ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲಿಟ್ಜರ್ ವಿಜೇತೆ, ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಪ್ಯಾರಿಸ್‌ಗೆ ಹೋಗಬೇಕಿತ್ತು. ಆದರೆ ದೆಹಲಿಯಲ್ಲಿ ತಮ್ಮನ್ನು ವಿಮಾನ ಹತ್ತಲು ಅಧಿಕಾರಿಗಳು ಬಿಡಲಿಲ್ಲ ಎಂಬುದಾಗಿ ಆರೋಪ ಹೊರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಟ್ಟೂ, ತಮ್ಮ ಬೋರ್ಡಿಂಗ್ ಪಾಸ್ ಹಾಗೂ ಪಾಸ್‌ಪೋರ್ಟ್‌ನ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅದರ ಮೇಲೆ ಪೂರ್ವಾಗ್ರಹವಿಲ್ಲದೇ ರದ್ದುಗೊಳಿಸಲಾಗಿದೆ(ಕ್ಯಾನ್ಸಲ್ಡ್ ವಿದೌಟ್ ಪ್ರೆಜುಡೈಸ್) ಎಂದು ಕೆಂಪು ಶಾಯಿಯಲ್ಲಿ ಮುದ್ರಿಸಲಾಗಿದೆ. ಆದರೆ ತಮಗೆ ಪ್ಯಾರಿಸ್‌ಗೆ ಹೋಗಲು ಏಕೆ ಬಿಡಲಿಲ್ಲ ಎಂಬ ಪ್ರಶ್ನೆಗೆ ಅಧಿಕಾರಿಗಳು ಯಾವುದೇ ಉತ್ತರ ನೀಡಲಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಳ್ಳ ಮಾರ್ಗದಲ್ಲಿ ಹಣ ಸಂಪಾದಿಸುವವರು ಸುಳ್ಳಿನ ಪುಸ್ತಕವನ್ನು ಬಿಡುಗಡೆ ಮಾಡುತ್ತಾರೆ: ಸಿದ್ದುಗೆ ತಿರುಗೇಟು ನೀಡಿದ ಜೋಶಿ
Advertisement
I was scheduled to travel from Delhi to Paris today for a book launch and photography exhibition as one of 10 award winners of the Serendipity Arles grant 2020. Despite procuring a French visa, I was stopped at the immigration desk at Delhi airport. (1/2) pic.twitter.com/OoEdBBWNw6
— Sanna Irshad Mattoo (@mattoosanna) July 2, 2022
Advertisement
ನಾನು ಸೆರೆಂಡಿಪಿಟಿ ಆರ್ಲೆಸ್ ಅನುದಾನದ 2022ರ 10 ಪ್ರಶಸ್ತಿ ವಿಜೇತರಲ್ಲಿ ಒಬ್ಬಳಾಗಿ, ಪುಸ್ತಕ ಬಿಡುಗಡೆ ಹಾಗೂ ಛಾಯಾಗ್ರಹಣ ಪ್ರದರ್ಶನಕ್ಕಾಗಿ ಇಂದು ದೆಹಲಿಯಿಂದ ಪ್ಯಾರಿಸ್‌ಗೆ ಪ್ರಯಾಣಿಸಲು ನಿರ್ಧರಿಸಿದ್ದೆ. ನನ್ನ ಬಳಿ ಫ್ರೆಂಚ್ ವೀಸಾ ಇದ್ದರೂ ನನ್ನನ್ನು ದೆಹಲಿ ವಿಮಾನ ನಿಲ್ದಾಣದ ಇಮಿಗ್ರೇಷನ್ ಡೆಸ್ಕ್‌ನಲ್ಲಿ ನಿಲ್ಲಿಸಲಾಯಿತು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Advertisement
ಯಾವುದೇ ಕಾರಣವಿಲ್ಲದೇ ನನ್ನ ಪ್ರಯಾಣವನ್ನು ರದ್ದುಗೊಳಿಸಲಾಗಿದೆ ಎಂದು ಮಟ್ಟೂ ಆರೋಪಿಸಿದ್ದರೂ ಅವರ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿಗಾ ಇರಿಸುವಂತೆ ಸುತ್ತೋಲೆ ಹೊರಡಿಸಿದೆ. ಹೀಗಾಗಿ ಅವರ ವಿದೇಶ ಪ್ರಯಾಣವನ್ನು ತಡೆಯಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಭಾರೀ ಮಳೆಯಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧ – ರಾಜ್ಯದ ವಿವಿಧೆಡೆ ಭೂಕುಸಿತ, ಭೂಮಿ ಕಂಪಿಸಿದ ಅನುಭವ
Advertisement
ಜಮ್ಮು ಮತ್ತು ಕಾಶ್ಮೀರದ ಪತ್ರಕರ್ತರ ಸಂಘ ಪುಲಿಟ್ಜರ್ ವಿಜೇತೆಯ ವಿದೇಶ ಪ್ರಯಾಣವನ್ನು ರದ್ದುಗೊಳಿಸಿರುವ ಕ್ರಮವನ್ನು ಖಂಡಿಸಿದೆ. ಪ್ರಯಾಣ ನಿರ್ಬಂಧದ ಹೆಸರಿನಲ್ಲಿ ಹಲವಾರು ಜನರ ಅವಕಾಶಗಳನ್ನು ಕಸಿದುಕೊಂಡಿದೆ ಎಂದು ಕಾಶ್ಮೀರದ ಜರ್ನಲಿಸ್ಟ್ ಫೆಡರೇಶನ್ ಟ್ವೀಟ್ ಮಾಡಿದೆ.