧಿಶೀಲ ಮತ್ತು ಬಡ ರಾಷ್ಟ್ರಗಳ ಬೆಳವಣಿಗೆಗಳ ಮೇಲೆ ಹೆಚ್ಚು ಪರಿಣಾಮ ಬೀರುವ ಗಂಭೀರ ವಿಚಾರವಾಗಿದೆ ಎಂದು ಆತಂಕಪಟ್ಟಿದ್ದರು.