ನವದೆಹಲಿ: ಇಂಡಿಗೋ (IndiGo) ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಇತರೆ ಏರ್‌ಲೈನ್‌ಗಳು ಟಿಕೆಟ್ ದರ ಹೆಚ್ಚಿಸಿವೆ. ಈ ನಡೆಯ ವಿರುದ್ಧ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿದೆ.
ನಿಗದಿಪಡಿಸಿರುವ ದರಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರಿಸ್ಥಿತಿ ಸಂಪೂರ್ಣವಾಗಿ ಸ್ಥಿರವಾಗುವವರೆಗೆ ಈ ಮಿತಿಗಳು ಜಾರಿಯಲ್ಲಿರುತ್ತವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಇಂಡಿಗೋ ಸಮಸ್ಯೆ – ವಿಮಾನ ದರದಷ್ಟೇ ಭಾರೀ ಏರಿಕೆಯಾಗಿದೆ ಬಸ್ ದರ
ಮಾರುಕಟ್ಟೆಯಲ್ಲಿ ಬೆಲೆ ಶಿಸ್ತನ್ನು ಕಾಯ್ದುಕೊಳ್ಳುವುದು, ಸಂಕಷ್ಟದಲ್ಲಿರುವ ಪ್ರಯಾಣಿಕರ ಶೋಷಣೆಯನ್ನು ತಡೆಗಟ್ಟುವುದು ಮತ್ತು ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಮತ್ತು ರೋಗಿಗಳು ಸೇರಿದಂತೆ ತುರ್ತಾಗಿ ಪ್ರಯಾಣಿಸಬೇಕಾದ ನಾಗರಿಕರು ಈ ಅವಧಿಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗದಂತೆ ನೋಡಿಕೊಳ್ಳುವುದು ಈ ನಿರ್ದೇಶನದ ಉದ್ದೇಶವಾಗಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಇಂಡಿಗೋ ಸಮಸ್ಯೆಯಿಂದ ಕೆಲ ವಿಮಾನಯಾನ ಸಂಸ್ಥೆಗಳ ಟಿಕೆಟ್‌ಗಳ ಬೆಲೆಯನ್ನು ಮೂರುಪಟ್ಟು ಹೆಚ್ಚಿಸಿವೆ. ಭಾರತದಿಂದ ವಿದೇಶಕ್ಕೆ ಹೋಗುವ ಟಿಕೆಟ್ ದರಕ್ಕಿಂತಲೂ ದೇಶದ ಒಳಗಡೆ ಸಂಚರಿಸುವ ಟಿಕೆಟ್ ದರ ದುಬಾರಿಯಾಗಿದೆ ಎಂದು ವಿಮಾನ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದರು. ಇದನ್ನೂ ಓದಿ: ಇಂಡಿಗೋ ಸಮಸ್ಯೆ| ಬೆಂಗಳೂರಿನಿಂದ ಹೊರಡುವ ಎಕ್ಸ್‌ಪ್ರೆಸ್ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ
ವಿಮಾನ ಕಂಪನಿಗಳು ಲಾಭ ಮಾಡುತ್ತಿದ್ದಂತೆ ಇನ್ನೊಂದು ಕಡೆ ಖಾಸಗಿ ಬಸ್ಸುಗಳು ಈಗ ಪ್ರಯಾಣಿಕರಿಂದ ಸುಲಿಗೆ ಮಾಡಲು ಮುಂದಾಗಿದೆ.

