– ಇಂದು ಹೈವೋಲ್ಟೇಜ್ ಸಭೆ – ಅಡಚಣೆಗೆ ಕಾರಣ ಕೇಳಿದ ಡಿಜಿಸಿಎ
– 48 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸುವ ಭರವಸೆ ನೀಡಿದ ಇಂಡಿಗೋ
ಬೆಂಗಳೂರು/ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ (IndiGo) ಉಂಟಾಗಿರುವ ಭಾರೀ ಅಡಚಣೆ ಮೂರನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್ (Bengaluru Airport) ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇನ್ನು ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬ ಕಂಡುಬಂದಿತ್ತು. ಈ ಸಮಸ್ಯೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. .
#IndiGo claims 1,232 flights were cancelled, the majority of which arose from crew/Flight Duty Time Limit (FDTL) compliance & airport/airspace/ATC-related factors, beyond the operator’s direct control.
The Pilot Association (ALPA) and aviation experts suggest these cancellations… pic.twitter.com/rJmU0mkKBJ
— Suraj Balakrishnan (@SurajBala) December 4, 2025
ವಿಮಾನದಲ್ಲಿನ ತಾಂತ್ರಿಕ ದೋಷ ಹಾಗೂ ಸಿಬ್ಬಂದಿ ಕೊರತೆ ಇತರ ಸಮಸ್ಯೆಗಳಿಂದ ಇಂದು ಸಹ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗುವ (Flight Cancellations) ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ವ್ಯಾಪಕ ವಿಳಂಬ ಮತ್ತು ರದ್ದತಿಯಿಂದಾಗಿ ದೇಶಾದ್ಯಂತ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಂಗಳೂರು ಏರ್‌ಪೋರ್ಟ್‌ನಲ್ಲಿ 73 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ನಲ್ಲೂ ತಾಂತ್ರಿಕ ದೋಷ ಉಂಟಾಗಿರುವ ಪರಿಣಾಮ 73 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ನಿನ್ನೆ 43 ವಿಮಾನಗಳ ಹಾರಾಟ ರದ್ದುಗೊಳಿಸಿದ್ದ ಇಂಡಿಗೋ ಇಂದು 73 ವಿಮಾನ ಹಾರಾಟ ರದ್ದುಗೊಳಿಸಿದೆ.
ಇಂಡಿಗೋ ಅಧಿಕಾರಿಗಳಿಗೆ ಡಿಜಿಸಿಎ ಬುಲಾವ್
ಇಂಡಿಗೋ ವಿಮಾನಗಳ ವಿಳಂಬ ಮತ್ತು ರದ್ದತಿಗಳ ಹಿಂದಿನ ಕಾರಣಗಳನ್ನ ವಿವರಿಸುವಂತೆ ಮತ್ತು ಪರಿಸ್ಥಿತಿ ಸುಧಾರಿಸಲು ಒಂದು ಯೋಜನೆ ನೀಡುವಂತೆ ಡಿಜಿಸಿಎ (DGCA) ಇಂಡಿಗೋಗೆ ಸೂಚಿಸಿದೆ. ಅಲ್ಲದೇ ಈ ಕುರಿತು ಇಂದು ಮಧ್ಯಾಹ್ನ ನಡೆಯಲಿರುವ ಉನ್ನತ ಮಟ್ಟದ ಸಭೆಗೆ ಇಂಡಿಗೋ ಅಧಿಕಾರಿಗಳಿಗೆ ಬುಲಾವ್ ನೀಡಿದೆ.
48 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸುತ್ತೇವೆ: ಇಂಡಿಗೋ
ಉಂಟಾಗಿರುವ ಸಮಸ್ಯೆಗಳ ಕುರಿತು ಪ್ರತಿಕ್ರಿಯೆ ನೀಡಿರುವ ಇಂಡಿಗೋ ಸಂಸ್ಥೆಯು, 48 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸುವ ಭರವಸೆ ನೀಡಿದೆ. ಜೊತೆಗೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದೆ.
ಸಣ್ಣಪುಟ್ಟ ತಾಂತ್ರಿಕ ದೋಷಗಳು, ಚಳಿಗಾಲದ ವೇಳಾಪಟ್ಟಿಯಲ್ಲಿನ ಹೊಂದಾಣಿಕೆ, ಪ್ರತಿಕೂಲ ಹವಾಮಾನ ಪರಿಸ್ಥಿತಿ, ವಿಮಾನ ನಿಲ್ದಾಣದಲ್ಲಿನ ದಟ್ಟಣೆ ಹಾಗೂ ನವೀಕರಿಸಿದ ಸಿಬ್ಬಂದಿ ರೋಸ್ಟರಿಂಗ್ ನಿಯಮಗಳ ಅನುಷ್ಠಾನ ಸೇರಿದಂತೆ ಅನಿರೀಕ್ಷಿತ ಕಾರ್ಯಾಚರಣೆ ಸವಾಲುಗಳು ಅಡಚಣೆಗೆ ಕಾರಣವಾಗಿದೆ. ಇದನ್ನ ನಾವು ಊಹಿಸಿಯೂ ಇರಲಿಲ್ಲ. ಹಾಗಾಗಿ ಸಿಬ್ಬಂದಿ ಲಭ್ಯತೆಗೆ ಅನುಗುಣವಾಗಿ ಕಾರ್ಯಾಚರಣೆ ಸ್ಥಿರಗೊಳಿಸಲು ಕೆಲ ವಿಮಾನಗಳ ವೇಳಾಪಟ್ಟಿ ಬದಲಾವಣೆ ಮತ್ತು ರದ್ದತಿ ಆಗಿದೆ ಎಂದು ತಿಳಿಸಿದೆ.



