ನವದೆಹಲಿ: ವಿಶ್ವವಿದ್ಯಾಲಯಗಳ ಘಟಿಕೋತ್ಸವ ಕಾರ್ಯಕ್ರಮಗಳಲ್ಲಿ ಧರಿಸುವ ಗೌನ್ ಪಾಶ್ಚಿಮಾತ್ಯ ಸಂಸ್ಕೃತಿಗೆ ಪ್ರತಿ ರೂಪವಾಗಿದೆ ಎಂದು ಅಭಿಪ್ರಾಯ ಪಟ್ಟಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಈ ಸಂಸ್ಕೃತಿಗೆ ಬ್ರೇಕ್ ಹಾಕಲು ಮುಂದಾಗಿದೆ.
ದೆಹಲಿಯಲ್ಲಿ ನಡೆದ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಸಭೆಯಲ್ಲಿ ಗೌನ್ ಸಂಸ್ಕೃತಿಯು ಬ್ರಿಟಿಷ್ ವಸಾಹತು ಶಾಹಿಯ ಪ್ರತಿರೂಪವಾಗಿದೆ ಎನ್ನುವ ಒಮ್ಮತ ಅಭಿಪ್ರಾಯ ಮೂಡಿಬಂದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲು ಮುಂದಾಗಿದೆ.
Advertisement
ಸಚಿವಾಲಯವು ಶೀಘ್ರದಲ್ಲಿಯೇ ದೇಶದ ಎಲ್ಲಾ ವಿಶ್ವ ವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಯಾವ ರೀತಿಯ ಉಡುಪು ಧರಿಸಬೇಕು ಎನ್ನುವುದರ ಬಗ್ಗೆ ಸೂಚನೆಯನ್ನು ನೀಡಲಾಗುವುದು ಎಂದು ತಿಳಿಸಿದೆ. ಅಲ್ಲದೆ ಈ ಕುರಿತು ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಪ್ರಸ್ತುತ ಭಾರತದ ಎಲ್ಲಾ ವಿಶ್ವವಿದ್ಯಾಲಯಗಳು ಘಟಿಕೋತ್ಸವದ ವೇಳೆ ಯಾವ ರೀತಿಯ ಉಡುಪು ಧರಿಸಬೇಕು ಎನ್ನುವುದರ ಬಗ್ಗೆ ತಮ್ಮದೇ ಅದ ನಿಯಮಗಳನ್ನು ಹೊಂದಿವೆ.
Advertisement
ಕಳೆದ ವರ್ಷ ಮುಂಬೈಯ ಇಂಡಿಯನ್ ಇನ್‍ಸ್ಟುಟ್ಯೂಟ್ ಆಫ್ ಟೆಕ್ನಾಲಜಿಯ ಘಟಿಕೋತ್ಸವದ ವೇಳೆ ವಿದ್ಯಾರ್ಥಿಗಳು ಖಾದಿ ವಸ್ತ್ರಗಳನ್ನು ಧರಿಸಿ ಬಂದಿದ್ದರು. ಈ ವರ್ಷ ಕಾನ್ಪುರ ಐಐಟಿ ವಿದ್ಯಾರ್ಥಿಗಳು ಕುರ್ತಾ, ಪೈಜಮಾ, ಚೂಡಿದಾರ್ ಧರಿಸಿ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ.