Asian Games 2023ಗೆ ಟೀಂ ಇಂಡಿಯಾ ರೆಡಿ – ರಿಂಕುಗೆ ಕೊನೆಗೂ ಸಿಕ್ತು ಚಾನ್ಸ್, ಫಸ್ಟ್ ರಿಯಾಕ್ಷನ್ ಏನು?

Public TV
2 Min Read
Rinku Singh 2 1

ಮುಂಬೈ: ಮುಂದಿನ ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ಚೀನಾದ ಹ್ಯಾಂಗ್‌ಜೂನಲ್ಲಿ ನಡೆಯುವ ಏಷ್ಯನ್ ಗೇಮ್ಸ್‌ನಲ್ಲಿ (Asian Games 2023) ಪಾಲ್ಗೊಳ್ಳಲು ಭಾರತ ತಂಡ ಸಜ್ಜಾಗಿದ್ದು, ಬಿಸಿಸಿಐ ತಂಡದ ಪಟ್ಟಿ ಪ್ರಕಟಿಸಿದೆ. ಏಷ್ಯನ್ ಗೇಮ್ಸ್‌ನಲ್ಲಿ ಮಹಾರಾಷ್ಟ್ರ ಮೂಲದ ಬ್ಯಾಟರ್ ಋತುರಾಜ್ ಗಾಯಕ್ವಾಡ್ (Ruturaj Gaikwad ಟೀಂ ಇಂಡಿಯಾ (Team India) ನಾಯಕತ್ವ ವಹಿಸುತ್ತಿದ್ದಾರೆ.

ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಕ್ರಿಕೆಟ್ ಕೂಡ ಸ್ಪರ್ಧೆಯ ಭಾಗವಾಗಿದೆ. ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 8ರ ವರೆಗೆ ಟಿ20 ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತದ ಮಹಿಳಾ ಹಾಗೂ ಪುರುಷರ ತಂಡವನ್ನ ಕಣಕ್ಕಿಳಿಸಲು ಬಿಸಿಸಿಐನ (BCCI) ಅಪೆಕ್ಸ್ ಕೌನ್ಸಿಲ್ ಒಪ್ಪಿಗೆ ಸೂಚಿಸಿದ ನಂತರ ತಂಡದ ಪಟ್ಟಿ ಪ್ರಕಟಿಸಲಾಗಿದೆ.

Ruturaj Gaikwad

2010 ಮತ್ತು 2014ರ ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಭಾರತ ಭಾಗವಹಿಸಲು ನಿರಾಕರಿಸಿತ್ತು. ಆದ್ರೆ 2028ಕ್ಕೆ ಅಮೆರಿಕದ (USA) ಲಾಸ್ ಏಂಜಲೀಸ್‌ನಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ (Olympics) ಕ್ರಿಕೆಟ್ ಸೇರ್ಪಡೆಗೊಳಿಸಲು ಬಿಸಿಸಿಐ, ಐಸಿಸಿ ಒತ್ತಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲು ಅನುಮತಿಸಿದೆ.

2010ರ ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಬಾಂಗ್ಲಾದೇಶ, 2014ರ ಆವೃತ್ತಿಯಲ್ಲಿ ಶ್ರೀಲಂಕಾ ಪುರುಷರ ತಂಡ ಚಿನ್ನದ ಪದಕಗಳನ್ನ ಗೆದ್ದಿತ್ತು. ಮಹಿಳಾ ವಿಭಾಗದಲ್ಲಿ ಪಾಕಿಸ್ತಾನ (Pakistana) ತಂಡ 2 ಬಾರಿ ಚಿನ್ನದ ಪದಕ ಬಾಚಿಕೊಂಡಿದೆ. ಇದನ್ನೂ ಓದಿ: ICC WorldCup 2023: ಈಡನ್‌ ಗಾರ್ಡನ್ಸ್‌ನ ಲೀಗ್‌, ಸೆಮಿಫೈನಲ್‌ ಪಂದ್ಯಗಳಿಗೆ ಟಿಕೆಟ್‌‌ ದರ ನಿಗದಿ

666853 bcci logo afp e1565683123264

ಟೀಂ ಇಂಡಿಯಾದಲ್ಲಿ ರಿಂಕುಗೆ ಚಾನ್ಸ್:
ಇದೇ ಮೊದಲಬಾರಿಗೆ ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವ ಟೀಂ ಇಂಡಿಯಾ ಕ್ರಿಕೆಟ್ ತಂಡದಲ್ಲಿ ಹೊಸಬರಿಗೆ ಅವಕಾಶ ನೀಡಲಾಗಿದೆ. 2023ರ ಐಪಿಎಲ್ ಆವೃತ್ತಿಯಲ್ಲಿ ಮಿಂಚಿದ ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್, ಜಿತೇಶ್ ಶರ್ಮಾ, ತಿಲಕ್ ವರ್ಮಾ ಮೊದಲಾದವರಿಗೆ ಚಾನ್ಸ್ ನೀಡಲಾಗಿದೆ. ಅಲ್ಲದೇ ಐಪಿಎಲ್ ವೇಳೆ ಕೆಕೆಆರ್ ತಂಡದಲ್ಲಿ ಫಿನಿಶರ್ ಖ್ಯಾತಿ ಪಡೆದಿದ್ದ ರಿಂಕು ಸಿಂಗ್‌ಗೂ ಟೀಂ ಇಂಡಿಯಾದಲ್ಲಿ ಸ್ಥಾನ ನೀಡಲಾಗಿದೆ. ಈ ಸಂತಸವನ್ನ ರಿಂಕು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 2028ರ ಒಲಿಂಪಿಕ್ಸ್‌ನಲ್ಲಿ T20 ಕ್ರಿಕೆಟ್‌ ಸೇರ್ಪಡೆ – ಐಸಿಸಿ ವಿಶ್ವಾಸ

Team India Womens

ಭಾರತ ಪುರುಷರ ತಂಡ:
ಋತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮದ್, ರವಿ ಬಿಷ್ಣೋಯಿ, ಅವೇಶ್ ಖಾನ್, ಅರ್ಷ್ದೀಪ್ ಸಿಂಗ್, ಮುಕೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ, ಪ್ರಭಸಿಮ್ರನ್ ಸಿಂಗ್ (ವಿಕೆಟ್ ಕೀಪರ್). ಎಕ್ಸ್ಟ್ರಾ ಪ್ಲೇಯರ್: ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಸಾಯಿ ಸುದರ್ಶನ್.

ಭಾರತ ಮಹಿಳಾ ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್, ಅಮನ್‌ಜೋತ್ ಕೌರ್, ದೇವಿಕಾ ವೈದ್ಯ, ಅಂಜಲಿ ಸರವಣಿ, ಟೈಟಸ್ ಸಾಧು, ರಾಜೇಶ್ವರಿ ಗಾಯಕವಾಡ್, ಮಿನ್ನು ಮಣಿ, ಕನಿಕಾ ಅಹುಜಾ, ಉಮಾ ಚೆಟ್ರಿ (ವಿಕೆಟ್ ಕೀಪರ್), ಅನುಷಾ ಬಾರೆಡ್ಡಿ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article