Connect with us

Crime

ರಂಗೋಲಿ ಹಾಕ್ತಿದ್ದ ಮಹಿಳೆಯ ಸರಗಳ್ಳತನ

Published

on

– ಸಿಸಿಟಿವಿಯಲ್ಲಿ ಕಳ್ಳನ ಚಲನವಲನ ಸೆರೆ

ಭೋಪಾಲ್: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಚಿನ್ನದ ಚೈನ್ ಕದ್ದು ಸವರಾನೋರ್ವ ಎಸ್ಕೇಪ್ ಆಗಿದ್ದಾರೆ. ಕಳ್ಳನ ಚಲನವಲನ ಮನೆಯ ಮುಂಭಾಗದಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಧ್ಯಪ್ರದೇಶದ ಇಂದೋರ್ ನಗರದ ಲಸೂಡಿಯಾದದ ಮಹಾಲಕ್ಷ್ಮಿ ಬಡಾವಣೆಯಲ್ಲಿ ಸರಗಳ್ಳತನ ನಡೆದಿದೆ. ಇಂದು ಬೆಳಗ್ಗೆ ಮಹಿಳೆ ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದರು. ಬೆಳಗ್ಗೆಯಾಗಿದ್ದರಿಂದ ರಸ್ತೆಯಲ್ಲಿ ಜನ ಸಂಚಾರವಿರಲಿಲ್ಲ. ಹಿಂದಿನಿಂದ ಬಂದ ಬೈಕ್ ಸವಾರ ಕ್ಷಣಾರ್ಧದಲ್ಲಿ ಮಹಿಳೆಯನ್ನ ಕೆಳಗೆ ಬೀಳಿಸಿ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದು ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಮಹಿಳೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಎಎಸ್ ಪಿ ರಾಜೇಶ್ ರಘುವಂಶಿ, ಮಹಾಲಕ್ಷ್ಮಿ ಬಡಾವಣೆಯಲ್ಲಿ ಸರಗಳ್ಳತನ ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸಿಸಿಟಿವಿ ದೃಶ್ಯಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಆರೋಪಿಯನ್ನ ಬಂಧಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಬಡವಾಣೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ರಸ್ತೆಯಲ್ಲಿ ಮಹಿಳೆಯರು, ವೃದ್ಧರು ಓಡಾಡದ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಕಾರ್ಯಪ್ರವೃತ್ತರಾಗಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Click to comment

Leave a Reply

Your email address will not be published. Required fields are marked *