ಹುಬ್ಬಳ್ಳಿ: ರಾತ್ರೋರಾತ್ರಿ ಸ್ಮಶಾನದ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ (Indira Canteen) ನಿರ್ಮಾಣ ಮಾಡುತ್ತಿದ್ದು, ಸರ್ಕಾರದ ನಡೆಗೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ಜಿಲ್ಲೆಯ ಮಂಟೂರು ರಸ್ತೆಯ ಸತ್ಯಹರಿಶ್ಚಂದ್ರ ಕಾಲೋನಿಯಲ್ಲಿ (Satya Harishchandra) ನಡೆದಿದೆ.
ಇಂದಿರಾ ಕ್ಯಾಂಟೀನ್ ಬಡವರ, ಶ್ರಮಿಕರ, ಕಾರ್ಮಿಕರ ಹೊಟ್ಟೆ ತುಂಬಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಆರಂಭಿಸಿರುವ ಯೋಜನೆಯಾಗಿದೆ. ಯೋಜನೆ ಆರಂಭದಿಂದಲೂ ಈ ಯೋಜನೆ ಒಂದಿಲ್ಲಾ ಒಂದು ವಿವಾದಕ್ಕೆ ಕಾರಣವಾಗಿದೆ. ಈ ಕ್ಯಾಂಟೀನ್ ದಲಿತರ ಮತ್ತು ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ವಾಣಿಜ್ಯ ನಗರಿಯಲ್ಲಿ ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿಗೆ ಭಾರಿ ವಿರೋಧ ವ್ಯಕ್ತವಾಗಿದೆ.ಇದನ್ನೂ ಓದಿ: ನಾಗಮಂಗಲ ಗಲಭೆ; ಕಿಡಿಗೇಡಿಗಳು ಅಂಗಡಿಗೆ ಪೆಟ್ರೋಲ್ ಬಾಂಬ್ ಎಸೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Advertisement
Advertisement
ಕಾಮಗಾರಿ ಸ್ಥಳಕ್ಕೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Mutalik) ಭೇಟಿ ನೀಡಿ ಮಾತನಾಡಿ, ಅಬ್ಬಯ್ಯ ಅವರು ದಲಿತರ ವೋಟ್ ಮೇಲೆ ಗೆದ್ದಿದ್ದಾರೆ. ಆದರೆ ಈಗ ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇವತ್ತು ಇಂದಿರಾ ಕ್ಯಾಂಟೀನ್, ನಾಳೆ ಅಬ್ಬಯ್ಯ ಕ್ಯಾಂಟೀನ್ ಕಟ್ಟುತ್ತಾರೆ. ಹಿಂದೂ ರುದ್ರಭೂಮಿಯಲ್ಲಿ ಇಂದಿರಾ ಕ್ಯಾಂಟೀನ್ ಬೇಡ. ಕೂಡಲೇ ಇಂದಿರಾ ಕ್ಯಾಂಟೀನ್ ಕಟ್ಟಡ ಸ್ಥಳಾಂತರ ಮಾಡಿ. ಇಲ್ಲದಿದ್ದರೆ ಉಗ್ರ ಹೋರಾಟ ಮೂಲಕ ನಾವೇ ತೆರವು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
Advertisement
ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಮತ್ತು ಹೋರಾಟ ಸಮಿತಿ ಈ ಬಗ್ಗೆ ಸಾಕಷ್ಟು ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ತಮ್ಮ ಪ್ರತಿಷ್ಠೆಗಾಗಿ ರುದ್ರಭೂಮಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುತ್ತಿದ್ದು, ಅಧಿಕಾರಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎನ್ನಲಾಗಿದೆ. ಈಗ ಈ ಹೋರಾಟಕ್ಕೆ ಹಿಂದೂಪರ ಸಂಘಟನೆಗಳು ಸಹ ಕೈ ಜೋಡಿಸಿದ್ದು, ರುದ್ರಭೂಮಿ ಹೋರಾಟ ತೀವ್ರತೆ ಪಡೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ನಮ್ಮ ಪಾರ್ಟಿ, ನಮ್ಮ ಲೀಡರ್, ನನ್ನಿಷ್ಟ: ವಿದೇಶದಲ್ಲಿ ರಾಹುಲ್ ಗಾಂಧಿ ಭೇಟಿ ಬಗ್ಗೆ ಡಿಸಿಎಂ ಪ್ರತಿಕ್ರಿಯೆ