Connect with us

Corona

ಒಂದೇ ದಿನ 78,512 ಮಂದಿಗೆ ಕೊರೊನಾ- 36 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

Published

on

ನವದೆಹಲಿ: ಚೀನಿ ವೈರಸ್ ಕೊರೊನಾ ಅಟ್ಟಹಾಸ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಸೋಂಕಿತರ ಸಂಖ್ಯೆ 36 ಲಕ್ಷದ ಗಡಿ ದಾಟಿದೆ.

ಒಂದೇ ದಿನ 78,512 ಮಂದಿಯಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. 971 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.

36,21,246 ಸೋಂಕಿತರ ಸಂಖ್ಯೆ 7,81,975 ಸಕ್ರಿಯ ಪ್ರಕರಣಗಳಿದ್ದು, 27,74,802 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದೂವರೆಗೂ 64,469 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ನಿನ್ನೆ ಒಂದೇ ದಿನ 8,46,278 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 4,23,07,914 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ಇತ್ತ ಕೊರೊನಾ ನಿಯಂತ್ರಣ ವೈಫಲ್ಯ ಸಂಬಂಧ ವ್ಯಂಗ್ಯವಾಡಿರುವ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ಜನರನ್ನು ಭಾವನಾತ್ಮಕವಾಗಿ ಮೋಸಗೊಳಿಸಿದ ಪರಿಣಾಮವಿದು. ಬಿಜೆಪಿ ಘೋಷಿತ ‘ವಿಶ್ವಗುರು’ಗಳ ಬತ್ತಳಿಕೆಯಲ್ಲಿ ಕೊರೊನಾ ಸದ್ದಡಗಿಸಲು ಇನ್ಯಾವ ಅಸ್ತ್ರಗಳಿದ್ದಾವೋ ಎಂದು ಪ್ರಶ್ನಿಸಿದ್ದಾರೆ.

Click to comment

Leave a Reply

Your email address will not be published. Required fields are marked *