Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪುಟಿನ್ ಭಾರತಕ್ಕೆ ಆಗಮನ – ವಾಯು ರಕ್ಷಣಾ ವ್ಯವಸ್ಥೆಯ ವಿಶೇಷತೆ ಏನು? ಎಷ್ಟು ಶಕ್ತಿಶಾಲಿ?

Public TV
Last updated: December 6, 2021 10:21 pm
Public TV
Share
4 Min Read
NARENDRA MODI AND PUTIN 2
SHARE

ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು ಭಾರತಕ್ಕೆ ಆಗಮಿಸಿದ್ದಾರೆ. 21ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಯಲ್ಲಿ ಪುಟಿನ್ ಭಾಗವಹಿಸಲಿದ್ದಾರೆ. ದೆಹಲಿಯ ಹೈದರಾಬಾದ್ ಹೌಸ್‍ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪುಟಿನ್ ದ್ವಿಪಕ್ಷೀಯ ಬಾಂಧವ್ಯ ಕುರಿತು ಚರ್ಚೆ ನಡೆಸಿದ್ದಾರೆ.

NARENDRA MODI AND PUTIN 1 1

ಶೃಂಗಸಭೆ ಬಳಿಕ ಶಸ್ತ್ರಾಸ್ತ್ರ, ವಾಣಿಜ್ಯ, ವಿದೇಶಾಂಗ ವ್ಯವಹಾರ ಸೇರಿದಂತೆ 10ಕ್ಕೂ ಹೆಚ್ಚು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಈ ತಿಂಗಳಿನಿಂದಲೇ ಎಸ್-400 ವಾಯು ರಕ್ಷಣಾ ವ್ಯವಸ್ಥೆ ಸರಬರಾಜು ಪೂರೈಕೆ ಪ್ರಾರಂಭವಾಗಿದೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಉ.ಪ್ರ. ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಮತಾಂತರ

S 400 1

ಈ ನಡುವೆ ಕೋವಿಡ್-19 ಸವಾಲುಗಳ ನಡುವೆ ಭಾರತ ಹಾಗೂ ರಷ್ಯಾ ದೇಶಗಳ ಸಂಬಂಧ ಮುಂದುವರಿಕೆ ಬಗ್ಗೆ ಚರ್ಚೆ ನಡೆಸಿದ್ದು, ಎರಡು ದೇಶಗಳು ಕೂಡ ಭಯೋತ್ಪಾದನೆಯ ವಿರುದ್ಧ ಪ್ರಬಲವಾಗಿ ಹೋರಾಡುವ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ. ಈಗಿರುವ ಹೂಡಿಕೆಯೊಂದಿಗೆ ಭಾರತದಲ್ಲಿ ಇನ್ನಷ್ಟು ಹೂಡಿಕೆ ಮಾಡಲು ರಷ್ಯಾ ಮುಂದಾಗಿದ್ದು, ಹೊಸ ತಂತ್ರಜ್ಞಾನಗಳೊಂದಿಗೆ ಉಭಯ ರಾಷ್ಟ್ರಗಳು ಒಂದಾಗಿ ಉನ್ನತ ತಂತ್ರಜ್ಞಾನಗಳ ಅಭಿವೃದ್ದಿಗೆ ಶ್ರಮಿಸೋಣ ಎಂದು ಪುಟಿನ್ ತಿಳಿಸಿದ್ದು, ಈ ಬಾಂಧವ್ಯ ಮುಂದೆಯು ಇದೇ ರೀತಿ ಮುಂದುವರಿಯಲಿ ಎಂದು ಮೋದಿ ಜೊತೆ ಕೇಳಿಕೊಂಡಿದ್ದಾರೆ.  ಇದನ್ನೂ ಓದಿ: ನಾನು ಇನ್ನು ಮುಂದೆ ಕಣ್ಣೀರು ಹಾಕಲ್ಲ: ಎಚ್‍ಡಿಕೆ

#WATCH | New Delhi: PM Narendra Modi sees off Russian President Vladimir Putin after holding talks with him

