Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಡಿಗೋಗೆ ಮಾತ್ರ ಯಾಕೆ ಸಮಸ್ಯೆ? ಹೊಸ ನಿಯಮಗಳು ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಇಂಡಿಗೋಗೆ ಮಾತ್ರ ಯಾಕೆ ಸಮಸ್ಯೆ? ಹೊಸ ನಿಯಮಗಳು ಏನು?

Karnataka

ಇಂಡಿಗೋಗೆ ಮಾತ್ರ ಯಾಕೆ ಸಮಸ್ಯೆ? ಹೊಸ ನಿಯಮಗಳು ಏನು?

Public TV
Last updated: December 4, 2025 4:20 pm
Public TV
Share
3 Min Read
IndiGo Flight
SHARE

ನವದೆಹಲಿ: ಸಿಬ್ಬಂದಿ ರೋಸ್ಟರಿಂಗ್ ನಿಯಮಗಳ (Flight Duty Time Limitations) ಜಾರಿ ಮಾಡಿದ್ದರಿಂದ ಬೆಂಗಳೂರು ಸೇರಿದಂತೆ, ದೇಶಾದ್ಯಂತ ಕಳೆದ ಎರಡು ದಿನಗಳಿಂದ 400ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ಇಂಡಿಗೋ (Indigo) ವಿಮಾನ ಸಂಸ್ಥೆ ಸ್ಥಗಿತಗೊಳಿಸಿದೆ.

ಸಣ್ಣ ತಂತ್ರಜ್ಞಾನದ ದೋಷಗಳು, ಚಳಿಗಾಲಕ್ಕೆ ಸಂಬಂಧಿಸಿದ ವೇಳಾಪಟ್ಟಿ ಬದಲಾವಣೆಗಳು, ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು, ವಾಯುಯಾನ ವ್ಯವಸ್ಥೆಯಲ್ಲಿ ಹೆಚ್ಚಿದ ದಟ್ಟಣೆ ಸಿಬ್ಬಂದಿ ರೋಸ್ಟರಿಂಗ್ ನಿಯಮಗಳಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ ಎಂದು ಇಂಡಿಗೋ ಹೇಳಿದೆ.

ಈ ಎಲ್ಲಾ ಸಮಸ್ಯೆಗಳ ಪೈಕಿ ಸಿಬ್ಬಂದಿ ರೋಸ್ಟರಿಂಗ್ ನಿಯಮವನ್ನು ಸರಿಯಾಗಿ ಪಾಲನೆ ಮಾಡದ ಕಾರಣ ಇಂಡಿಗೋ ವಿಮಾನದ ಹಾರಾಟದಲ್ಲಿ ಸಮಸ್ಯೆಯಾಗಿದೆ.

ಸಮಸ್ಯೆಗೆ ಕಾರಣ ಏನು?
ಭಾರತದ ವಿಮಾನ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಬಹಳ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪೈಲಟ್‌ಗಳ ಕೊರತೆ ಇದ್ದರೂ ಇರುವ ಪೈಲಟ್‌ಗಳ ಮೇಲೆ ಕಂಪನಿಗಳು ಹೆಚ್ಚಿನ ಒತ್ತಡ ಹಾಕಿಸುತ್ತವೆ ಎಂಬ ದೂರುಗಳು ಬರುತ್ತಿದ್ದವು. ಸಿಬ್ಬಂದಿ ಆರೋಗ್ಯ, ಮಾನಸಿಕ ಆರೋಗ್ಯ.. ಇತ್ಯಾದಿ ಸಮಸ್ಯೆಯನ್ನು ಪರಿಗಣಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಲು ಪೈಲಟ್‌ಗಳು ಮತ್ತು ಸಿಬ್ಬಂದಿಗೆ ಸಾಕಷ್ಟು ವಿಶ್ರಾಂತಿ ನೀಡಲು ಹೊಸ ನಿಯಮಗಳನ್ನು ಜಾರಿ ಮಾಡಿದೆ. ಈ ನಿಯಮವನ್ನು ಕಂಪನಿಗಳು ಈಗ ಕಡ್ಡಾಯವಾಗಿ ಪಾಲನೆ ಮಾಡಬೇಕಾದ ಕಾರಣ ಇಂಡಿಗೋ ಕಾರ್ಯಾಚರಣೆಯಲ್ಲಿ ಸಮಸ್ಯೆ ಆರಂಭವಾಗಿದೆ. ಇದನ್ನೂ ಓದಿ: ಇಂಡಿಗೋದಲ್ಲಿ ಭಾರೀ ಅಡಚಣೆ – ಬೆಂಗಳೂರಲ್ಲಿ 73 ಸೇರಿ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

