Connect with us

Corona

ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 66 ಲಕ್ಷಕ್ಕೆ ಏರಿಕೆ

Published

on

ನವದೆಹಲಿ: ಕೊರೊನಾ ವೈರಸ್ ಆರ್ಭಟ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಸೋಂಕಿತರ ಸಂಖ್ಯೆ 66 ಲಕ್ಷಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 74,442 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 66,23,816 ಕ್ಕೆ ಏರಿಕೆಯಾಗಿದೆ. 66,23,816 ಸೋಂಕಿತರ ಸಂಖ್ಯೆಯಲ್ಲಿ 9,34,427 ಸಕ್ರಿಯ ಪ್ರಕರಣಗಳಿದ್ದರೆ, 55,86,704 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಒಂದೇ ದಿನ 903 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ 1,02,685 ಮಂದಿಗೆ ಕೊರೊನಾ ವೈರಸ್ ಗೆ ತುತ್ತಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ನಿನ್ನೆ ಒಂದೇ ದಿನ 9,89,860 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 7,99,82,394 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

Click to comment

Leave a Reply

Your email address will not be published. Required fields are marked *