ನವದೆಹಲಿ: ಅಕ್ಟೋಬರ್- ಡಿಸೆಂಬರ್ ಅವಧಿಯ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ (Indian Economy) ನಿರೀಕ್ಷೆಗೂ ಮೀರಿ ವೃದ್ಧಿಯಾಗಿದೆ.
ಈ ಅವಧಿಯಲ್ಲಿ ಹಲವು ಸಂಸ್ಥೆಗಳು ಜಿಡಿಪಿ (GDP) 6.6% ರಷ್ಟು ಪ್ರಗತಿ ಸಾಧಿಸಬಹುದು ಎಂದು ಅಂದಾಜು ಮಾಡಿದ್ದವು. ಆದರೆ ಈ ನಿರೀಕ್ಷೆಗೂ ಮೀರಿ ಜಿಡಿಪಿ 8.4% ರಷ್ಟು ಪ್ರಗತಿ ಸಾಧಿಸಿದೆ.
Advertisement
Big news alert!
India's GDP surged beyond expectations, boasting an 8.4% growth rate in Q3 2023-24 compared to the previous year. GDP at constant prices jumps to ₹43.72 lakh crore from ₹40.35 lakh crore in Q3 2022-23. #GDP #EconomicGrowth pic.twitter.com/eUuSTjGAUx
— MyGovIndia (@mygovindia) February 29, 2024
Advertisement
ಕಳೆದ ಹಣಕಾಸು ವರ್ಷದ ಈ ಅವಧಿಯಲ್ಲಿ 4.3% ಜಿಡಿಪಿ ಪ್ರಗತಿ ಸಾಧಿಸಿತ್ತು. ನಿರ್ಮಾಣ ವಲಯದ (10.7%), ಉತ್ಪಾದನಾ ವಲಯ (8.5%), ಫೈನಾನ್ಸ್, ರಿಯಲ್ ಎಸ್ಟೇಟ್ ಇತ್ಯಾದಿ ಕ್ಷೇತ್ರ(8.2%) ಬೆಳವಣಿಗೆ ಸಾಧಿಸಿದೆ. ಆದರೆ ದೇಶದಲ್ಲಿ ಬರದಿಂದಾಗಿ ಕೃಷಿ ಕ್ಷೇತ್ರದಲ್ಲಿ ಮಾತ್ರ 0.7% ಬೆಳವಣಿಗೆಯಾಗಿರುವುದು ಕಳವಳಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಪಾಕಿಸ್ತಾನ ಮತ್ತು ಕಾಂಗ್ರೆಸ್ ಸ್ಥಿತಿ ಒಂದೇ ರೀತಿಯಾಗಿದೆ: ಜೋಶಿ
Advertisement
India's economic outlook shines bright as GDP estimates for FY 2023-24 surge to ₹172.9 lakh crore, reflecting a 7.6% growth rate. This substantial increase from the previous year underscores the nation's resilience and momentum in driving sustained economic expansion.… pic.twitter.com/vlOWXbsQKQ
— MyGovIndia (@mygovindia) February 29, 2024
Advertisement
2023-24ರ ಮೂರನೇ ತ್ರೈಮಾಸಿಕದಲ್ಲಿ ಸ್ಥಿರ (2011-12) ದರಗಳಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದು 2022-23 ರ ಮೂರನೇ ತ್ರೈಮಾಸಿಕದಲ್ಲಿ 40.35 ಲಕ್ಷ ಕೋಟಿ ರೂ ಆಗಿತ್ತು.
ಮೂರನೇ ತ್ರೈಮಾಸಿಕದಲ್ಲಿ 8.4% ಜಿಡಿಪಿ ಬೆಳವಣಿಗೆಯು ದೃಢವಾದ ಭಾರತೀಯ ಆರ್ಥಿಕತೆಯ ಶಕ್ತಿ ಮತ್ತು ಅದರ ಸಾಮರ್ಥ್ಯವನ್ನು ತೋರಿಸುತ್ತದೆ. ವೇಗದ ಆರ್ಥಿಕ ಬೆಳವಣಿಗೆಯನ್ನು ಕಾಣಲು ನಮ್ಮ ಪ್ರಯತ್ನಗಳು ಮುಂದುವರಿಯಲಿದೆ. ಇದು 140 ಕೋಟಿ ಭಾರತೀಯರಿಗೆ ಉತ್ತಮ ಜೀವನವನ್ನು ನಡೆಸಲು ಮತ್ತು ವಿಕಸಿತ್ ಭಾರತವನ್ನು ರಚಿಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM NarendraModi) ಹೇಳಿದ್ದಾರೆ. ಇದನ್ನೂ ಓದಿ: ಮರಿ ಖರ್ಗೆ ಪುಕ್ಕಲ, ಸ್ವಂತ ಕ್ಷೇತ್ರದಲ್ಲಿ ಸತ್ಯವನ್ನು ಎದುರಿಸುವ ಧೈರ್ಯವಿಲ್ಲ: ಸೂಲಿಬೆಲೆ ಕಿಡಿ
ಜಿಡಿಪಿ ಎಂದರೇನು?
ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್ ಎಸ್ಟೇಟ್, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.