– ವಿದ್ಯಾರ್ಥಿಗಳು ಮನೆಯೊಳಗೆ ಇರುವಂತೆ ಭಾರತ ಸಲಹೆ
ಬಿಷ್ಕೆಕ್: ಕಿರ್ಗಿಸ್ತಾನ್‌ನಲ್ಲಿರುವ (Kyrgyzstan) ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯುತ್ತಿದೆ. ಅಲ್ಲಿರುವ ಭಾರತೀಯ ನಾಗರಿಕರಿಗೆ ಮನೆಯೊಳಗೆ ಇರುವಂತೆ ಭಾರತ ಒತ್ತಾಯಿಸಿದೆ.
Advertisement
ಹಲವಾರು ಪಾಕಿಸ್ತಾನಿ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌ನಲ್ಲಿ ಗುಂಪು ಹಿಂಸಾಚಾರದಲ್ಲಿ ಗಾಯಗೊಂಡ ನಂತರ ಈ ಸಲಹೆಯನ್ನು ನೀಡಲಾಗಿದೆ. ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ ಸೌದಿಯಲ್ಲಿ ನಡೆಯಿತು ಸ್ವಿಮ್ ಸೂಟ್ ಫ್ಯಾಶನ್ ಶೋ!
Advertisement
Statement issued by the Ministry of Foreign Affairs of the Kyrgyz Republic on the current incidents in Bishkek. pic.twitter.com/vt1FEwGVka
— India in Kyrgyz Republic (@IndiaInKyrgyz) May 18, 2024
Advertisement
‘ನಾವು ನಮ್ಮ ವಿದ್ಯಾರ್ಥಿಗಳೊಂದಿಗೆ (Indian Students) ಸಂಪರ್ಕದಲ್ಲಿದ್ದೇವೆ. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ. ಆದರೆ ವಿದ್ಯಾರ್ಥಿಗಳು ಸದ್ಯಕ್ಕೆ ಮನೆಯೊಳಗೆ ಇರಲು ಮತ್ತು ಯಾವುದೇ ಸಮಸ್ಯೆಯ ಸಂದರ್ಭದಲ್ಲಿ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸಲಹೆ ನೀಡಲಾಗಿದೆ. ಸಹಾಯವಾಣಿ ಸಂಖ್ಯೆ 0555710041 ಸಂಪರ್ಕಿಸಬಹುದು’ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
Advertisement
ಬಿಷ್ಕೆಕ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ವರದಿಯಾಗಿದೆ. ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿ ಎಂದು ಜೈಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಟೆಪ್‌ಲ್ಯಾಡರ್ ಎಡವಟ್ಟು- ವಿಮಾನದಿಂದ ಇಳಿಯಲು ಯತ್ನಿಸಿ ಕೆಳಗೆ ಬಿದ್ದ ಸಿಬ್ಬಂದಿ ವೀಡಿಯೋ ವೈರಲ್
ದಾಳಿಯಲ್ಲಿ ಮೂವರು ಪಾಕಿಸ್ತಾನಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಪೋಸ್ಟ್‌ಗಳು ಹರಿದಾಡುತ್ತಿವೆ. ಆದರೆ ಅಧಿಕೃತವಾಗಿ ಯಾವುದೇ ಸಾವಿನ ವರದಿ ಇನ್ನೂ ಬಂದಿಲ್ಲ ಎಂದು ಸರ್ಕಾರ ಹೇಳಿದೆ.
ಮೇ 13 ರಂದು ಕಿರ್ಗಿಜ್ ಮತ್ತು ಈಜಿಪ್ಟ್ ವಿದ್ಯಾರ್ಥಿಗಳ ನಡುವಿನ ಹೊಡೆದಾಟದ ವೀಡಿಯೋಗಳು ಶುಕ್ರವಾರ ಆನ್‌ಲೈನ್‌ನಲ್ಲಿ ವೈರಲ್ ಆದ ನಂತರ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ ಎಂದು ಪಾಕಿಸ್ತಾನ ರಾಯಭಾರ ಕಚೇರಿ ತಿಳಿಸಿದೆ.
ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ವಿದ್ಯಾರ್ಥಿಗಳು ವಾಸಿಸುವ ಬಿಷ್ಕೆಕ್‌ನಲ್ಲಿರುವ ವೈದ್ಯಕೀಯ ವಿಶ್ವವಿದ್ಯಾಲಯಗಳ ಹಾಸ್ಟೆಲ್‌ಗಳನ್ನು ಗುಂಪು ಗುರಿಯಾಗಿಸಿತ್ತು. ದಾಳಿಯಲ್ಲಿ ಯಾವುದೇ ಭಾರತೀಯ ವಿದ್ಯಾರ್ಥಿಗಳು ಗಾಯಗೊಂಡಿಲ್ಲ.