ನವದೆಹಲಿ/ಜ್ಯೂರಿಚ್: ಸ್ವಿಜರ್ಲೆಂಡ್‌ನಲ್ಲಿರುವ ಸ್ವಿಸ್ ಬ್ಯಾಂಕ್‌ನಲ್ಲಿ (Swiss Banks) ಭಾರತೀಯರ ಭಾರತೀಯರ ಹೂಡಿಕೆ, ಡಿಪಾಸಿಟ್ (Indians’ funds) ಪ್ರಮಾಣ ಇಳಿಕೆಯಾಗಿದೆ.
2021ಕ್ಕೆ ಹೋಲಿಸಿದರೆ 11% ರಷ್ಟು ಕುಸಿತ ಕಂಡಿದ್ದು, ಪ್ರಸ್ತುತ 3.42 ಶತಕೋಟಿ ಫ್ರಾಂಕ್ (ಅಂದಾಜು 30 ಸಾವಿರ ಕೋಟಿ ರೂ.) ಇಳಿಕೆಯಾಗಿದೆ ಎಂದು ಸ್ವಿಸ್ ಕೇಂದ್ರೀಯ ಬ್ಯಾಂಕ್‌ನ (Switzerland’s Central Bank) ವಾರ್ಷಿಕ ದತ್ತಾಂಶ ವರದಿ ತಿಳಿಸಿದೆ.
Advertisement
2021ರಲ್ಲಿ ಭಾರತೀಯರು, ಭಾರತ ಮೂಲದ ಬ್ಯಾಂಚ್‌ಗಳು ಮತ್ತು ಹಣಕಾಸು ಸಂಸ್ಥೆಗಳ ಒಟ್ಟು ಬಂಡವಾಳ 35 ಸಾವಿರ ಕೋಟಿ ರೂ.ಗೆ ಏರಿಕೆಯಾಗಿತ್ತು. ಇದು 14 ವರ್ಷಗಳಲ್ಲೇ ಗರಿಷ್ಠ ಬಂಡವಾಳ ಸಂಗ್ರಹ ಎನಿಸಿಕೊಂಡಿತ್ತು. ಬಂಡವಾಳ ಕಡಿಮೆಯಾದ ಹಿನ್ನೆಲೆಯಲ್ಲಿ ಕಳೆದ ವರ್ಷ 44ನೇ ಸ್ಥಾನದಲ್ಲಿ ಭಾರತ ಈ ಬಾರಿ 46ನೇ ಸ್ಥಾನ ಪಡೆದಿದೆ.
Advertisement
Advertisement
2006ರಲ್ಲಿ ಸಾರ್ವಕಾಲಿಕ ಗರಿಷ್ಟ 60 ಸಾವಿರ ಕೋಟಿ ರೂ. ಹೂಡಿಕೆಗೆ ಏರಿಕೆಯಾಗಿತ್ತು. 2011, 2013, 2017, 2020, 2021ರಲ್ಲಿ ಬಂಡವಾಳ ಏರಿಕೆಯಾಗಿತ್ತು. 2020ರಲ್ಲಿ ಸ್ವಿಸ್‍ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು 20,700 ಕೋಟಿ ರೂ. ಗಳಷ್ಟಿತ್ತು. ಇದನ್ನೂ ಓದಿ: ಮೊದಲ ಬಾರಿಗೆ ಪ್ರಧಾನಿಯಾಗಿ ಬಂದಾಗ ಭಾರತ 10ನೇ ಅತಿದೊಡ್ಡ ಆರ್ಥಿಕತೆಯಾಗಿತ್ತು, ಈಗ 5ನೇ ಸ್ಥಾನಕ್ಕೆ ಜಿಗಿದಿದೆ : ಅಮೆರಿಕದಲ್ಲಿ ಮೋದಿ
Advertisement
ಅಘೋಷಿತ ವಿದೇಶಿ ಆಸ್ತಿಗಳನ್ನು ಘೋಷಿಸಲು 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ (PM Narendra Modi Government) ವಿದೇಶದಲ್ಲಿ ಇಟ್ಟಿರುವ ಕಪ್ಪುಹಣದ (Black Money) ವಿರುದ್ಧ ಸಮರ ಸಾರಿತ್ತು. ಸ್ವಿಸ್ ಬ್ಯಾಂಕ್‍ಗಳಲ್ಲಿ ಇಟ್ಟಿರುವ ಕಪ್ಪು ಹಣದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು.
