ಚೆನ್ನೈ: ತವರಿನಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ನಡೆದ 3 ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ (Team India) 1-2 ಅಂತರದಲ್ಲಿ ಸೋತು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಂ.1 ಸ್ಥಾನ ಕಳೆದುಕೊಂಡಿದೆ.
ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ 21 ರನ್‌ಗಳ ಜಯ ಸಾಧಿಸಿದ ಆಸ್ಟ್ರೇಲಿಯಾ ತಂಡ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ 12 ಸ್ಥಳಗಳಲ್ಲಿ ವಿಶ್ವಕಪ್ ಟೂರ್ನಿ – ಮೋದಿ ಸ್ಟೇಡಿಯಂನಲ್ಲಿ ಫೈನಲ್
Advertisement
Advertisement
2023ರ ಜನವರಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ 3-0 ಅಂತರದ ವೈಟ್‌ವಾಶ್ ಗೆಲುವು ದಾಖಲಿಸಿದ ಭಾರತ ತಂಡ ಒಡಿಐನಲ್ಲಿ ನಂ.1 ತಂಡವಾಗಿ ಹೊರಹೊಮ್ಮಿತ್ತು. ಆಸ್ಟ್ರೇಲಿಯಾ ಎದುರು ಮೊದಲ ಪಂದ್ಯದಲ್ಲಿ 5 ವಿಕೆಟ್‌ಗಳ ಜಯ ದಾಖಲಿಸಿದರೂ ಸತತ 2 ಪಂದ್ಯಗಳ ಸೋಲಿನಿಂದಾಗಿ ಏಕದಿನ ರ‍್ಯಾಂಕಿಂಗ್‌ನಲ್ಲಿ ನಂ.1 ಪಟ್ಟ ಕಳೆದುಕೊಂಡಿದೆ. ಇದು 4 ವರ್ಷಗಳ ನಂತರ ಭಾರತ ತವರಿನಲ್ಲಿ ಸೋತ ಮೊದಲ ದ್ವಿಪಕ್ಷೀಯ ಸರಣಿಯಾಗಿದೆ. 2019ರಲ್ಲಿ ಆರನ್ ಫಿಂಚ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಕೊಹ್ಲಿ (Virat Kohli) ನಾಯತ್ವದಲ್ಲಿ ಟೀಂ ಇಂಡಿಯಾವನ್ನು ಮಣಿಸಿ ಸರಣಿ ಗೆದ್ದುಕೊಂಡಿತ್ತು.
Advertisement
Advertisement
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಭಾರತ ತಂಡದ ಶಿಸ್ತಿನ ಬೌಲಿಂಗ್ ದಾಳಿಯೆದುರು 49 ಓವರ್‌ಗಳಲ್ಲಿ 269 ರನ್ ಗಳಿಸಿ ಆಲ್‌ಔಟ್ ಆಯಿತು. 270 ರನ್‌ಗಳ ಗುರಿ ಪಡೆದ ಟೀಂ ಇಂಡಿಯಾ 49.1 ಓವರ್‌ಗಳಲ್ಲಿ 248 ರನ್‌ಗಳಿಗೆ ಸರ್ವಪತನ ಕಂಡು, ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿತು. ಇದನ್ನೂ ಓದಿ: WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್‌ಗಳ ಜಯ – ಫೈನಲ್‌ಗೆ ಗ್ರ್ಯಾಂಡ್ ಎಂಟ್ರಿ
ಚೇಸಿಂಗ್ ಆರಂಭಿದ ಭಾರತ (Team India) ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾದರೂ, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ಸ್ಮ್ಯಾನ್‌ಗಳ ವೈಫಲ್ಯ ಕಂಡಿತು. ಆರಂಭಿಕರಾದ ರೋಹಿತ್ ಶರ್ಮಾ (Rohit Sharma), ಶುಭಮನ್ ಗಿಲ್ ಜೋಡಿ ಮೊದಲ ವಿಕೆಟ್ ಪತನಕ್ಕೆ 9.1 ಓವರ್‌ಗಳಲ್ಲಿ 65 ರನ್ ಜೊತೆಯಾಟವಾಡಿದ್ದರು. 17 ಎಸೆತಗಳಲ್ಲಿ 30 ರನ್ ಗಳಿಸಿದ ರೋಹಿತ್ ಶರ್ಮಾ ಔಟಾಗುತ್ತಿದ್ದಂತೆ ಇತ್ತ 49 ಎಸೆತಗಳಲ್ಲಿ 37 ರ್ ಗಳಿಸಿದ್ದ ಶುಭಮನ್ ಗಿಲ್ ಸಹ ಔಟಾದರು. ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿ ಅರ್ಧಶತಕ ಬಾರಿಸಿದರೂ, 72 ಎಸೆತಗಳಲ್ಲಿ 54 ರನ್ ಗಳಿಸಿದ್ದಾಗ ವಿಕೆಟ್ ಕೈಚೆಲ್ಲಿದರು.
