Connect with us

Corona

39 ಲಕ್ಷ ದಾಟಿದ ಸೋಂಕಿತರ ಸಂಖ್ಯೆ- 30 ಲಕ್ಷಕ್ಕೂ ಹೆಚ್ಚು ಮಂದಿ ಡಿಸ್ಚಾರ್ಜ್

Published

on

ನವದೆಹಲಿ: ಹೆಮ್ಮಾರಿ ಕೊರೊನಾ ದಿನೇ ದಿನೇ ತನ್ನ ಅಟ್ಟಹಾಸವನ್ನು ಮರೆಯುತ್ತಿದ್ದು, ಒಂದೇ ದಿನ 83,341 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39 ಲಕ್ಷಕ್ಕೆ ಏರಿಕೆ ಆಗಿದೆ.

ಕಳೆದ 24 ಗಂಟೆಗಳಲ್ಲಿ 83,341 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಅಲ್ಲದೇ ಒಂದೇ ದಿನ 1,096 ಮಂದಿ ಕೊರೊನಾ ವೈರಸ್‍ಗೆ ಬಲಿಯಾಗಿದ್ದಾರೆ.

39,36,748 ಸೋಂಕಿತರ ಸಂಖ್ಯೆ 8,31,124 ಸಕ್ರಿಯ ಪ್ರಕರಣಗಳಿದ್ದು, 30,37,152 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದೂವರೆಗೂ 68,472 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 11.70 ಲಕ್ಷ ಮಂದಿಗೆ ಕೊರೊನಾ ಟೆಸ್ಟ್ ನಡೆಸಲಾಗಿದ್ದು, ಇದರಲ್ಲಿ 83,883 ಮಂದಿಗೆ ಪಾಸಿಟಿವ್ ಬಂದಿದೆ. ಸದ್ಯ ದೇಶದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 39 ಲಕ್ಷ ದಾಟಿದೆ. ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಕಡಿಮೆಯಾಗಿದ್ದ ಸೋಂಕು ಮತ್ತೆ ಹೆಚ್ಚಾಗುತ್ತಿದೆ.

Click to comment

Leave a Reply

Your email address will not be published. Required fields are marked *