ಹಲವು ಸುತ್ತಿನ ಮಾತುಕತೆಯ ಬಳಿಕ ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರು ಹೊಂದಿರುವ ಖಾತೆಗಳ ವಿವರಗಳ ಮೊದಲ ಪಟ್ಟಿ 2018ರಲ್ಲಿ ಭಾರತದ ಕೈಸೇರಿತ್ತು. ಭಾರತ ಸರ್ಕಾರ ಹಾಗೂ ಸ್ವಿಜರ್ಲೆಂಡ್ ನಡುವೆ ನಡೆದ ಒಪ್ಪಂದದ ಅನ್ವಯ ಮಾಹಿತಿಯನ್ನು ಹಂಚಿಕೆ ಮಾಡಲಾಗಿತ್ತು. ಈ ಬೆಳವಣಿಗೆಯನ್ನು ಭಾರತದಲ್ಲಿ ತೆರಿಗೆ ವಂಚಿಸಿ ವಿದೇಶಿಗಳಲ್ಲಿ ಕಪ್ಪು ಹಣವಾಗಿಟ್ಟಿದ್ದ ಪತ್ತೆಯ ಕಾರ್ಯದಲ್ಲಿ ಹೊಸ ಮೈಲಿಗಲ್ಲು ಎಂದು ವಿಶ್ಲೇಷಿಸಲಾಗಿತ್ತು.
ಸ್ವಯಂಚಾಲಿತ ಮಾಹಿತಿ ವಿನಿಮಯ ಚೌಕಟ್ಟಿನ ಅಡಿಯಲ್ಲಿ ಭಾರತವು ಸ್ವಿಸ್ ಬ್ಯಾಂಕ್ ಖಾತೆಗಳ ವಿವರಗಳ ನಾಲ್ಕನೇ ಪಟ್ಟಿಯನ್ನು 2022ರ ಅಕ್ಟೋಬರ್‌ನಲ್ಲಿ ಪಡೆದಿತ್ತು. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಐದನೇ ಪಟ್ಟಿ ಕೇಂದ್ರ ಸರ್ಕಾರದ ಕೈ ಸೇರುವ ಸಾಧ್ಯತೆಯಿದೆ.
ಕಪ್ಪುಹಣವೇ?
ಕಪ್ಪು ಹಣವನ್ನು ಸ್ವಿಸ್ ಬ್ಯಾಂಕ್‍ಗಳು ಇಡಲಾಗುತ್ತದೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಇಲ್ಲಿ ಠೇವಣಿ ಇರಿಸಿದ್ದ ಹಣಗಳು ಎಲ್ಲವೂ ಕಪ್ಪು ಹಣ ಎಂದೇ ಗುರುತಿಸಲಾಗುತ್ತಿತ್ತು. ಆದರೆ ಈಗ ವ್ಯವಸ್ಥೆ ಬದಲಾಗಿದ್ದು ತನ್ನ ಬ್ಯಾಂಕ್‍ಗಳಲ್ಲಿ ಹಣ ಇಟ್ಟ ವಿವರವನ್ನು ಸ್ವಿಸ್ ಬ್ಯಾಂಕ್ ಸರ್ಕಾರಗಳಿಗೆ ನೀಡುತ್ತದೆ. ಹೀಗಾಗಿ ಇಲ್ಲಿ ಠೇವಣಿ ಇಟ್ಟ ಎಲ್ಲ ಹಣಗಳು ಕಪ್ಪು ಹಣ ಎಂದು ಕರೆಯಲು ಬರುವುದಿಲ್ಲ. ಈಗ ‘ಕಪ್ಪು ಕುಳಗಳು’ಸ್ವಿಸ್ ಬ್ಯಾಂಕುಗಳಲ್ಲಿ ಹೆಚ್ಚಿನ ಹಣವನ್ನು ಇಡುತ್ತಿಲ್ಲ.