Connect with us

Corona

ಒಂದೇ ದಿನ 83ಸಾವಿರ ಮಂದಿಗೆ ಕೊರೊನಾ- 56 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

Published

on

ನವದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಒಂದೊಂದು ಲಕ್ಷ ಏರಿಕೆಯಾಗುತ್ತಿದ್ದು, ನಿನ್ನೆ 55 ಲಕ್ಷ ಗಡಿ ದಾಟಿದ್ದ ಸೋಂಕಿತರ ಸಂಖ್ಯೆ ಇಂದು 56 ಲಕ್ಷಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 83,347 ಮಂದಿಗೆ ಕೊರೊನಾ ಸೋಂಕು ಅಂಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 5,646,011ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 1,085 ಮಂದಿ ಮಹಾಮಾರಿ ಕೋವಿಡ್ 19ಗೆ ಬಲಿಯಾಗಿದ್ದಾರೆ. ಹೀಗಾಗಿ ಇದೂವರೆಗೆ ದೇಶದಲ್ಲಿ 90,020 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.

5,646,011 ಸೋಂಕಿತರ ಪೈಕಿ 9,68,377 ಸಕ್ರಿಯ ಪ್ರಕರಣಗಳಿದ್ದು, 45,87,614 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ನಿನ್ನೆ ಒಂದೇ ದಿನ 9,53,683 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 6,62,79,462 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

Click to comment

Leave a Reply

Your email address will not be published. Required fields are marked *