(Video: DD) pic.twitter.com/iFJ6q4iMR1

— ANI (@ANI) December 6, 2021

ಏನಿದು ಎಸ್-400 ಏರ್ ಟ್ರಯಂಫ್?
ಸುಲಭವಾಗಿ ಒಂದು ವಾಕ್ಯದಲ್ಲೇ ಹೇಳುವುದಾದರೆ ಆಕಾಶದಲ್ಲೇ ಶತ್ರುಗಳನ್ನು ನಿರ್ನಾಮ ಮಾಡುವ ಸಾಮಥ್ರ್ಯ ಇರುವ ವಿಶೇಷ ವಾಯು ರಕ್ಷಣಾ ವ್ಯವಸ್ಥೆ. ಶತ್ರು ರಾಷ್ಟ್ರಗಳು ಕ್ಷಿಪಣಿಗಳು ಉಡಾಯಿಸಿದರೆ ಅದನ್ನು ಹೊಡೆದು ಉರುಳಿಸುವುದು ಸುಲಭದ ಮಾತಲ್ಲ. ಆದರೆ ವೇಗವಾಗಿ ಬರುವ ಕ್ಷಿಪಣಿಯನ್ನು ಆಕಾಶದಲ್ಲಿ ಹೊಡೆದು ಉರುಳಿಸುವ ಸಾಮಥ್ರ್ಯ ಈ ಎಸ್-400 ಟ್ರಯಂಫ್‍ಗೆ ಇದೆ. ರಷ್ಯಾ 2007ರಲ್ಲಿ ಮೊದಲ ಬಾರಿಗೆ ಈ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿತ್ತು.

S 400 2

ಹೇಗೆ ಕೆಲಸ ಮಾಡುತ್ತೆ?
ನೆಲದಲ್ಲೇ ಎಸ್-400 ವಾಯು ರಕ್ಷಣಾ ವ್ಯವಸ್ಥೆ ಶತ್ರು ಪಡೆಗಳ ಯುದ್ಧ ವಿಮಾನ ಹಾಗೂ ಕ್ಷಿಪಣಿ ದಾಳಿಯನ್ನು ದಿಟ್ಟವಾಗಿ ಎದುರಿಸುವ ಹೊಂದಿದೆ. ದೀರ್ಘ ದೂರ ಕ್ರಮಿಸಬಲ್ಲ ನೆಲದಿಂದ ಆಗಸಕ್ಕೆ ಉಡಾಯಿಸಬಹುದಾದ ಕ್ಷಿಪಣಿ ನಿರೋಧಕ ವ್ಯವಸ್ಥೆ ಇದ್ದು, 2007 ರಲ್ಲಿ ನಿರ್ಮಾಣಗೊಂಡಿದ್ದ ಎಸ್-300 ಶ್ರೇಣಿಯ ಹೊಸ ಆವೃತ್ತಿ ಇದಾಗಿದ್ದು, ಇದೀಗ ಸುಸಜ್ಜಿತವಾಗಿ ರೂಪುಗೊಂಡಿದೆ. ಇದನ್ನೂ ಓದಿ: ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

380 ಕಿ.ಮೀ ವ್ಯಾಪ್ತಿ ಒಳಗಡೆ ಬರುವ ಹಲವು ಕ್ಷಿಪಣಿ ಹಾಗೂ ವಿಮಾನಗಳನ್ನು ಏಕಕಾಲಕ್ಕೆ ಗುರುತಿಸಿ ಹೊಡೆದುರುಳಿಸುವ ಸೆಲ್ಫ್ ಸಿಸ್ಟಂ ವ್ಯವಸ್ಥೆ, ಬಹುಬಳಕೆಯ ರೇಡಾರ್ ಮತ್ತು ಗುರಿ ನಿಗದಿ ಉಡಾವಣೆ ವ್ಯವಸ್ಥೆ, ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳನ್ನು ಇದು ಒಳಗೊಂಡಿದೆ. ಲಾರಿಯ ಹಿಂಭಾಗದಲ್ಲಿ ವಾಯು ರಕ್ಷಣಾ ವ್ಯವಸ್ಥೆ ಇರುವ ಕಾರಣ ಯಾವ ಪ್ರದೇಶಕ್ಕೂ ಬೇಕಾದರೂ ಸುಲಭವಾಗಿ ತೆಗೆದುಕೊಂಡು ಹೋಗಬಹುದು. ಅಷ್ಟೇ ಅಲ್ಲದೇ ಕೆಲವೇ ನಿಮಿಷಗಳಲ್ಲಿ ಸಿದ್ಧಪಡಿಸಿ ಕಾರ್ಯಾಚರಣೆ ನಡೆಸಬಹುದಾಗಿದೆ. ಶತ್ರುಗಳ ದಾಳಿಯ ದಿಕ್ಕು ತಪ್ಪಿಸಲು ಏಕಕಾಲದಲ್ಲಿ 4 ಭಾಗಗಳಲ್ಲಿ ಕ್ಷಿಪಣಿಗಳನ್ನು ಗಗನಕ್ಕೆ ಚಿಮ್ಮಿಸಿ ರಕ್ಷಣಾ ಕವಚ ನಿರ್ಮಿಸಬಹುದಾಗಿದೆ. ಅಲ್ಲದೇ ಶತ್ರುನೆಲೆಯಿಂದ ತೂರಿ ಬರುವ ಮಾನವ ರಹಿತ ವಿಮಾನ, ಖಂಡಾಂತರ ಮತ್ತು ಕ್ರೂಸ್ ಕ್ಷಿಪಣಿಗಳನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದೆ.

