ವಾಷಿಂಗ್ಟನ್: ರಷ್ಯಾ ದಾಳಿಯಿಂದ ನಲುಗಿರುವ ಉಕ್ರೇನ್‍ನಲ್ಲಿ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ವೆಬ್ ಪೋರ್ಟಲ್ ಪ್ರಾರಂಭ ಮಾಡಿದೆ.
ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಕ್ಕೆ ಸರ್ಕಾರ ವೆಬ್ ಫೋರ್ಟಲ್ ಪ್ರಾರಂಭಿಸಿದೆ. http://ukraine.karnataka.tech/stranded ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ ಅಪ್ ಲೋಡ್ ಮಾಡಬಹುದಾಗಿದೆ.
Advertisement
ಉಕ್ರೇನ್‍ನಲ್ಲಿರುವ ಕನ್ನಡಿಗರ ರಕ್ಷಣೆ ವಿಚಾರವಾಗಿ ಮಾತನಾಡಿದ ನೋಡಲ್ ಅಧಿಕಾರಿ ಮನೋಜ್ ರಾಜನ್, ಸಿಎಂ ಸೂಚನೆ ಮೇರೆಗೆ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ನಿನ್ನೆ ರಾತ್ರಿಯಿಂದ ನಾವು ಕೆಲಸ ಮಾಡುತ್ತಿದ್ದೇವೆ. 27 ಜಿಲ್ಲೆಗಳ 281 ಕನ್ನಡಿಗರು ರಿಪೋರ್ಟ್ ಆಗಿದ್ದಾರೆ. ಅವರು ನಮಗೆ ಮಾಹಿತಿ ನೀಡಿದ್ದಾರೆ. ಆ ಮಾಹಿತಿಯನ್ನು ನಾವು ಕೇಂದ್ರ ಮತ್ತು ಉಕ್ರೇನ್ ರಾಯಭಾರಿ ಕಚೇರಿಗೂ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ.
Advertisement
Advertisement
ಬೆಳಗಿನ ಜಾವ 6 ಗಂಟೆಯಲ್ಲಿ ನಡೆದಿರೋ ದಾಳಿಯ ಕುರಿತಾಗಿ ವಿದ್ಯಾರ್ಥಿಗಳ ಮಾಹಿತಿ ಪಡೆಯಲು ಆ್ಯಪ್ ಪ್ರಾರಂಭ ಮಾಡಿದ್ದೇವೆ. ಈ ಆ್ಯಪ್‌ನಲ್ಲಿ ವಿದ್ಯಾರ್ಥಿಗಳು ಮಾಹಿತಿ ಕೊಡಬಹುದು. ವಿದ್ಯಾರ್ಥಿಗಳು ಮಾಹಿತಿ ಅಪ್ ಲೋಡಬೇಕು. ಮೊಬೈಲ್ ಆ್ಯಪ್‌ನಲ್ಲಿ ಮಾಹಿತಿ ಕೊಟ್ಟ ಬಳಿಕ ಅವರ ಮಾಹಿತಿ ಕೇಂದ್ರ ಸರ್ಕಾರ ಮತ್ತು ಉಕ್ರೇನ್ ರಾಯಭಾರಿ ಕಚೇರಿಗೆ ಕೊಡುತ್ತೇವೆ. ವಿದ್ಯಾರ್ಥಿಗಳ ರಕ್ಷಣೆಗಾಗಿ ನಾವು ಕ್ರಮವಹಿಸಿದ್ದೇವೆ. ಪೋಷಕರು ಆತಂಕ ಪಡುವುದು ಬೇಡ. ನಾವು ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದ್ದೇವೆ. ವಿದ್ಯಾರ್ಥಿಗಳು ವೆಬ್ ಫೋರ್ಟ್‍ನಲ್ಲಿ ಸರಳವಾಗಿ ಮಾಹಿತಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವೈದ್ಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್, ರಷ್ಯಾಗೇ ಹೆಚ್ಚಾಗಿ ಯಾಕೆ ಹೋಗ್ತಾರೆ ಗೊತ್ತಾ?
Advertisement
ಈವರೆಗೆ 281 ಜನ ನಮಗೆ ಉಕ್ರೇನ್ ನಿಂದ ಮಾಹಿತಿ ನೀಡಿದ್ದಾರೆ. 27 ಜಿಲ್ಲೆಗಳ ವಿದ್ಯಾರ್ಥಿಗಳು ಇದರಲ್ಲಿ ಇದ್ದಾರೆ. ಎಷ್ಟು ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಇದ್ದಾರೆ ಅನ್ನೋ ಮಾಹಿತಿ ಇಲ್ಲ. ಆದರೆ ಎಲ್ಲಾ ವಿದ್ಯಾರ್ಥಿಗಳು ಮೆಡಿಕಲ್ ಎಜುಕೇಶನ್‍ಗೆ ಹೋಗಿದ್ದಾರೆ. 19, 20, 21 ವರ್ಷದವರು ಹೆಚ್ಚಾಗಿ ಇದ್ದಾರೆ. ನಮ್ಮ ಜೊತೆ ಅಲ್ಲಿ ಇರೋರು ಕಾಲ್ ಮಾಡಿ ಮಾತಾಡಿದ್ದಾರೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡ್ತಿದ್ದೇವೆ. ಈವರೆಗೂ ಯಾವುದೇ ಸಾವು ನೋವು ರಿಪೋರ್ಟ್ ಅಗಿಲ್ಲ. ವಿದ್ಯಾರ್ಥಿಗಳ ಮಾಹಿತಿ ಉಕ್ರೇನ್ ರಾಯಭಾರಿ ಕಚೇರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಕೊಡೋದು ನಮ್ಮ ಮೊದಲ ಆದ್ಯತೆ. ಅಲ್ಲಿನ ವಿದ್ಯಾರ್ಥಿಗಳಿಗೆ ಅಗತ್ಯ ಊಟದ ವ್ಯವಸ್ಥೆ, ಇನ್ನಿತರ ಸೌಕರ್ಯ ಒದಗಿಸೋದು ನಮ್ಮ ಆದ್ಯತೆ ಎಂದು ನೋಡಲ್ ಅಧಿಕಾರಿ ಮನೋಜ್ ರಾಜನ್ ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!
ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರುವ ಸಲುವಾಗಿ EAM @DrSJaishankar ಅವರ ಜತೆ ಮಾತನಾಡಿದ್ದೇನೆ. ಅವರು ವಿದ್ಯಾರ್ಥಿಗಳ ಸುರಕ್ಷತೆಗೆ ಸಂಪೂರ್ಣ ಭರವಸೆ ನೀಡಿದ್ದಾರೆ.#Ukraine #UkraineRussiaCrisis #UkraineRussia
— Rajeev Chandrasekhar ???????? (@Rajeev_GoI) February 25, 2022
ಉಕ್ರೇನ್‍ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರುವ ವಿಚಾರ ವಿದೇಶಾಂಗ ಸಚಿವ ಜೈಶಂಕರ್ ಜೊತೆ ಮಾತನಾಡಿದ್ದೇನೆ. ವಿದ್ಯಾರ್ಥಿಗಳ ಸುರಕ್ಷತೆಗೆ ಸಂಪೂರ್ಣ ಭರವಸೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.