ಮುಂಬೈ: ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಸೋಮವಾರ ಬೆದರಿಕೆ ಕರೆಗಳು ಬಂದಿವೆ. ರಿಲಯನ್ಸ್ ಫೌಂಡೇಶನ್ ಹರ್ಸ್ಕಿಸಂದಾಸ್ ಆಸ್ಪತ್ರೆಯ ದೂರವಾಣಿ ಸಂಖ್ಯೆಗೆ 3ಕ್ಕೂ ಹೆಚ್ಚು ಬಾರಿ ಕರೆಗಳು ಬಂದಿರುವುದಾಗಿ ವರದಿಯಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ರಿಲಯನ್ಸ್ ಫೌಂಡೇಶನ್ ದೂರು ನೀಡಿದೆ. ಅವರ ಆಸ್ಪತ್ರೆಗೆ 3ಕ್ಕೂ ಹೆಚ್ಚು ಕರೆಗಳು ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಳನ್ನು ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ‍್ಯ ದಿನದಂದೇ ರೈತರ ಪ್ರತಿಭಟನೆ – ದರದರನೆ ಎಳೆದೊಯ್ದ ಪೊಲೀಸರು
Advertisement
Advertisement
ಕಳೆದ ವರ್ಷ ಮುಖೇಶ್ ಅಂಬಾನಿ ಅವರ ಮುಂಬೈಯಲ್ಲಿರುವ ಆಂಟಿಲಿಯಾ ನಿವಾಸದ ಹೊರಗೆ 20 ಸ್ಫೋಟಕ ಜಿಲೆಟಿನ್ ಸ್ಟಿಕ್‌ಗಳು ಹಾಗೂ ಬೆದರಿಕೆ ಪತ್ರವಿದ್ದ ಸ್ಕಾರ್ಪಿಯೋ ಕಾರು ಪತ್ತೆಯಾಗಿತ್ತು. ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣ ಮುಂಬೈಯ ಅಪರಾಧ ಗುಪ್ತಚರ ಘಟಕ ಸೇರಿದಂತೆ ಹಲವಾರು ಪೊಲೀಸರು ತನಿಖೆಗಾಗಿ ಸ್ಥಳಕ್ಕೆ ಆಗಮಿಸಿದ್ದರು. ಇದನ್ನೂ ಓದಿ: ಭೂಮಿಯಿಂದ 30 ಕಿ.ಮೀ ಎತ್ತರದಲ್ಲಿ ಹಾರಾಡಿತು ರಾಷ್ಟ್ರಧ್ವಜ
Advertisement
ಕೆಲವು ದಿನಗಳ ಬಳಿಕ ಥಾಣೆ ಮೂಲದ ಉದ್ಯಮಿ ಮನ್ಸುಖ್ ಹಿರೇನ್ ನಿಗೂಢವಾಗಿ ಸಾವನ್ನಪ್ಪಿದ್ದು ತಿಳಿದುಬಂದಿತ್ತು. ಬಳಿಕ ಅಂಬಾನಿಯವರ ಮನೆ ಎದುರು ಪತ್ತೆಯಾಗಿದ್ದ ಸ್ಕಾರ್ಪಿಯೋ ಕಾರು ಹಿರೇನ್ ಅವರದ್ದೇ ಎಂಬುದು ತನಿಖೆಯಲ್ಲಿ ಬಯಲಾಗಿತ್ತು. ಘಟನೆಗೂ ಒಂದು ವಾರದ ಮುನ್ನ ಹಿರೇನ್ ತಮ್ಮ ಕಾರು ಕಳ್ಳತನವಾಗಿದ್ದರ ಬಗ್ಗೆ ದೂರು ನೀಡಿದ್ದರು. ಕಳೆದ ವರ್ಷ ಮಾರ್ಚ್ 5 ರಂದು ಥಾಣೆಯ ತೊರೆಯೊಂದರಲ್ಲಿ ಹಿರೇನ್ ಅವರ ಮೃತದೇಹ ಪತ್ತೆಯಾಗಿತ್ತು.
Advertisement
Live Tv
[brid partner=56869869 player=32851 video=960834 autoplay=true]