– ಪಬ್ಲಿಕ್ ಟಿವಿ ಜೊತೆ ನೋವು ತೋಡಿಕೊಂಡ ಪ್ರಯಾಣಿಕರು
– ಕೊರೊನಾಗೆ ಇಟಲಿ ಬಂದ್
– ಪ್ರತಿ ದಿನ ನಿಯಮ ಬದಲಾಗುತ್ತಿದೆ
ರೋಮ್: ಕೊರೊನಾ ದಾಳಿಗೆ ಇಟಲಿ ಸಂಪೂರ್ಣ ಬಂದ್ ಆಗಿದ್ದು, ರೋಮ್ ಏರ್‌ಪೋರ್ಟ್‌ನಲ್ಲಿ 50ಕ್ಕೂ ಹೆಚ್ಚು ಕನ್ನಡಿಗರು ಸಿಲುಕಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಪಬ್ಲಿಕ್ ಟಿವಿ ಜೊತೆ ಮಾತನಾಡುವ ಮೂಲಕ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ.
ನಿರುಪಮಾ ಗೌಡ ಎಂಬವರು ಮಾತನಾಡಿ, “ನಾವೆಲ್ಲಾ ಇಲ್ಲಿ ಸಿಲುಚಿನಿ ಏರ್‌ಪೋರ್ಟ್‌ನಲ್ಲಿ ಸಿಲುಕಿ ಹಾಕಿಕೊಂಡಿದ್ದೇವೆ. ಭಾರತದಿಂದ ಫ್ಲೈಟ್ ಯಾವಾಗ ಬರುತ್ತೆ ಎಂದು ಕಾಯುತ್ತಿದ್ದೇವೆ. ಯಾವಾಗ ಬರುತ್ತೆ ಎನ್ನುವ ಮಾಹಿತಿಯೇ ಇನ್ನು ಸಿಕ್ಕಿಲ್ಲ. ಬುಧವಾರ ಸಂಜೆಯಿಂದ ನಾವು ಕಾಯುತ್ತಿದ್ದೇವೆ. ನಾವು ಏರ್ ಇಂಡಿಯಾ ಫ್ಲೈಟ್ ಬುಕ್ ಮಾಡಿದ್ದೇವೆ. ಆದರೆ ಇದುವರೆಗೆ ಯಾವುದೇ ಅಪ್ಡೇಟ್ ಬಂದಿಲ್ಲ. ಚಿಕ್ಕಪುಟ್ಟ ದೇಶವಾದ ಶ್ರೀಲಂಕಾದವರನ್ನು ಹಾಗೂ ಬೇರೆ ದೇಶದವರನ್ನು ಕರೆಸಿಕೊಳ್ಳುತ್ತಿದ್ದಾರೆ. ಆದರೆ ನಮ್ಮ ದೇಶದಿಂದ ಯಾವುದೇ ಪ್ರತಿಕ್ರಿಯೆ ಬರುತ್ತಿಲ್ಲ. ನಾವು ಈವರೆಗೆ ಆರೋಗ್ಯವಾಗಿದ್ದೇವೆ. ಇನ್ನು 2 ದಿನ ಇಲ್ಲೇ ಇದ್ದರೆ ಆರೋಗ್ಯ ಸಮಸ್ಯೆ ಎದುರಾಗುತ್ತೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
Advertisement
Advertisement
ಮದನ್ ಗೌಡ ಎಂಬವರು,”ನಾನು ಸೋಮವಾರ ಫ್ಲೈಟ್ ಬುಕ್ ಮಾಡಿದ್ದೆ. ಏರ್ ಇಂಡಿಯಾ ವೆಬ್‍ಸೈಟ್‍ನಲ್ಲಿ ಯಾವುದೇ ದಾಖಲೆ ಕಡ್ಡಾಯ, ನೀವು ಕೊಡಲೇಬೇಕು ಎಂದು ಕೊಟ್ಟಿರಲಿಲ್ಲ. ನಾವು ರಾಯಭಾರ ಜೊತೆ ಮಾತನಾಡಿದ್ದೇವೆ. ಇಟಲಿಯಲ್ಲಿ ಹೊರಗಡೆ ಬರುವುದಕ್ಕೆ ಜನರು ಹೆದರುತ್ತಿದ್ದಾರೆ. ಇಟಲಿ ಸರ್ಕಾರ ತುಂಬಾ ಕಠಿಣವಾದ ರೂಲ್ಸ್ ತರುತ್ತಿದೆ. ಪ್ರತಿದಿನ ರೂಲ್ಸ್ ಚೇಂಜ್ ಆಗುತ್ತಿದೆ. ವಿಮಾನ ನಿಲ್ದಾಣದಲ್ಲಿ ತುಂಬಾ ರಿಸ್ಕ್ ಇದೆ. ಇಲ್ಲಿ ಫ್ಲೈಟ್ ಟೈಮ್ಮಿಂಗ್ ಚೇಂಜ್ ಮಾಡುತ್ತಿದ್ದಾರೆ. ಏರ್‌ಪೋರ್ಟ್‌ನಲ್ಲಿ ಸೋಂಕು ಹರಡುವ ಸಾಧ್ಯತೆ ಜಾಸ್ತಿ ಇದೆ. ಹೊರಗಡನೇ ಹೋಗಬಾರದು ಎನ್ನುವ ಈ ಟೈಮಲ್ಲಿ ಏನೂ ಮಾಹಿತಿ ಕೊಡದೇ ಏರ್‌ಪೋರ್ಟ್‌ನಲ್ಲಿ ಕೂಡಿ ಹಾಕಿದ್ರೆ ಎಷ್ಟು ಜನರಿಗೆ ಸೋಂಕು ಹರಡಬಹುದು. ನೀವೇ ನಿಮ್ಮ ಪ್ರಜೆಗಳನ್ನು ರಿಸ್ಕ್ ಗೆ ಸಿಲುಕಿಸುತ್ತಿದ್ದೀರ. ಯಾರಿಗಾದರೂ ಸೋಂಕು ತಗುಲಿದರೆ ಇದಕ್ಕೆಲ್ಲಾ ನೇರ ಕಾರಣ ಭಾರತ ಸರ್ಕಾರ ಹಾಗೂ ಏರ್ ಇಂಡಿಯಾನೇ ಎಂದು ಆಕ್ರೋಶ ಹೊರಹಾಕಿದರು.
