ಹುಬ್ಬಳ್ಳಿ: ವೈಯಕ್ತಿಕ ಹಾಗೂ ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ ಎಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
Advertisement
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿರುವ ವಿಚಾರವಾಗಿ ನಗರದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿಗೂ ಹೆಚ್ಚಿನ ಬೆಂಬಲ ಸಿಕ್ಕಿದೆ. ಅಲ್ಲಿನ ಸ್ಥಳೀಯ ಹಿತಾಸಕ್ತಿಗೆ ಅನುಗುಣವಾಗಿ ಚುನಾವಣೆಗಳು ನಡೆದಿರುತ್ತವೆ. ವೈಯಕ್ತಿಕ ಹಾಗೂ ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ. ಬೇರೆ ಬೇರೆ ನಗರಸಭೆ ಮತ್ತು ಪುರಸಭೆಗಳಲ್ಲಿ ನಮ್ಮ ಸ್ಥಾನಗಳ ಪ್ರಮಾಣ ಹೆಚ್ಚಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನ ಗಳಿಸಿದ್ದೇವೆ. ಕಳೆದ ಬಾರಿಗಿಂತಲೂ ನಮ್ಮ ಪಕ್ಷ ಹೆಚ್ಚು ಪ್ರಗತಿ ಸಾಧಿಸಿದೆ ಎಂದರು. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಪತ್ರ
Advertisement
Advertisement
ಬಿಜೆಪಿ ಶಾಸಕರಿದ್ದ ಕಡೆ ನಿರೀಕ್ಷಿತ ಫಲಿತಾಂಶ ಬಾರದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಶಾಸಕರಿದ್ದ ಕಡೆ ಅವರು ಹೆಚ್ಚಿನ ಸ್ಥಾನ ಗೆದ್ದಿದ್ದಾರಾ? ಸ್ಥಳೀಯ ಸಂಸ್ಥೆಗಳಲ್ಲಿ ಈ ರೀತಿಯ ಫಲಿತಾಂಶ ಸಹಜವಾಗಿದ್ದು, ಈ ಕುರಿತು ಪರಾಮರ್ಶೆ ಮಾಡುತ್ತೇವೆ ಎಂದು ನುಡಿದರು.
Advertisement
ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರವಿಂದ್ ಬೆಲ್ಲದ್ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನನ್ನ ಅಸಮಾಧಾನದ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದಾರೆಂಬುದು ಸುಳ್ಳು ಎಂದು ಜಾರಿಕೊಂಡರು. ಇದನ್ನೂ ಓದಿ: ಹಿಂದೂಗಳಿಗೆ ಹಿಂದೂಗಳಾಗಿ ಹುಟ್ಟಿದ್ದೇ ತಪ್ಪು ಅನ್ನಿಸಬಾರದು: ಸಿ.ಟಿ.ರವಿ
ಸಂಪುಟದಲ್ಲಿ ಹಿರಿಯರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕೆಂಬ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ಅದು ಅವರ ವೈಯಕ್ತಿಕ ವಿಚಾರ. ಅವರ ವಿಚಾರಗಳನ್ನ ಹೇಳಲು ಮುಕ್ತ ಅವಕಾಶವಿದೆ. ಈ ರೀತಿ ಹೇಳಿಕೆ ನೀಡುವುದು ಪಕ್ಷ ವಿರೋಧಿ ಚಟುವಟಿಕೆ ಎನ್ನಲಾಗಲ್ಲ. ನನ್ನ ವೈಯಕ್ತಿಕ ಅಭಿಪ್ರಾಯವನ್ನ ಪಕ್ಷದ ಆಂತರಿಕ ಸಭೆಯಲ್ಲಿ ವ್ಯಕ್ತಪಡಿಸುತ್ತೇನೆ ಎಂದರು.
ಹುಬ್ಬಳ್ಳಿಯಲ್ಲಿ ಕೋರ್ ಕಮೀಟಿ ರದ್ದು ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಬಿಎಸ್‍ವೈ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅರುಣ್ ಸಿಂಗ್ ಬೇಗನೇ ದೆಹಲಿಗೆ ಪ್ರಯಾಣ ಬೆಳೆಸಿದರು. ಈ ಕಾರಣದಿಂದಾಗಿಯೇ ಕೋರ್ ಕಮೀಟಿ ಸಭೆ ನಡೆಸಲಾಗಲಿಲ್ಲ. ಮುಂದಿನ ದಿನಗಳಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಗುವುದು. ಆ ಸಭೆಯಲ್ಲಿ ಬೆಳಗಾವಿ ಸೋಲು ಸೇರಿದಂತೆ ಹಲವಾರು ವಿಚಾರಗಳನ್ನ ಚರ್ಚಿಸಲಾಗುವುದು ಎಂದು ನುಡಿದರು.