Indias New Airline Safety Norms

ಯಾವ ನಿಯಮಗಳು ಏನು ಬದಲಾವಣೆಯಾಗಿದೆ?
ಪೈಲಟ್ ಅಥವಾ ಕ್ಯಾಬಿನ್ ಸಿಬ್ಬಂದಿಗೆ ಒಂದು ದಿನದಲ್ಲಿ ಒಟ್ಟು 10-13 ಗಂಟೆ ಕರ್ತವ್ಯ ಮಾಡಬಹುದಿತ್ತು. ಆದರೆ ವಿಮಾನಯಾನ ರೋಸ್ಟರ್ ಮಾನದಂಡಗಳ ಪ್ರಕಾರ ಈಗ ಗರಿಷ್ಠ 10 ಗಂಟೆ ಮಾತ್ರ ನಿಗದಿ ಮಾಡಲಾಗಿದೆ.

ಈ ಮೊದಲು ವಾರದಲ್ಲಿ ಕನಿಷ್ಠ 36 ಗಂಟೆ ವಿಶ್ರಾಂತಿ ನೀಡಲಾಗುತ್ತಿತ್ತು. ಆದರೆ ಈಗ ಕನಿಷ್ಠ 48 ಗಂಟೆ ವಿಶ್ರಾಂತಿ ಪಡೆಯಬೇಕೆಂದು ಸೂಚಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡಿದ ಬಳಿಕ 10 ಗಂಟೆ ವಿಶ್ರಾಂತಿ ಪಡೆಯಬಹುದಾಗಿತ್ತು. ಆದರೆ ಈಗ ಈ ಅವಧಿಯನ್ನು12 ಗಂಟೆಗೆ ವಿಸ್ತರಿಸಲಾಗಿದೆ.

ಮೊದಲು ರಾತ್ರಿ ಸಮಯದಲ್ಲಿ 6 ಬಾರಿ ಲ್ಯಾಂಡಿಂಗ್‌ ಮಾಡಲು ಅವಕಾಶವಿತ್ತು. ಆದರೆ ಈಗ 2 ಬಾರಿ ಮಾತ್ರ ಲ್ಯಾಂಡಿಂಗ್‌ಗೆ ಅವಕಾಶ ನೀಡಲಾಗಿದೆ.

ದಿನಕ್ಕೆ 8-10 ಗಂಟೆಗಳು, ವಾರಕ್ಕೆ 30 ಗಂಟೆಗಳು ಅಥವಾ 28 ದಿನಗಳಲ್ಲಿ ಗರಿಷ್ಠ100 ಗಂಟೆ ವಿಮಾನ ಹಾರಾಟಕ್ಕೆ ಸಮಯ ಮಿತಿಯನ್ನು ಹಾಕಲಾಗಿದೆ. ಇದು ವಾರ್ಷಿಕವಾಗಿ 1,000 ಗಂಟೆಗಳಿಗಿಂತ ಹೆಚ್ಚಿರಬಾರದು. ಯಾವುದೇ ವಿಮಾನಯಾನ ಸಂಸ್ಥೆಯು ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿಯನ್ನು ಈ ಮಿತಿಗಳಿಗಿಂತ ಹೆಚ್ಚಿನ ಅವಧಿ ಕೆಲಸ ಮಾಡಿಸುವಂತಿಲ್ಲ.