Advertisement
Vice President spoke to Minister of External Affairs, S. Jaishankar today morning regarding the Indians stranded at Rome Airport in Italy. External Affairs Minister assured that Medical teams are being sent to issue certification to facilitate their travel to India. @MEAIndia
— Vice President of India (@VPIndia) March 12, 2020
Advertisement
ಇದೇ ವೇಳೆ ಮತ್ತೊಬ್ಬ ವ್ಯಕ್ತಿ,”ಏರ್ ಇಂಡಿಯಾ ವಿಮಾನದಲ್ಲಿ ನಮ್ಮನ್ನು ಕರೆದೊಯ್ದಿಲ್ಲ. ನಾವು ವಾರದ ಮುಂಚೆಯೇ ಟಿಕೆಟ್ ಬುಕ್ ಮಾಡಿದ್ದೀವಿ. ಆದರೆ ಇಲ್ಲಿ ಈಗ ಮೆಡಿಕಲ್ ಸರ್ಟಿಫಿಕೇಟ್ ನೀಡಬೇಕೆಂದು ಹೇಳುತ್ತಿದ್ದಾರೆ. ಸರ್ಟಿಫಿಕೇಟ್ ನೀಡಿದ ಮೇಲೆ ಪರಿಶೀಲಿಸಿ ನಿಮ್ಮ ಪ್ರಯಾಣವನ್ನು ರೀಶೆಡ್ಯೂಲ್ ಮಾಡುತ್ತೇವೆ ಎನ್ನುತ್ತಿದ್ದಾರೆ. ನಮಗೆ ಮಾಹಿತಿ ನೀಡಲೂ ಸಹ ಇಲ್ಲಿ ಯಾರೂ ಇಲ್ಲ. ನಾವು ಇಲ್ಲಿ ಸಿಲುಕಿಕೊಂಡಿದ್ದೇವೆ. ದಯವಿಟ್ಟು ನಮ್ಮನ್ನು ಇಲ್ಲಿಂದ ರಕ್ಷಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಡಿಸಿಎಂ ಅಶ್ವಥ್ ನಾರಾಯಣ ತನ್ನ ಟ್ವಿಟ್ಟರಿನಲ್ಲಿ, ಇಟಲಿ ಸೇರಿದಂತೆ ಕೊರೊನಾ ಪೀಡಿತ ಹೊರದೇಶಗಳಲ್ಲಿರುವ ಕನ್ನಡಿಗರನ್ನು ಕರೆತರಲು ನಮ್ಮ ಸರ್ಕಾರ ಕೇಂದ್ರದ ಪ್ರಧಾನಿ ಮೋದಿ ಸರ್ಕಾರದ ಜೊತೆಗೆ ಸಹಕರಿಸಿ ಕಾರ್ಯೋನ್ಮುಖವಾಗಿದೆ. ತಜ್ಞ ವೈದ್ಯರನ್ನು ಕರೆದುಕೊಂಡು ಹೋಗಿ ಅಲ್ಲಿಯೇ ತೀವ್ರ ತಪಾಸಣೆಗೆ ಒಳಪಡಿಸಿ ಸುರಕ್ಷತೆಯಿಂದ ಅವರನ್ನು ಇಲ್ಲಿಗೆ ವಾಪಸ್ ಕರೆತರಲಾಗುವುದು ಎಂದು ಟ್ವೀಟ್ ಮಾಡಿ ಭರವಸೆ ನೀಡಿದ್ದಾರೆ.