ಮುಂಬೈ: ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson), ಮುಂಬರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ (Team India) ಪರ ಆಡಲು ಕಂಡಿದ್ದ ಕನಸು ಭಗ್ನವಾದಂತೆ ಕಾಣ್ತಿದೆ.
ಈಗಾಗಲೇ ಆರಂಭಗೊಂಡಿರುವ ಏಷ್ಯಾಕಪ್ ಟೂರ್ನಿಯಲ್ಲೂ ಸಂಜು ಸ್ಯಾಮ್ಸನ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಳ್ಳದೇ ಬ್ಯಾಕಪ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದೀಗ ಕೆ.ಎಲ್ ರಾಹುಲ್ ಆಗಮನದಿಂದ ಸಂಜು ಸ್ಯಾಮ್ಸನ್‌ಗೆ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸ್ಥಾನ ಕೈತಪ್ಪಿದೆ ಎಂದು ತಿಳಿದುಬಂದಿದೆ.
ಅಕ್ಟೋಬರ್ 5 ರಿಂದ ಸೆಪ್ಟೆಂಬರ್ 30ರ ವರೆಗೆ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ ಭಾನುವಾರ (ಇಂದು) ಬಿಸಿಸಿಐ ಟೀಂ ಇಂಡಿಯಾ ಬಲಿಷ್ಠ ತಂಡ ಪ್ರಕಟಿಸುವ ಸಾಧ್ಯತೆಗಳಿವೆ. ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಈಗಾಗಲೇ ಶ್ರೀಲಂಕಾಕ್ಕೆ ತೆರಳಿ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ತಂಡವನ್ನ ಅಂತಿಮಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬ್ಯಾಕಪ್ ಪಟ್ಟಿ ಸೇರಿದ ಟೀಂ ಇಂಡಿಯಾ ಸ್ಟಾರ್ – ವಿಶ್ವಕಪ್ ಆಡುವ ಸಂಜು ಸ್ಯಾಮ್ಸನ್ ಕನಸು ಭಗ್ನ?
ಏಷ್ಯಾಕಪ್ ಟೂರ್ನಿಯಲ್ಲಿ ಒಂದು ತಂಡ 17 ಜನರನ್ನು ಒಳಗೊಳ್ಳುವುದರಿಂದ ಸಂಜು ಸ್ಯಾಮ್ಸನ್‌ಗೆ ಬ್ಯಾಕಪ್ ಪಟ್ಟಿಯಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ವಿಶ್ವಕಪ್ ಟೂರ್ನಿಯಲ್ಲಿ 15 ಜನರಿಗೆ ಮಾತ್ರ ಅವಕಾಶ ಇರುವುದರಿಂದ ಇಬ್ಬರನ್ನು ತೆಗೆದುಹಾಕಬೇಕಾಗುತ್ತದೆ. ಕೆ.ಎಲ್ ರಾಹುಲ್ ಸಂಪೂರ್ಣ ಫಿಟ್ ಆಗಿರುವುದರಿಂದ ಸಂಜು ಸ್ಯಾಮ್ಸನ್‌ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಕೈತಪ್ಪಲಿದೆ ಎಂದು ತಿಳಿದುಬಂದಿದೆ. ಅಲ್ಲದೇ ಕನ್ನಡಿಗ ಪ್ರಸಿದ್ಧ್ ಕೃಷ್ಣ ಹಾಗೂ ಇತ್ತೀಚೆಗಷ್ಟೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಯುವ ಆಟಗಾರ ತಿಲಕ್ ವರ್ಮಾ ಅವರು ಹೊರಗುಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Hockey 5s Asia Cup 2023- ಪೆನಾಲ್ಟಿ ಶೂಟೌಟ್‌ನಲ್ಲಿ ಪಾಕಿಸ್ತಾನ ಮಣಿಸಿ ಭಾರತ ಚಾಂಪಿಯನ್
ವಿಶ್ವಕಪ್‌ಗೆ ಟೀಂ ಇಂಡಿಯಾ ಸಂಭಾವ್ಯ ಪಟ್ಟಿ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ.
Web Stories