ಮಧ್ಯಮ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಲು ಯತ್ನಿಸಿದ ಕೆ.ಎಲ್ ರಾಹುಲ್ ಸಿಕ್ಸರ್ ಸಿಡಿಸುವ ಬರದಲ್ಲಿ ಬೌಂಡರಿ ಕ್ಯಾಚ್ ನೀಡಿ ಪೆವಿಲಿಯನ್ ಸೇರಿಕೊಂಡರು. ಇತ್ತ ಸ್ಥಿರವಾಗಿ ಬ್ಯಾಟಿಂಗ್ ನಡೆಸುತ್ತಿದ್ದ ಹಾರ್ದಿಕ್ ಪಾಂಡ್ಯ ಸಹ 40 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದರು. ಇದೇ ಹಾದಿಯಲ್ಲಿ ಒಂದೊಂದೇ ವಿಕೆಟ್ ಪತನಗೊಂಡಿತು. ಅಂತಿಮವಾಗಿ ಭಾರತ 49.1 ಓವರ್‌ಗಳಲ್ಲಿ 248 ರನ್ ಗಳಿಗೆ ಆಲೌಟ್ ಆಯಿತು.
ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಆಡಮ್ ಝಾಂಪ 10 ಓವರ್‌ಗಳಲ್ಲಿ 45 ರನ್ ನೀಡಿ 4 ವಿಕೆಟ್ ಕಿತ್ತರು. ಆಸ್ಟೋನ್ ಅಗರ್ 2 ವಿಕೆಟ್ ಪಡೆದರೆ, ಮಾರ್ಕಸ್ ಸ್ಟೋಯ್ನಿಸ್, ಸೇನ್ ಅಬಾಟ್ ತಲಾ ಒಂದೊಂದು ವಿಕೆಟ್ ಪಡೆದರು.
ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದಲ್ಲಿ ಯಾರೋಬ್ಬರೂ ಅರ್ಧಶತಕ ಸಿಡಿಸಿಲ್ಲವಾದರೂ 269 ರನ್‌ಗಳ ಸಾಧಾರಣ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಯಿತು. ಟ್ರಾವಿಸ್ ಹೆಡ್ 33 ರನ್, ಮಿಚೆಲ್ ಮಾರ್ಷ್ (Mitchell Marsh) 47 ರನ್, ಅಲೆಕ್ಸ್ ಕ್ಯಾರಿ 38 ರನ್ ಗಳಿಸಿ ತಂಡಕ್ಕೆ ನೆರವಾದರು.
ಭಾರತದ ಪರ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಕುಲ್‌ದೀಪ್ ಯಾದವ್ ತಲಾ 3 ಕಿತ್ತರೆ, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದು ಆಸೀಸ್ ಅಬ್ಬರಕ್ಕೆ ಬ್ರೇಕ್ ಹಾಕಿದ್ದರು.