ಮುಂಬೈ: ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ (T20 World Cup 2024) ಟೂರ್ನಿಗೆ ತಂಡಗಳನ್ನು ಪ್ರಕಟಿಸಲು ಅಂತಿಮ ದಿನಾಂಕ ನಿಗದಿಯಾಗಿದೆ. ಹೀಗಾಗಿ ಶೀಘ್ರದಲ್ಲೇ ಬಿಸಿಸಿಐ (BCCI) ಭಾರತ ತಂಡವನ್ನು ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.
ಟಿ20 ವಿಶ್ವಕಪ್ ಟೂರ್ನಿಗೆ ತಂಡವನ್ನು ಪ್ರಕಟಿಸಲು ಮೇ 31 ಕೊನೆಯದಿನವಾಗಿದೆ. ಆದ್ದರಿಂದ ಇಂಗ್ಲೆಂಡ್ (England) ವಿರುದ್ಧ ಅಂತಿಮ ಟೆಸ್ಟ್ ಪಂದ್ಯ ಮುಗಿಯುತ್ತಿದ್ದಂತೆ ಬಿಸಿಸಿಐ ತಂಡ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದನ್ನೂ ಓದಿ: T20 World Cup 2024 ವೇಳಾಪಟ್ಟಿ ಬಿಡುಗಡೆ; ಜೂ.9ಕ್ಕೆ ನ್ಯೂಯಾರ್ಕ್‌ನಲ್ಲಿ ಇಂಡೋ-ಪಾಕ್ ಕದನ
Advertisement
Advertisement
ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಈಗಾಗಲೇ ಹೇಳಿದ್ದಾರೆ. ರೋಹಿತ್ ನಾಯಕತ್ವದಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಗೆಲ್ಲಲಿದೆ, ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Advertisement
ಈಗಾಗಲೇ ವಿಶ್ವಕಪ್ ವೇಳಾಪಟ್ಟಿ ಪ್ರಕಟಗೊಂಡಿದ್ದು, ವೆಸ್ಟ್ ಇಂಡೀಸ್ (West Indies) ಮತ್ತು ಅಮೆರಿಕದ (USA) ಆತಿಥ್ಯದಲ್ಲಿ ಜೂನ್ 1 ರಿಂದ ಜೂನ್ 29ರ ವರೆಗೆ ನಡೆಯಲಿದೆ. ಈ ಬಾರಿ ತಂಡಗಳ ಅಂಖ್ಯೆಯನ್ನು 16 ರಿಂದ 20ಕ್ಕೆ ತಂಡಗಳ ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಸೂಪರ್-12 ಹಂತವನ್ನು ಸೂಪರ್-8ಗೆ ಇಳಿಸಲಾಗಿದೆ. ಸೂಪರ್-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ.
Advertisement
ಜೂನ್ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್ 19 ರಿಂದ 24ರ ವರೆಗೆ ಸೂಪರ್-8 ಪಂದ್ಯಗಳು, ಜೂನ್ 26 ಮತ್ತು ಜೂನ್ 27 ರಂದು ಸೆಮಿಫೈನಲ್ ಪಂದ್ಯಗಳು ನಡಯೆಲಿದ್ದು, ಜೂನ್ 29ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಇದನ್ನೂ ಓದಿ: WPL 2024: ಆರ್‌ಸಿಬಿಯಲ್ಲಿ ಲೇಡಿ ʻಎಬಿಡಿʼ – ಸೋಶಿಯಲ್ ಮೀಡಿಯಾದಲ್ಲಿ ಫುಲ್ ಟ್ರೆಂಡ್!
ಯಾವ ಗುಂಪಿನಲ್ಲಿ-ಯಾವ ತಂಡಗಳು?
ಗುಂಪು-ಎ: ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ಯುಎಸ್‌ಎ
ಗ್ರೂಪ್-ಬಿ: ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್‌ಲೆಂಡ್, ಒಮನ್
ಗ್ರೂಪ್-ಸಿ: ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ, ಉಗಾಂಡ, ಪಪುವಾ ನ್ಯೂ ಗಿನಿಯಾ
ಗ್ರೂಪ್-ಡಿ: ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್, ನೇಪಾಳ