ನವದೆಹಲಿ: ಮುಂಬೈ ಏರ್ಪೋರ್ಟ್ನ ರನ್ವೇನಲ್ಲೇ (Mumbai Airport) ಪ್ರಯಾಣಿಕರು ಕುಳಿತು ಆಹಾರ ಸೇವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ (IndiGo) ಸಂಸ್ಥೆಗೆ 1.2 ಕೋಟಿ ರೂ. ದಂಡ ವಿಧಿಸಲಾಗಿದೆ.
ಈಚೆಗೆ ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್ವೇನಲ್ಲೇ ಕುಳಿತು ಊಟ ಸೇವಿಸಿದ್ದರು. ಆ ದೃಶ್ಯದ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ವಿಮಾನ ಸಂಸ್ಥೆಗೆ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (BCAS) ದಂಡ ವಿಧಿಸಿದೆ. ಇದನ್ನೂ ಓದಿ: ಅಮಿತ್ ಶಾ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಮಾಜಿ ಸಿಎಂ ಹೆಚ್ಡಿಕೆ
Advertisement
Advertisement
ದೇಶದ ವಿಮಾನಯಾನ ನಿಯಂತ್ರಕ, ಡಿಜಿಸಿಎ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವೀಡಿಯೋ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಲೋಪಕ್ಕಾಗಿ ಮುಂಬೈ ವಿಮಾನ ನಿಲ್ದಾಣಕ್ಕೆ 30 ಲಕ್ಷ ರೂ. ದಂಡ ವಿಧಿಸಿದೆ.
Advertisement
ಗೋವಾ-ದೆಹಲಿ ಮಾರ್ಗದ ಇಂಡಿಗೋ ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್ವೇನಲ್ಲೇ ಕುಳಿತು ಊಟ ಸೇವಿಸಿದ್ದರು. ಈ ದೃಶ್ಯದ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ಗೆಳತಿಯನ್ನು ಕತ್ತುಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡ್ಕೊಂಡ!
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ಹಾಗೂ ಮುಂಬೈ ವಿಮಾನ ನಿಲ್ದಾಣಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು. ಇದೇ ವೇಳೆ ಮುಂಬೈ ವಿಮಾನ ನಿಲ್ದಾಣಕ್ಕೆ ಡಿಜಿಸಿಎ 30 ಲಕ್ಷ ರೂ. ದಂಡ ವಿಧಿಸಿತ್ತು.