T20 ವಿಶ್ವಕಪ್‌ಗೆ ಶೀಘ್ರದಲ್ಲೇ ಭಾರತ ತಂಡ ಪ್ರಕಟ; ರೋಹಿತ್‌ ಜೊತೆಗೆ ಆರಂಭಿಕ ಯಾರಾಗ್ತಾರೆ ಅನ್ನೋದೇ ಸಸ್ಪೆನ್ಸ್‌!

Public TV
2 Min Read
TEAM INDIA

ನವದೆಹಲಿ: 2024ರ ಐಸಿಸಿ ಟಿ20 ವಿಶ್ವಕಪ್‌ (T20 World Cup 2024) ಟೂರ್ನಿ ಈ ಬಾರಿ ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಅಜಿತ್‌ ಅಗರ್ಕರ್‌ ಸಾರಥ್ಯದ ಆಯ್ಕೆ ಸಮಿತಿ ಶೀಘ್ರದಲ್ಲೇ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮಾ ದೆಹಲಿಯಲ್ಲಿ ಬಿಸಿಸಿಐ ಆಯ್ಕೆಗಾರರನ್ನು ಭೇಟಿಯಾಗಲಿದ್ದಾರೆ.

ಶನಿವಾರ (ಏ.27) ದೆಹಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ (DC vs MI) ಕಣಕ್ಕಿಳಿಯಲಿದೆ. ಪಂದ್ಯ ಮುಗಿದ ಬಳಿಕ ರೋಹಿತ್‌ ಶರ್ಮಾ (Rohit Sharma) ಆಯ್ಕೆ ಸಮಿತಿ ಮುಖ್ಯಸ್ಥರನ್ನು ಭೇಟಿಯಾಗಲಿದ್ದು, ಆಟಗಾರರ ಬಗ್ಗೆ ಚರ್ಚಿಸಲಾಗುತ್ತದೆ. ಮೊದಲಿಗೆ ತಾತ್ಕಾಲಿಕ ತಂಡವನ್ನು ಪ್ರಕಟಿಸಲು ಮೇ 1 ಕೊನೆಯದಿನವಾಗಿದೆ. ಆದ್ದರಿಂದ ಯಾವುದೇ ಕ್ಷಣದಲ್ಲಿ ತಂಡವನ್ನು ಅಂತಿಮಗೊಳಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರನ್‌ ಮಳೆಯಲ್ಲಿ ಪಂಜಾಬ್‌ಗೆ 8 ವಿಕೆಟ್‌ಗಳ ಜಯ – ಚೇಸಿಂಗ್‌ನಲ್ಲಿ ಆರ್‌ಸಿಬಿ ದಾಖಲೆ ಸರಿಗಟ್ಟಿದ ಕಿಂಗ್ಸ್‌

Team India 6

ಪ್ರಸಕ್ತ ಟಿ20 ವಿಶ್ವಕಪ್‌ ಟೂರ್ನಿಯ ನಿಮಿತ್ತ 2024ರ ಐಪಿಎಲ್‌ (IPL 2024) ಟೂರ್ನಿಯು ಎಲ್ಲಾ ಆಟಗಾರರಿಗೆ ಅತ್ಯಂತ ಮಹತ್ವದ್ದಾಗಿದೆ. ಈ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಆಟಗಾರರನ್ನ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡ ಪರಿಗಣಿಸುವ ಸಾಧ್ಯತೆಯಿದೆ. ರೋಹಿತ್‌ ಶರ್ಮಾ ತಂಡದ ನಾಯಕನಾಗಿ ಮುನ್ನಡೆಸುವುದು ಬಹುತೇಕ ಖಚಿತವಾಗಿದೆ. ಅದರೊಂದಿಗೆ 15 ಆಟಗಾರರ ಸಂಭಾವ್ಯ ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ ಕೃನಾಲ್‌ ಪಾಂಡ್ಯ ಪತ್ನಿ

ಗುಜರಾತ್‌ ಟೈಟಾನ್ಸ್‌ ತಂಡದ ಕ್ಯಾಪ್ಟನ್‌ ಆದ ನಂತರ ಶುಭಮನ್‌ ಗಿಲ್‌ ಅವರು ಬ್ಯಾಟಿಂಗ್‌ ಪರ್ಫಾರ್ಮೆನ್ಸ್‌ ಕಳೆದುಕೊಂಡಿದ್ದಾರೆ. ಇನ್ನೂ ಆರೆಂಜ್‌ ಕ್ಯಾಪ್‌ ರೇಸ್‌ನಲ್ಲಿ ಕೊಹ್ಲಿ ಮೊದಲ ಸ್ಥಾನದಲ್ಲಿ ಮುನ್ನುಗ್ಗುತ್ತಿದ್ದರೂ ಅವರ ಸ್ಟ್ರೈಕ್‌ರೇಟ್‌ ಬಗ್ಗೆ ಸಾಕಷ್ಟು ಅನುಮಾನಗಳಿವೆ. ಆದ್ದರಿಂದ ಕೊಹ್ಲಿ ಅವರನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Team India

ಸಂಭಾವ್ಯ ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ?
ಆಟಂಭಿಕರು – ಟಾಪ್‌-3:
ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಯಶಸ್ವಿ ಜೈಸ್ವಾಲ್‌, ಶುಭಮನ್‌ ಗಿಲ್‌

ಮಧ್ಯಮ ಕ್ರಮಾಂಕದ ಬ್ಯಾಟರ್ಸ್‌ಗಳು:
ಸೂರ್ಯಕುಮಾರ್ ಯಾದವ್, ಶಿವಂ ದುಬೆ, ರಿಂಕು ಸಿಂಗ್,

ಆಲ್‌ರೌಂಡರ್‌ಗಳು:
ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್

ವಿಕೆಟ್ ಕೀಪರ್‌:
ರಿಷಬ್ ಪಂತ್, ಸಂಜು ಸ್ಯಾಮ್ಸನ್, ಕೆ.ಎಲ್‌ ರಾಹುಲ್‌

Team India 2 1

ಸ್ಪಿನ್ನರ್‌ಗಳು:
ಕುಲ್ದೀಪ್‌ ಯಾದವ್‌, ಯಜುವೇಂದ್ರ ಚಾಹಲ್‌, ರವಿ ಬಿಷ್ಣೋಯಿ

ವೇಗದ ಬೌಲರ್ಸ್‌:
ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್‌ ಸಿಂಗ್‌, ಮೊಹಮ್ಮದ್ ಸಿರಾಜ್, ಟಿ.ನಟರಾಜನ್,

ಸಂಭಾವ್ಯ ತಂಡ:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಟಿ.ನಟರಾಜನ್, ರಿಂಕು, ಯಜುವೇಂದ್ರ ಚಾಹಲ್‌, ಸಂಜು ಸ್ಯಾಮ್ಸನ್, ಅರ್ಷ್‌ದೀಪ್‌ ಸಿಂಗ್‌.

ಬ್ಯಾಕ್ ಅಪ್: ಶುಭಮನ್ ಗಿಲ್, ಮೊಹಮ್ಮದ್ ಸಿರಾಜ್

Share This Article