ನವದೆಹಲಿ: ಸುಪ್ರೀಂ ಕೋರ್ಟಿನ ನಿವೃತ್ತ ಮುಖ್ಯ ನ್ಯಾಯಾಧೀಶ ಪಿನಾಕಿ ಚಂದ್ರ ಘೋಷ್ ದೇಶದ ಮೊದಲ ಲೋಕಪಾಲ್ ಆಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕಕ್ಕೆ ಅಂಕಿತ ಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಹಾಗೂ ಹಿರಿಯ ವಕೀಲ ಮುಕುಲ್ ರೋಹತ್ಗಿ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ನಿವೃತ್ತ ನ್ಯಾ.ಪಿ.ಸಿ.ಘೋಷ್ ಅವರ ಹೆಸರನ್ನು ಅಂತಿಮಗೊಳಿಸಿತ್ತು. ಆಯ್ಕೆ ಸಮಿತಿಯ ಮುಂದೆ ಪಿ.ಸಿ.ಘೋಷ್ ಅವರ ಹೆಸರು ಮುಂಚೂಣಿಯಲ್ಲಿತ್ತು. ಹೀಗಾಗಿ ನೇಮಕ ಮಂಡಳಿ ಅವರನ್ನೇ ಅಂತಿಮಗೊಳಿಸಿ ನೇಮಕ ಮಾಡಿದೆ. ಇದನ್ನು ಓದಿ: ಲೋಕಪಾಲ್ ಆಯ್ಕೆ ಸಮಿತಿ ಸಭೆಯ ವಿಶೇಷ ಆಹ್ವಾನವನ್ನು ತಿರಸ್ಕರಿಸಿದ ಖರ್ಗೆ
Advertisement
Advertisement
ಪಿ.ಸಿ.ಘೋಷ್ ಅವರ ನೇಮಕಾತಿ ಬೆನ್ನಲ್ಲೇ ಲೋಕಪಾಲ್‍ನ 8 ಜನ ಸದಸ್ಯರ ಆಯ್ಕೆಯು ಕೆಲವೇ ದಿನಗಳ ನಿರ್ಧಾರವಾಗಲಿದೆ ಎಂದು ಮೂಲಗಳು ತಿಳಿಸಿವೆ. ಟೀಮ್‍ನಲ್ಲಿ ಲೋಕಪಾಲ ಅವರಲ್ಲದೆ, ನಾಲ್ವರು ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿಗಳು(ಇವರಲ್ಲಿ ಒಬ್ಬರು ಮಹಿಳೆ), ನಾಲ್ವರು ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಇರುತ್ತಾರೆ.
Advertisement
ನ್ಯಾ.ಪಿ.ಸಿ.ಘೋಷ್ ಅವರು ನಾಲ್ಕು ವರ್ಷಗಳ ಕಾಲ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಧೀಶರಾಗಿ ಸೇವೆ ಸಲ್ಲಿಸಿ ಮೇ 2017ರಂದು ನಿವೃತ್ತರಾದರು. ಸದ್ಯ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎಂಎಚ್‌ಆರ್‌ಡಿ) ಸದಸ್ಯರಾಗಿದ್ದಾರೆ.
Advertisement
ಲೋಕಪಾಲ ಕಾರ್ಯವ್ಯಾಪ್ತಿ ಏನು?:
ಲೋಕಪಾಲರು ಹಾಲಿ ಮತ್ತು ಮಾಜಿ ಪ್ರಧಾನಿಗಳು, ಸಂಸದರು, ಕೇಂದ್ರ ಮಂತ್ರಿಗಳು, ಸರ್ಕಾರಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ಸಿಬ್ಬಂದಿ ಹಾಗೂ 10 ಲಕ್ಷ ರೂ.ಗಿಂತ ಹೆಚ್ಚಿನ ವಿದೇಶಿ ದೇಣಿಗೆ ಸ್ವೀಕರಿಸುವ ಸರ್ಕಾರೇತರ ಸಂಸ್ಥೆಗಳ(ಎನ್‍ಜಿಒ) ಮೇಲೆ ಕೇಳಿಬರುವ ದೂರುಗಳ ತನಿಖೆಯನ್ನು ನಡೆಸುವ ಅಧಿಕಾರವನ್ನು ಹೊಂದಿದ್ದಾರೆ.