– ಸಮಯದ ಲಾಭ ಪಡೆದ ಇತರೆ ಏರ್‌ಲೈನ್; ಎಕಾನಮಿ ಸೀಟ್‌ಗಳ ಬೆಲೆ ಏರಿಕೆ
ಬೆಂಗಳೂರು: ಇಂಡಿಗೋ ವಿಮಾನ (Indi Go Flights) ಹಾರಾಟದಲ್ಲಿ 5ನೇ ದಿನವೂ ವ್ಯತ್ಯಯ ಕಂಡುಬಂದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಪ್ರಯಾಣಿಕರ ಪರದಾಟ ಮುಂದುವರಿದಿದೆ.
ನೂರಾರು ಸಂಖ್ಯೆಯ ಪ್ರಯಾಣಿರರು ಏರ್ಪೋರ್ಟ್‌ನಲ್ಲೇ ಕಾಲ ಕಳೆಯುವಂತಾಗಿದೆ. ಹಲವು ಪ್ರಯಾಣಿಕರು ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿ ಇಂಡಿಗೋ ಏರ್‌ಲೈನ್ಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಏರ್‌ಪೋರ್ಟ್ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ಕೊಡುತ್ತಿಲ್ಲ. ಕೊನೇ ಕ್ಷಣದಲ್ಲಿ ವಿಮಾನ ಹಾರಾಟ ರದ್ದು ಅಂತಾ ಹೇಳ್ತಿದ್ದಾರೆ. 2 ದಿನದಲ್ಲಿ ನಿಮ್ಮ ಹಣ ರೀಫಂಡ್ ಆಗುತ್ತೆ ಅಂತಾ ಹೇಳ್ತಾರೆ. ನಮಗೆ ಹಣ ಮುಖ್ಯವಲ್ಲ, ಕೆಲವರು ವ್ಯವಹಾರದ ಮೇಲೆ ಹೋಗ್ತಾರೆ, ಇನ್ನೂ ಕೆಲವರು ಪರ್ಸನಲ್ ಕೆಲಸದ ಮೇಲೆ ಬೇರೆ ಬೇರೆ ಕಡೆ ಹೋಗ್ಬೇಕಾಗಿರುತ್ತೆ. ಇವತ್ತು ನೋಡಿದ್ರೆ ಯಾವುದೇ ಮಾಹಿತಿಯಿಲ್ಲದೇ ಕೆಲವು ವಿಳಂಬ ಆಗ್ತಿವೆ. ಕೆಲವು ಸಂಪೂರ್ಣ ಕ್ಯಾನ್ಸಲ್ ಆಗ್ತಿದೆ, ಕುಟುಂಬ ಸಮೇತ ಜೈಪುರ (Jaipura) ಹೋಗ್ಬೇಕಿತ್ತು ಆದ್ರೆ ಇನ್ನೂ ಕೂಡ ಫ್ಲೈಟ್ ಕನ್ಪರ್ಮ್ ಮಾಡ್ತಿಲ್ಲ, ನಾವು ಬಳ್ಳಾರಿಯಿಂದ ಬಂದಿದ್ದೇನೆ ಈಗ ಏನು ಮಾಡೋದು ಅಂತಾ ಗೊತ್ತಿಲ್ಲ ಅಂತ ಗೋಳಾಡಿದ್ದಾರೆ.