S 400 e1538746280290

ಭಾರತಕ್ಕೆ ಅಗತ್ಯ ಏಕೆ?
ಪಾಕ್ ಬಳಿ ಇರುವ ಫೈಟರ್ ಜೆಟ್, ಚೀನಾ ಬಳಿ ಇರುವ ಎಫ್-16, ಜೆ-17 ಆವೃತ್ತಿಯ ಫೈಟರ್ ವಿಮಾನಗಳಿಗೆ ಎಸ್-400 ವಾಯು ರಕ್ಷಣಾ ವ್ಯವಸ್ಥೆ ದಿಟ್ಟ ಉತ್ತರ ನೀಡಲಿದೆ. ಭಾರತ ಈ ವ್ಯವಸ್ಥೆಯನ್ನು ಚೀನಾ ಗಡಿಯಲ್ಲಿ ನಿಯೋಜಿಸಲು ಸಿದ್ಧತೆ ನಡೆಸಿದೆ. ಭಾರತಕ್ಕೆ ಈ ವ್ಯವಸ್ಥೆ ಬಂದರೆ ವಾಯು ಪಡೆಯ ಸಾಮರ್ಥ್ಯ ಹೆಚ್ಚಾಗಲಿದೆ.

ಯಾವೆಲ್ಲ ದೇಶಗಳಲ್ಲಿ ಈ ವ್ಯವಸ್ಥೆ ಇದೆ?
ರಷ್ಯಾದಿಂದ ಈ ವ್ಯವಸ್ಥೆಯನ್ನು ಮೊದಲು ಚೀನಾ ಖರೀದಿ ಮಾಡಿದೆ. 2014ರಲ್ಲಿ ಚೀನಾ ಒಪ್ಪಂದ ಮಾಡಿಕೊಂಡಿದ್ದು ಈಗಾಗಲೇ ಎಸ್-400 ಕ್ಷಿಪಣಿ ವ್ಯವಸ್ಥೆ ಚೀನಾಗೆ ತಲುಪಿದೆ. ಎಷ್ಟು ಪ್ರಮಾಣದಲ್ಲಿ ರಷ್ಯಾ ವಿತರಣೆ ಮಾಡಿದೆ ಎನ್ನುವುದು ತಿಳಿದು ಬಂದಿಲ್ಲ. 2017ರಲ್ಲಿ ಟರ್ಕಿ ಜೊತೆ ಒಪ್ಪಂದ ನಡೆದಿದೆ. ಭಾರತ ಅಷ್ಟೇ ಅಲ್ಲದೇ ಕತಾರ್ ಎಸ್-400 ಖರೀದಿಸಲು ಆಸಕ್ತಿ ತೋರಿಸಿತ್ತು.

ಒಪ್ಪಂದದ ಉದ್ದೇಶ ಏನು?
ರಷ್ಯಾದೊಂದಿಗೆ ಚೀನಾ ಉತ್ತಮ ಬಾಂಧವ್ಯ ಹೊಂದಿದರೆ ಭವಿಷ್ಯದಲ್ಲಿ ಭಾರತಕ್ಕೆ ಸಮಸ್ಯೆ ಉಂಟಾಗಬಹುದು ಎನ್ನುವ ಕಾರಣ ಮೋದಿ ವ್ಲಾದಿಮಿರ್ ಪುಟಿನ್ ಜೊತೆ ಉತ್ತಮ ಸಂಪರ್ಕ ಬೆಳೆಸಿದ್ದರು. ಇದಕ್ಕಾಗಿ 2018ರಲ್ಲಿ ರಷ್ಯಾಗೆ ಭೇಟಿ ನೀಡಿ ಮಾತುಕತೆ ಕೂಡ ನಡೆಸಿದ್ದರು. ಈ ವೇಳೆಯೇ ಎಸ್-400 ವಾಯು ರಕ್ಷಣಾ ವ್ಯವಸ್ಥೆ ಖರೀದಿಸುವ ಒಪ್ಪಂದದ ಬಗ್ಗೆಯೂ ಚರ್ಚೆ ನಡೆಸಲಾಗಿತ್ತು. ಡಿಸೆಂಬರ್ ಅಂತ್ಯಕ್ಕೆ ಅಥವಾ ಜನವರಿಯಲ್ಲಿ ಭಾರತಕ್ಕೆ ಎಸ್-400 ಕ್ಷಿಪಣಿ ತಲುಪುವ ನಿರೀಕ್ಷೆ ಇದೆ. ಈ ಮೂಲಕ ವಿಶ್ವದ ಮಿಲಿಟರಿ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಲು ಭಾರತಕ್ಕೆ ಎಸ್-400 ಸಹಕಾರಿಯಾಗಲಿದೆ. ಇದನ್ನೂ ಓದಿ: ಸೇನಾ ವಾಹನಗಳಿಗೆ ಬೆಂಕಿ ಹಚ್ಚಿದ್ದಕ್ಕೆ ಆತ್ಮ ರಕ್ಷಣೆಗೆ ಗುಂಡಿನ ದಾಳಿ

ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?
ರಷ್ಯಾದೊಂದಿಗಿನ ಭಾರತದ ಉತ್ತಮ ಸಂಬಂಧ ಹೊಂದಿರುವುದು ಚೀನಾ ಮತ್ತು ಪಾಕಿಸ್ತಾನದ ನಿದ್ದೆಗೆಡಿಸಿದೆ. ಈಗಾಗಲೇ ಅಮೆರಿಕವೂ ರಷ್ಯಾ ಯುದ್ಧ ಸಾಮಾಗ್ರಿ ಖರೀದಿ ಮೇಲೆ ನಿರ್ಬಂಧ ವಿಧಿಸಿದೆ. ಇದರ ನಡುವೆಯೂ ಭಾರತ ದಿಟ್ಟ ನಿರ್ಧಾರ ಮಾಡಿ ಒಪ್ಪಂದಕ್ಕೆ ಸಹಿ ಹಾಕಿತ್ತು. ಭಾರತದ ನೆರೆ ದೇಶಗಳ ಪೈಕಿ ಚೀನಾ ಮತ್ತು ಪಾಕಿಸ್ತಾನದಿಂದಲೇ ಕಿರಿಕ್ ಜಾಸ್ತಿ. ಆಗಾಗ ಖಂಡಾಂತರ ಕ್ಷಿಪಣಿಗಳನ್ನು ಚೀನಾ, ಪಾಕಿಸ್ತಾನ ಪರೀಕ್ಷೆ ಮಾಡುತ್ತಲೇ ಇರುತ್ತದೆ. ಹೀಗಾಗಿ ಯಾವುದೇ ಸಮಯದಲ್ಲಿ ಆಗಬಹುದಾದ ದಾಳಿಯನ್ನು ಹಿಮ್ಮೆಟ್ಟಿಸುವ ಸಾಮಥ್ರ್ಯ ಭಾರತಕ್ಕೆ ಸಿಗಲಿದೆ.

TAGGED:indianarendra modirussiaS-400Vladimir putinಎಸ್-400ನರೇಂದ್ರ ಮೋದಿಭಾರತರಷ್ಯಾವ್ಲಾದಿಮಿರ್ ಪುಟಿನ್
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Davanagere Drugs Arrest
Crime

ದಾವಣಗೆರೆ | ಮಾದಕ ವಸ್ತು ಮಾರಾಟ ಜಾಲ – ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ

Public TV
By Public TV
10 minutes ago
Siddaramaiah 10
Latest

ಎಐಸಿಸಿ ಒಬಿಸಿ ವಿಭಾಗದ `ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ ವಿವರಿಸಿದ ಸಿಎಂ

Public TV
By Public TV
35 minutes ago
Hydrogen Coach
Latest

ಭಾರತದ ಮೊದಲ ಹೈಡ್ರೋಜನ್ ಚಾಲಿತ ಕೋಚ್‍ ಪರೀಕ್ಷೆ ಯಶಸ್ವಿ

Public TV
By Public TV
40 minutes ago
prahlad joshi
Karnataka

ರಾಜ್ಯದ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ಪೂರೈಕೆಯಾಗಿದೆ, ಸಿಎಂ ಬರೀ ಸುಳ್ಳು ಹೇಳ್ತಿದ್ದಾರೆ – ಜೋಶಿ ಕಿಡಿ

Public TV
By Public TV
1 hour ago
Chakravarthi Sulibele
Court

ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ – ಸೂಲಿಬೆಲೆ ವಿರುದ್ಧ ದಾಖಲಾದ ಕೇಸ್‌ ರದ್ದು

Public TV
By Public TV
1 hour ago
PUC EDUCATION BOARD
Bengaluru City

ಪ್ರಥಮ ಪಿಯುಸಿ ದಾಖಲಾತಿ ದಿನಾಂಕ ವಿಸ್ತರಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?