ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ರಕ್ತ ವಾಂತಿ ಮಾಡಿ ಪ್ರಯಾಣಿಕ ಸಾವು

Public TV
1 Min Read
Indigo plane

ನವದೆಹಲಿ: ಇಂಡಿಗೋ (IndiGo Flight) ವಿಮಾನದಲ್ಲಿ (6E 5093) ಪ್ರಯಾಣಿಸುತ್ತಿದ್ದ ವೇಳೆ ರಕ್ತ ವಾಂತಿ ಮಾಡಿಕೊಂಡು ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಮುಂಬೈನಿಂದ (Mumbai) ರಾಂಚಿಗೆ (Ranchi) ಹೊರಟಿದ್ದ ಇಂಡಿಗೋ ವಿಮಾನವು, ಪ್ರಯಾಣಿಕರೊಬ್ಬರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟರಲ್ಲಿ ಪ್ರಯಾಣಿಕ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸರ್ಜಿಕಲ್ ಸ್ಟ್ರೈಕ್ ಮಾಡಿಲ್ಲ – ಆದ್ರೆ ಭಯೋತ್ಪಾದಕರನ್ನು ಕೊಲ್ಲಲಾಗಿದೆ: ರಕ್ಷಣಾ ಸಚಿವಾಲಯ ಸ್ಪಷ್ಟನೆ

ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಮುಂಬೈನಿಂದ ರಾಂಚಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ದೇವಾನಂದ್ ತಿವಾರಿ ರಕ್ತ ವಾಂತಿ ಮಾಡಿಕೊಂಡರು. ವಿಮಾನ ತುರ್ತು ಭೂಸ್ಪರ್ಶದ ನಂತರ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ನಾಗ್ಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

62 ವಯಸ್ಸಿನ ಈ ವ್ಯಕ್ತಿ ಕ್ಷಯರೋಗದಿಂದ ಬಳಲುತ್ತಿದ್ದರು. ಅಗತ್ಯ ವೈದ್ಯಕೀಯ ವಿಧಾನಗಳು ಮತ್ತು ಕ್ಲಿಯರೆನ್ಸ್ ನಂತರ ವಿಮಾನವು ನಾಗ್ಪುರ ಮತ್ತು ರಾಂಚಿಗೆ ತನ್ನ ಪ್ರಯಾಣವನ್ನು ಯಶಸ್ವಿಯಾಗಿ ಪುನರಾರಂಭಿಸಿತು. ಇದನ್ನೂ ಓದಿ: ಬುಧವಾರ ಆಗದಿದ್ರೆ ಆ.27ಕ್ಕೆ ಚಂದ್ರಯಾನ-3 ಲ್ಯಾಂಡಿಂಗ್

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article