ಜಕಾರ್ತ: ಇಂಡೋನೇಷ್ಯಾದಲ್ಲಿ ವ್ಯಕ್ತಿಯೊಬ್ಬ ಸಿಡಿಲು ಬಡಿತದಿಂದ ಜಸ್ಟ್ ಮಿಸ್ ಆಗಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ನೋಡುಗರನ್ನು ಬೆಚ್ಚಿ ಬೀಳಿಸುವ ವೀಡಿಯೋ ವೈರಲ್ ಆಗಿದೆ.
Advertisement
ಉತ್ತರ ಜಕಾರ್ತಾದ ಕರಾವಳಿ ಪಟ್ಟಣ ಸಿಲಿನ್ಸಿಂಗ್‍ನಲ್ಲಿ ಈ ಭಯಾನಕ ಘಟನೆ ನಡೆದಿದೆ. ಅಬ್ದುಲ್ ರೋಸಿದ್ (35) ಸಿಡಿಲು ಬಡಿತಕ್ಕೆ ಒಳಗಾದ ವ್ಯಕ್ತಿ. ಇದನ್ನೂ ಓದಿ: ಹಗಲು ಹೊತ್ತಿನಲ್ಲೇ ಬ್ಯಾಂಕ್ ದರೋಡೆ – ಸಿಬ್ಬಂದಿ ಹತ್ಯೆ
Advertisement
ಸೆಕ್ಯುರಿಟಿ ಗಾರ್ಡ್ ಆಗಿರುವ ಅಬ್ದುಲ್, ಸಿಲಿನ್ಸಿಂಗ್‍ನಲ್ಲಿರುವ ಅಂಗಳದಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ರೋಸಿದ್‍ಗೆ ಸಿಡಿಲು ಬಡೆಯುವ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೀಡಿಯೋವನ್ನು ಯೂಟ್ಯೂಬ್ ಚಾನೆಲ್ ಮೀಡಿಯಾ ಸ್ಟಾರ್ಟ್‍ನಲ್ಲಿ ಹಂಚಿಕೊಳ್ಳಲಾಗಿದೆ.
Advertisement
ಅಬ್ದುಲ್, ಕಾರ್ಖಾನೆಯ ಪಾಕಿರ್ಂಗ್ ಸ್ಥಳದಲ್ಲಿ ಛತ್ರಿ ಹಿಡಿದು ಮಳೆಯಲ್ಲಿ ಗಸ್ತು ತಿರುಗುತ್ತಿದ್ದಾಗ ಸಿಡಿಲು ಬಡಿದಿದೆ. ಆಗ ವ್ಯಕ್ತಿ ನೆಲದ ಮೇಲೆ ಕುಸಿದು ಬೀಳುತ್ತಾನೆ. ಈ ವೇಳೆ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿ ಅಬ್ದುಲ್‍ನನ್ನು ತಕ್ಷಣ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸುತ್ತಾರೆ. ಸಣ್ಣಪುಟ್ಟ ಗಾಯಗಳಾಗಿದ್ದ ಅಬ್ದುಲ್ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಮಹಿಳಾ ವಿಮಾ ಏಜೆಂಟ್ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಸ್ನೇಹಿತನಿಂದ ಹೊರಬಂತು ಸತ್ಯ