ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಭಾರತವು ತಂಡವನ್ನು ಪ್ರಕಟಿಸಿದೆ. ಆಲ್ ಇಂಡಿಯಾ ಸೀನಿಯರ್ ಸೆಲಕ್ಷನ್ ಕಮಿಟಿಯು ತಂಡದ ಆಟಗಾರರನ್ನು ಆಯ್ಕೆ ಮಾಡಿದೆ.
ತಂಡದಲ್ಲಿ ಯಾರಿದ್ದಾರೆ?
ಅಜಿಂಕ್ಯ ರಹಾನೆ (ನಾಯಕ), ಕೆ.ಎಲ್.ರಾಹುಲ್, ಮಯಂಕ್ ಅಗರವಾಲ್, ಚೇತೇಶ್ವರ್ ಪೂಜಾರ (ಉಪ ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೆ.ಎಸ್.ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್.ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ. ಇದನ್ನೂ ಓದಿ: 299 ರೂ. ಚೂಡಿದಾರ್ ಕೊಳ್ಳಲು ಹೋಗಿ 1ಲಕ್ಷ ಕಳೆದುಕೊಂಡ ಯುವತಿ
ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ವಿಶ್ರಾಂತಿ ಪಡೆಯಲಿದ್ದಾರೆ. ಅಲ್ಲದೇ ಮೊದಲ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಆಡುವುದಿಲ್ಲ. ಹೀಗಾಗಿ ಮೊದಲ ಪಂದ್ಯದಲ್ಲಿ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಎರಡನೇ ಪಂದ್ಯದಲ್ಲಿ ನಾಯಕ ಸ್ಥಾನಕ್ಕೆ ಮರಳಿ ಆಡಲಿದ್ದಾರೆ. ಇದನ್ನೂ ಓದಿ: ಅಪ್ಪು ಫೋಟೋಗಳಿಗೆ ಭಾರೀ ಬೇಡಿಕೆ – ನಮ್ಮ ಮನೆ ದೇವರೆಂದ ಅಭಿಮಾನಿಗಳು!
ಮೊದಲ ಟೆಸ್ಟ್ ಪಂದ್ಯವು ನ.25ರಂದು ಕಾನ್ಪುರ ಹಾಗೂ ಎರಡನೇ ಪಂದ್ಯ ಡಿ.3ರಂದು ಮುಂಬೈ ಕ್ರೀಡಾಂಗಣದಲ್ಲಿ ನಡೆಯಲಿದೆ.