Asia Cup 2023: ಭಾರತ ತಂಡ ಪ್ರಕಟ – ಕೆ.ಎಲ್‌.ರಾಹುಲ್‌, ಅಯ್ಯರ್‌ ವಾಪಸ್‌

Public TV
2 Min Read
RohitSharma

ನವದೆಹಲಿ: ಏಷ್ಯಾ ಕಪ್‌ 2023ಕ್ಕೆ ಭಾರತ ಕೊನೆಗೂ ತಂಡವನ್ನು ಪ್ರಕಟಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಏಷ್ಯಾ ಕಪ್‌ಗಾಗಿ ಭಾರತೀಯ ಪುರುಷರ ಕ್ರಿಕೆಟ್ ತಂಡವನ್ನು ಸೋಮವಾರ ಪ್ರಕಟಿಸಿತು.

ವೇಗಿ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರಲ್ಲದೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ T20I ನಲ್ಲಿ ವೀರೋಚಿತ ಪ್ರದರ್ಶನ ನೀಡಿದ ನಂತರ ಮುಂಬೈ ಇಂಡಿಯನ್ಸ್ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ ಕೂಡ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಸ್ಪಿನ್ನರ್ ಕುಲದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದು, ಯುಜುವೇಂದ್ರ ಚಹಾಲ್ ಅವರನ್ನು ಕೈಬಿಡಲಾಗಿದೆ. ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಬ್ಯಾಕ್ ಅಪ್ ವಿಕೆಟ್ ಕೀಪರ್ ಆಗಿ ಸೇರಿಸಲಾಗಿದೆ.

ತಂಡದಲ್ಲಿ ಯಾರಿದ್ದಾರೆ?
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್‌ ಶಮಿ, ಮೊಹಮ್ಮದ್‌ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿದ್ದಾರೆ.

ಏಷ್ಯಾ ಕಪ್ 2023 ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರ ವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ‌ ಹೈಬ್ರಿಡ್‌ ಮಾದರಿಯಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ತಂಡಗಳು ಭಾಗವಹಿಸುತ್ತಿವೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article