Connect with us

Corona

24 ಗಂಟೆಯಲ್ಲಿ 97,894 ಮಂದಿಗೆ ಕೊರೊನಾ -1,132 ಸಾವು

Published

on

ನವದೆಹಲಿ: ಕಳೆದ 24 ಗಂಟೆಯಲ್ಲಿ ಬರೋಬ್ಬರಿ 97,894 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 1,132 ಸೋಂಕಿತರು ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 51,18,254ಕ್ಕೆ ಏರಿಕೆಯಾಗಿದ್ದು, 10,09,976 ಸಕ್ರಿಯ ಪ್ರಕರಣಗಳಿವೆ. ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 83,198ಕ್ಕೆ ಏರಿಕೆಯಾಗಿದ್ದು ಕೊರೊನಾ ಪೀಡಿತ ರಾಷ್ಟ್ರಗಳ ಪೈಕಿ ಭಾರತ ಎರಡನೇ ಸ್ಥಾನದಲ್ಲಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ 2,97,506 ಸಕ್ರಿಯ ಪ್ರಕರಣಗಳಿವೆ. ಶೇ.37 ಕೊರೊನಾ ಮರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಇನ್ನುಳಿದಂತೆ ಕರ್ನಾಟಕ- 1,01,645, ಉತ್ತರ ಪ್ರದೇಶ-96,702, ಆಂಧ್ರ ಪ್ರದೇಶ-90,279 ಮತ್ತು ದೆಹಲಿಯಲ್ಲಿ 30,914 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರ, ಆಂಧ್ರ ಪ್ರದೇಶ ಮತ್ತು ಕರ್ನಾಟಕದಲ್ಲಿ ದೇಶದ ಶೇ.49 ಪ್ರಕರಣಗಳು ದಾಖಲಾಗಿವೆ. ಈ ಮೂರು ರಾಜ್ಯಗಳಲ್ಲಿ ಶೇ.52ರಷ್ಟು ಮರಣಗಳು ದಾಖಲಾಗಿವೆ.

Click to comment

Leave a Reply

Your email address will not be published. Required fields are marked *