Connect with us

Corona

ದೇಶದಲ್ಲಿ 33 ಲಕ್ಷಕ್ಕೆ ಏರಿದ ಸೋಂಕಿತರ ಸಂಖ್ಯೆ – ಒಂದೇ ದಿನ 1,023 ಮಂದಿ ಬಲಿ

Published

on

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಿನ್ನೆಯಷ್ಟೇ 32 ಲಕ್ಷಕ್ಕೇರಿದ್ದ ಸೋಂಕಿತರ ಸಂಖ್ಯೆ ಇಂದು 33 ಲಕ್ಷದ ಗಡಿ ದಾಟಿದೆ. ಒಂದೇ ದಿನ 1,023 ಮಂದಿ ಚೀನಿ ವೈರಸ್ ಗೆ ಬಲಿಯಾಗಿದ್ದಾರೆ.

ಕಳೆದ 21 ಗಂಟೆಯಲ್ಲಿ 75,760 ಮಂದಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 33,10,235ಕ್ಕೆ ಏರಿಕೆಯಾಗಿದೆ.

33 ಲಕ್ಷದ ಗಡಿ ದಾಟಿರುವ ಸೋಂಕಿತರ ಸಂಖ್ಯೆಯಲ್ಲಿ 7,25,991 ಸಕ್ರಿಯ ಪ್ರಕರಣಗಳಿದ್ದು, 25,23,772 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದೂವರೆಗೂ ದೇಶದಲ್ಲಿ 60,472 ಮಂದಿ ಕೋವಿಡ್ 19ಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ನಿನ್ನೆ ಒಂದೇ ದಿನ 9,24,998 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 3,85,76,510 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

Click to comment

Leave a Reply

Your email address will not be published. Required fields are marked *