ದೆಹಲಿಯಲ್ಲಿ ಓಮಿಕ್ರಾನ್‌ ಮೊದಲ ಪ್ರಕರಣ ಪತ್ತೆ- ಭಾರತದಲ್ಲಿ 5ಕ್ಕೇರಿದ ಸಂಖ್ಯೆ

Advertisements

ನವದೆಹಲಿ: ತಾಂಜೇನಿಯಾದಿಂದ ದೆಹಲಿಗೆ ವಾಪಸ್ಸಾಗಿದ್ದ ವ್ಯಕ್ತಿಯಲ್ಲಿ ಓಮಿಕ್ರಾನ್‌ ಸೋಂಕು ಇರುವುದು ಪತ್ತೆಯಾಗಿದೆ. ಭಾರತದಲ್ಲಿ ಓಮಿಕ್ರಾನ್‌ ಸೋಂಕಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಈ ವ್ಯಕ್ತಿ ಭಾರತ ಮೂಲದವರಾಗಿದ್ದು, ತಾಂಜೇನಿಯಾದಿಂದ ದೇಶಕ್ಕೆ ವಾಪಸ್ಸಾಗಿದ್ದರು. ಆತನನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತನನ್ನು ಲೋಕ್‌ ನಾಯಕ್‌ ಪ್ರಕಾಶ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದನ್ನೂ ಓದಿ: ಕೊರೊನಾ ಮನುಷ್ಯರಿಂದ ಪ್ರಾಣಿಗಳಿಗೆ ಹರಡುತ್ತದೆ – ಸಂಶೋಧನಾ ವರದಿ

Advertisements

ಸೋಂಕಿತನ ಟ್ರಾವೆಲ್‌ ಹಿಸ್ಟರಿಯನ್ನು ಸಂಗ್ರಹಿಸಲಾಗುತ್ತಿದೆ. ಸಂಪರ್ಕಿತರ ಟ್ರ್ಯಾಕ್‌ ಮಾಡಲಾಗುತ್ತಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕು ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಣಿಸಿಕೊಂಡಿತು. ದಕ್ಷಿಣ ಆಫ್ರಿಕಾದಿಂದ ವಾಪಸ್ಸಾಗಿದ್ದ ಇಬ್ಬರಲ್ಲಿ ಓಮಿಕ್ರಾನ್‌ ಪತ್ತೆಯಾಗಿತ್ತು. ಹಾಗೆಯೇ ಗುಜರಾತ್‌, ಮಹಾರಾಷ್ಟ್ರದಲ್ಲಿ ತಲಾ ಒಂದು ಪ್ರಕರಣಗಳು ದೃಢಪಟ್ಟಿವೆ. ಇದನ್ನೂ ಓದಿ: ಪಾಸಿಟಿವ್ ಬಂದಿದ್ದ ವಿದ್ಯಾರ್ಥಿಗಳಿಗೆ ಎರಡೇ ದಿನದಲ್ಲಿ ನೆಗೆಟಿವ್ ರಿಪೋರ್ಟ್!

Advertisements

ಪ್ರಧಾನಿ ಮೋದಿ ಅವರೇ, ಅಂತಾರಾಷ್ಟ್ರೀಯ ವಿಮಾನಗಳಿಗೆ ನಿರ್ಬಂಧ ವಿಧಿಸಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮನವಿ ಮಾಡಿದ್ದರು. ಜೊತೆಗೆ ಪ್ರಧಾನಿಗೆ ಪತ್ರ ಕೂಡ ಬರೆದಿದ್ದರು. ಆದರೆ ಅವರ ಮನವಿಗೆ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ.

Advertisements
Exit mobile version