Connect with us

Corona

ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

Published

on

ನವದೆಹಲಿ: ಭಾರತದಲ್ಲಿ ಚೀನಿ ವೈರಸ್ ಕೋವಿಡ್ 19 ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 58 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 86,052 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 58,18,571ಕ್ಕೆ ಏರಿಕೆಯಾಗಿದೆ.

ಒಂದೇ ದಿನ 1,141 ಮಹಾಮಾರಿಗೆ ಬಲಿಯಾಗಿದ್ದಾರೆ. ಇದೂವರೆಗೂ ಒಟ್ಟು 92,290 ಮಂದಿ ಕೋವಿಡ್ 19 ನಿಂದ ಮೃತಪಟ್ಟಿದ್ದಾರೆ. 58,18,571 ಸೋಂಕಿತರ ಪೈಕಿ 9,70,116 ಸಕ್ರಿಯ ಪ್ರಕರಣಗಳಿದ್ದು, 47,56,165 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ನಿನ್ನೆ ಒಂದೇ ದಿನ 14,92,409 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 6,89,28,440 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ಇಡೀ ವಿಶ್ವಕ್ಕೆ ಹೋಲಿಸಿದಾಗ ಭಾರತದಲ್ಲಿ ಕಡಿಮೆ ಸಾವಿನ ಪ್ರಮಾಣ ಕಂಡುಬರುತ್ತಿದೆ. ಇದು ವೈರಸ್ ಉಂಟುಮಾಡುವ ಅಪಾಯ ಕ್ರಮೇಣ ಕೀಣಿಸುತ್ತಾ ಬರುತ್ತಿದೆ ಎಂಬದನ್ನು ಸೂಚಿಸುತ್ತಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಇದಲ್ಲದೆ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ 19 ಪ್ರಕರಣಗಳು ಪತ್ತೆಯಾಗುತ್ತಿದ್ದು, ಆತಂಕ ಸೃಷ್ಟಿಸಿದೆ.

Click to comment

Leave a Reply

Your email address will not be published. Required fields are marked *