– ಇಂದು 1,000ಕ್ಕೂ ಹೆಚ್ಚು ವಿಮಾನ ಸಂಚಾರ ರದ್ದು; ಪ್ರಯಾಣಿಕರಿಗೆ ಕ್ಷಮೆಯಾಚಿಸಿದ ಸಿಇಒ
ನವದೆಹಲಿ: ಇಂದು ಒಂದೇ ದಿನ ಸಾವಿರಕ್ಕೂ ಹೆಚ್ಚು ವಿಮಾನಗಳು ರದ್ದಾದ ನಂತರ ಇಂಡಿಗೋ (IndiGo) ಸಿಇಒ ಪೀಟರ್ ಎಲ್ಬರ್ಸ್ ಇಂದು ಸಂಜೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಡಿ.15ರೊಳಗೆ ವಿಮಾನ ಸಂಚಾರ ಸಹಜ ಸ್ಥಿತಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಡಿ.10 ರಿಂದ 15 ರ ಒಳಗೆ ವಿಮಾನ ಸಂಚಾರ ಸಹಜ ಸ್ಥಿತಿಗೆ ಬರಲಿದೆ. ಆದರೆ, ಕಾರ್ಯಾಚರಣೆಗಳ ಪ್ರಮಾಣದಿಂದಾಗಿ ಸುಧಾರಣೆಗೆ ಸಮಯ ತೆಗೆದುಕೊಳ್ಳುತ್ತದೆ ಎಂದು ಇಂಡಿಗೋ ಸಿಇಒ ತಿಳಿಸಿದ್ದಾರೆ. ಇದನ್ನೂ ಓದಿ: ಇಂಡಿಗೋ ಸಮಸ್ಯೆ – ಪೈಲಟ್ ರಜೆ ನಿಯಮಗಳನ್ನು ಸಡಿಲಿಸಿದ DGCA
ಕಳೆದ ಕೆಲವು ದಿನಗಳಿಂದ ನಾವು ತೀವ್ರ ಕಾರ್ಯಾಚರಣೆಯ ಅಡಚಣೆಗಳನ್ನು ಅನುಭವಿಸಿದ್ದೇವೆ ಎಂಬುದನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಅಂದಿನಿಂದ, ಬಿಕ್ಕಟ್ಟು ಉಲ್ಬಣಗೊಳ್ಳುತ್ತಲೇ ಇದೆ. ಶುಕ್ರವಾರ 1,000 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇದು ಅತ್ಯಂತ ತೀವ್ರವಾಗಿ ಪರಿಣಾಮ ಬೀರಿದ ದಿನವಾಗಿದೆ ಎಂದು ಸಿಇಒ ಬೇಸರ ವ್ಯಕ್ತಪಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಇಂಡಿಗೋ ತೀವ್ರ ಕಾರ್ಯಾಚರಣೆಯ ಸವಾಲುಗಳನ್ನು ಎದುರಿಸುತ್ತಿದೆ. ಆದರೆ ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಿಇಒ ಒತ್ತಿ ಹೇಳಿದ್ದಾರೆ. ಉಂಟಾದ ಅನಾನುಕೂಲತೆಗಾಗಿ ಅವರು ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ಇಂಡಿಗೋ ವಿಮಾನಗಳ ಸಂಚಾರ ಸ್ಥಗಿತ – ದೆಹಲಿ ಏರ್‌ಪೋರ್ಟ್‌ನಲ್ಲಿ ಮಗಳಿಗೆ ಸ್ಯಾನಿಟರಿ ಪ್ಯಾಡ್‌ಗಾಗಿ ಪರದಾಡಿದ ತಂದೆ