ದೇಶಾದ್ಯಂತ ಪ್ರಯಾಣಿಕರ ಪರದಾಟ
ಇಂಡಿಗೋ ಏರ್‌ಲೈನ್‌ನಲ್ಲಿ ಸಿಬ್ಬಂದಿ ಕೊರತೆಯಿಂದ ಸೃಷ್ಠಿಯಾದ ಆವಾಂತರ ಅಂತಿಂತದ್ದಲ್ಲ. ಕಳೆದ ನಾಲ್ಕು ದಿನಗಳಲ್ಲಿ ಇಂಡಿಗೋದ ಒಂದು ಸಾವಿರಕ್ಕೂ ಅಧಿಕ ವಿಮಾನಗಳ ಹಾರಾಟ ರದ್ದಾಗಿದ್ದು ಜನರು ವಿಮಾನ ನಿಲ್ದಾಣಗಳಲ್ಲಿ ಪರದಾಡುತ್ತಿರುವುದಂತೂ ಹೇಳತೀರದಾಗಿದೆ. ಆರಂಭದಲ್ಲಿ ಸಣ್ಣ ಸಮಸ್ಯೆಯಂತೆ ಭಾಸವಾದ ಇದು ಒಂದೆರಡು ದಿನಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿಮಾನಗಳಿದ್ದರೂ ಅದನ್ನು ಆಪರೇಟ್ ಮಾಡಲು ಸಿಬ್ಬಂದಿಗಳಿಲ್ಲದ ಸನ್ನಿವೇಶ ಇಂಡಿಗೋಗೆ ಬಂದಿದೆ. ಇದೇ ಕಾರಣದಿಂದಲೇ ದೆಹಲಿ, ಬೆಂಗಳೂರು, ಲಕ್ನೋ, ಜಮ್ಮು ಕಾಶ್ಮೀರ, ಚೆನ್ನೈ, ಹೈದರಾಬಾದ್, ಭೂಪಾಲ್ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಸಂಪೂರ್ಣವಾಗಿ ವಿಮಾನಗಳ ಹಾರಾಟ ರದ್ದು ಮಾಡಿರುವುದಾಗಿ ಇಂಡಿಗೋ ಘೋಷಣೆ ಮಾಡಿದೆ. ಇದನ್ನೂ ಓದಿ: ಇಂಡಿಗೋ ಸಮಸ್ಯೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆಯ ಅಸ್ಥಿ ಹಿಡಿದು ಮಗಳ ಪರದಾಟ
ಬುಕ್ ಮಾಡಿರುವ ವಿಮಾನಗಳು ಒಂದು ಕಡೆ ನಿರಂತರವಾಗಿ ವಿಳಂಬವಾಗಿ ಹತ್ತಾರು ಗಂಟೆಗಳ ಬಳಿಕ ರದ್ದಾದ ಹಿನ್ನಲೆ ಪ್ರಯಾಣಿಕರು ವಿಮಾನ ನಿಲ್ದಾಣದ ಹೊರಗೆ ಮತ್ತು ಒಳಗೆ ಪ್ರತಿಭಟನೆ ನಡೆಸಿದರು. ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡರು. ಇದನ್ನೂ ಓದಿ: ಡಿ.15 ರೊಳಗೆ ಇಂಡಿಗೋ ವಿಮಾನಗಳ ಸಂಚಾರ ಸಹಜ ಸ್ಥಿತಿಗೆ: ಸಿಇಒ ಭರವಸೆ
ಧಿಡೀರ್ ಬೆಲೆ ಏರಿಕೆ
ಇದೇ ಪರಿಸ್ಥಿತಿಯ ಲಾಭ ಪಡೆದಿರುವ ಇತರೆ ಏರ್‌ಲೈನ್‌ಗಳು ಏರ್ ಫೇರ್ ನಿಯಮಗಳನ್ನು ಉಲ್ಲಂಘಿಸಿ ಟಿಕೆಟ್‌ಗಳ ಮೇಲೆ ಹತ್ತಕ್ಕಿಂತ ಹೆಚ್ಚು ಪಟ್ಟು ಬೆಲೆಯನ್ನು ಏರಿಕೆ ಮಾಡಿವೆ. ಮಹಾನಗರಿಗೆ 5 ರಿಂದ 8 ಸಾವಿರ ರೂಪಾಯಿಗೆ ಸಿಗಬೇಕಿದ್ದ ಎಕಾನಮಿ ಟಿಕೆಟ್‌ಗಳು 50 ರಿಂದ 80 ಸಾವಿರ ರೂಪಾಯಿವರೆಗೂ ಏರಿಕೆಯಾಗಿದೆ. ಈ ಬಗ್ಗೆ ವಿರೋಧ ಪಕ್ಷಗಳು ಸಂಸತ್‌ನಲ್ಲಿ ಧ್ವನಿ ಎತ್ತುತ್ತಿದ್ದಂತೆ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಇದನ್ನೂ ಓದಿ: ಇಂಡಿಗೋ ವಿಮಾನಗಳ ಸಂಚಾರ ಸ್ಥಗಿತ – ದೆಹಲಿ ಏರ್‌ಪೋರ್ಟ್‌ನಲ್ಲಿ ಮಗಳಿಗೆ ಸ್ಯಾನಿಟರಿ ಪ್ಯಾಡ್‌ಗಾಗಿ ಪರದಾಡಿದ ತಂದೆ


