Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಲಭೂಷಣ್ ಜಾಧವ್‍ರನ್ನ ಭೇಟಿಯಾದ ಭಾರತದ ರಾಜತಾಂತ್ರಿಕ ಅಧಿಕಾರಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುಲಭೂಷಣ್ ಜಾಧವ್‍ರನ್ನ ಭೇಟಿಯಾದ ಭಾರತದ ರಾಜತಾಂತ್ರಿಕ ಅಧಿಕಾರಿಗಳು

Latest

ಕುಲಭೂಷಣ್ ಜಾಧವ್‍ರನ್ನ ಭೇಟಿಯಾದ ಭಾರತದ ರಾಜತಾಂತ್ರಿಕ ಅಧಿಕಾರಿಗಳು

Public TV
Last updated: September 2, 2019 4:09 pm
Public TV
Share
2 Min Read
Kulbhushan Jadhav
SHARE

ಇಸ್ಲಾಮಾಬಾದ್: ಪಾಕಿಸ್ತಾನದ ಬಂಧನದಲ್ಲಿರುವ ಕುಲಭೂಷಣ್ ಜಾಧವ್ ಅವರನ್ನು ಭಾರತದ ರಾಜತಾಂತ್ರಿಕ ಅಧಿಕಾರಿಗಳು ಇಂದು ಭೇಟಿಯಾಗಿದ್ದಾರೆ. ಈ ಮೂಲಕ ಜಾಧವ್ ಅವರನ್ನು ಭಾರತಕ್ಕೆ ಕರೆತರಲು ಸಕಲ ಸಿದ್ಧತೆ ನಡೆದಿದೆ.

ಕಮಾಂಡರ್ ಕುಲಭೂಷಣ್ ಜಾಧವ್ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದ ಅಂತರಾಷ್ಟ್ರೀಯ ಕೋರ್ಟ್ (ಐಸಿಜೆ), ಪ್ರಕರಣವನ್ನು ಖುಲಾಸೆಗೊಳಿಸಿ ಜಾಧವ್ ಅವರನ್ನು ಬಿಡುಗಡೆ ಮಾಡಬೇಕು. ಜೊತೆಗೆ ಶೀಘ್ರದಲ್ಲಿ ರಾಜತಾಂತ್ರಿಕ ಸಂಪರ್ಕ ಕಲ್ಪಿಸುವಂತೆ ಪಾಕಿಸ್ತಾನಕ್ಕೆ ಆದೇಶ ನೀಡಿತ್ತು. ಹೀಗಾಗಿ ಭಾರತದ ರಾಜತಾಂತ್ರಿಕ ಅಧಿಕಾರಿಗಳು ಕುಲಭೂಷಣ್ ಜಾಧವ್ ಅವರನ್ನು ತಾಯ್ನಾಡಿಗೆ ಕರೆತರಲು ಪಾಕ್ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ.

#UPDATE: The meeting between India's Deputy High Commissioner to Pakistan, Gaurav Ahluwalia and Ministry of Foreign Affairs's (MoFA) Mohammad Faisal, begins. https://t.co/rGPaOo2jYu

— ANI (@ANI) September 2, 2019

ಐಸಿಜೆ ತೀರ್ಪು, ರಾಜತಾಂತ್ರಿಕ ನಿಯಮ ಹಾಗೂ ಪಾಕಿಸ್ತಾನದ ಕಾನೂನುಗಳಿಗೆ ಅನುಸಾರವಾಗಿ ಕುಲಭೂಷಣ್ ಜಾಧವ್ ಅವರಿಗೆ ಸೆಪ್ಟೆಂಬರ್ 2ರಂದು ರಾಜತಾಂತ್ರಿಕ ಸಂಪರ್ಕದ ಅವಕಾಶ ನೀಡಲಾಗುವುದು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ಮೊಹಮ್ಮದ್ ಫೈಸಲ್ ತಿಳಿಸಿದ್ದರು. ಹೀಗಾಗಿ ಕುಲಭೂಷಣ್ ಜಾಧವ್ ಅವರನ್ನು ಪಾಕಿಸ್ತಾನದಲ್ಲಿರುವ ಭಾರತದ ಉಪ ಹೈಕಮಿಷನರ್ ಗೌರವ್ ಅಹ್ಲುವಾಲಿಯಾ ಅವರು ಭೇಟಿಯಾಗಿದ್ದಾರೆ.

ಗೌರವ್ ಅಹ್ಲುವಾಲಿಯಾ ಅವರು ಕುಲಭೂಷಣ್ ಜಾಧವ್ ಅವರೊಂದಿಗೆ 2 ಗಂಟೆ 25 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಎರಡು ವರ್ಷಗಳ ಬಳಿಕ ಭಾರತದ ಅಧಿಕಾರಿಯೊಬ್ಬರು ಜಾಧವ್ ಅವರನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದ್ದಾರೆ.

kulbhushanjadhav harish salve

ಏನಿದು ಪ್ರಕರಣ?:
ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. 2017ರ ಏಪ್ರಿಲ್ ನಲ್ಲಿ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.

ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಜಾಧವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು. ಅಲ್ಲದೆ 2017ರಲ್ಲಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು.

ICJ

ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು. ಹೀಗಾಗಿ ಭಾರತ ಮೇ 2017ರಂದು ಅಂತರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡ 10 ಸದಸ್ಯರುಳ್ಳ ನ್ಯಾಯಪೀಠ 18 ಮೇ 2017ರಂದು ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು.

ಭಾರತ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದು, ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್ ನಲ್ಲಿ ಭಾರತ ಮಂಡಿಸಿತ್ತು.

TAGGED:Gaurav AhluwaliaIndia's Deputy High CommissionerKulbhushan JadhavpakistanPublic TVಐಸಿಜೆಕುಲಭೂಷಣ್ ಜಾಧವ್ಗೌರವ್ ಅಹ್ಲುವಾಲಿಯಾಪಬ್ಲಿಕ್ ಟಿವಿಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
18 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?