 

ಇಂಡಿಗೋಗೆ ಮಾತ್ರ ಯಾಕೆ ಸಮಸ್ಯೆ?
ದೇಶದ ವಾಯುಯಾನ ಮಾರುಕಟ್ಟೆಯಲ್ಲಿ ಇಂಡಿಗೋ 64% ಪಾಲನ್ನು ಹೊಂದಿದ್ದು ಏರ್‌ ಇಂಡಿಯಾ 27% ಪಾಲನ್ನು ಹೊಂದಿದೆ. ಇಂಡಿಗೋ ಪ್ರತಿದಿನ 2,200 ಕ್ಕೂ ಹೆಚ್ಚು ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸುತ್ತದೆ. ಇದು ಏರ್ ಇಂಡಿಯಾ ಒಂದು ದಿನದಲ್ಲಿ ಕಾರ್ಯನಿರ್ವಹಿಸುವ ವಿಮಾನಗಳ ಸಂಖ್ಯೆಯ ಎರಡು ಪಟ್ಟು ಹೆಚ್ಚು.

ಬೇರೆ ಕಂಪನಿಗಳಿಗೆ ಹೋಲಿಸಿದರೆ ಇಂಡಿಗೋ ಕಡಿಮೆ ವೆಚ್ಚದ ವಿಮಾನ ಸೇವೆಗಳನ್ನು ನೀಡುತ್ತಿದೆ. ರಾತ್ರಿ ಸಮಯದಲ್ಲೇ ಹೆಚ್ಚಿನ ವಿಮಾನಗಳನ್ನು ಹಾರಿಸುತ್ತದೆ. ಡಿಜಿಸಿಎ ರಾತ್ರಿ ವಿಮಾನ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಠಿಣ ನಿಯಮ ಜಾರಿ ಮಾಡಿದ್ದು ಇಂಡಿಗೋಗೆ ಬಹಳ ಹೊಡೆತ ನೀಡಿದೆ.

ಡಿಜಿಸಿಎ ಜನವರಿಯಲ್ಲೇ ಈ ನಿಯಮ ಜಾರಿ ಮಾಡಿದ್ದರೂ ಕಂಪನಿಗಳು ಹಂತ ಹಂತವಾಗಿ ಈ ನಿಯಮಗಳನ್ನು ಪಾಲನೆ ಮಾಡಬೇಕೆಂದು ಸೂಚಿಸಿತ್ತು. ಜುಲೈ 1 ರಂದು ಮೊದಲ ಹಂತ ಜಾರಿಯಾಗಿತ್ತು. ಈ ಸಂದರ್ಭದಲ್ಲಿ 15 ಷರತ್ತುಗಳು ಸಡಿಲವಾಗಿತ್ತು. ನವೆಂಬರ್‌ 1 ರಿಂದ ನೈಟ್‌ ಲ್ಯಾಂಡಿಂಗ್‌ ಸೇರಿದಂತೆ ಉಳಿದ ಷರತ್ತುಗಳು ಜಾರಿಯಾದವು.

ಉಳಿದ ಕಂಪನಿಗಳಿಗೆ ಇಂಡಿಗೋದಷ್ಟು ವಿಮಾನಗಳನ್ನು ಹಾರಿಸದ ಕಾರಣ ಅವುಗಳಿಗೆ ಇಷ್ಟೊಂದು ಸಮಸ್ಯೆಯಾಗಿಲ್ಲ. ಆದರೆ ಇಂಡಿಗೋ ಸಂಸ್ಥೆ ತನ್ನ ಸಿಬ್ಬಂದಿ ವೇಳಾಪಟ್ಟಿಯನ್ನು ಸರಿಯಾಗಿ ಮಾಡದ ಕಾರಣ ಈಗ ದಿಢೀರ್‌ ಸಮಸ್ಯೆಯಾಗಿದೆ.

TAGGED:DGCAindiaindigoಇಂಡಿಗೋಡಿಜಿಸಿಎಭಾರತವಿಮಾನ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
10 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
13 minutes ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
30 minutes ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
32 minutes ago
Flights
Latest

ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ

Public TV
By Public TV
45 minutes ago
Indian Origin Men Fined Rs 1.7 Lakh Each In for Spitting Paan On Streets
Latest

ಲಂಡನ್‌ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?