ಇಂದೋರ್: ಇಲ್ಲಿನ ಹೋಳ್ಕರ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಟೀಂ ಇಂಡಿಯಾ (Team India) 5 ವಿಕೆಟ್ ನಷ್ಟಕ್ಕೆ 399 ರನ್ ಸಿಡಿಸಿದ್ದು, ಆಸ್ಟ್ರೇಲಿಯಾಗೆ (Australia) 400 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದೆ.
???????????????????????????????????????????? ????????????????????????????????!
ODI century number 3⃣ for @ShreyasIyer15 ????
Take a bow! ????????#TeamIndia | #INDvAUS | @IDFCFIRSTBank pic.twitter.com/TUNfwQTAuE
— BCCI (@BCCI) September 24, 2023
Advertisement
ಶ್ರೇಯರ್ ಅಯ್ಯರ್ (Shreyas Iyer) ಹಾಗೂ ಶುಭಮನ್ ಗಿಲ್ (Shubman Gill) ದ್ವಿಶತಕದ ಜೊತೆಯಾಟ, ಸೂರ್ಯಕುಮಾರ್ ಯಾದವ್ ಹಾಗೂ ಕೆ.ಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ 399 ರನ್ ಬಾರಿಸಿದೆ. ಸಿಕ್ಸರ್ ಬೌಂಡರಿ ಆಟದಲ್ಲಿ ಟೀಂ ಇಂಡಿಯಾ ಪರ 31 ಬೌಂಡರಿ, 18 ಸಿಕ್ಸರ್‌ಗಳು ದಾಖಲಾಗಿವೆ. ಅಲ್ಲದೇ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸಿಡಿಸಿದ ದಾಖಲೆಯ ರನ್ ಕೂಡ ಇದಾಗಿದೆ.
Advertisement
2013ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸೀಸ್ ವಿರುದ್ಧ ಭಾರತ 6 ವಿಕೆಟ್‌ಗೆ 383 ರನ್ ಗಳಿಸಿತ್ತು. ಇದು ಈವರೆಗೆ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ದಾಖಲಿಸಿದ್ದ ಅತಿಹೆಚ್ಚು ರನ್ ಆಗಿತ್ತು. ಇದೀಗ 10 ವರ್ಷಗಳ ಬಳಿಕ ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 399ರನ್ ಬಾರಿಸಿ ದಾಖಲೆ ನಿರ್ಮಿಸಿದೆ.
Advertisement
HUNDRED in Indore for Shubman Gill! ????
He continues his stellar form with the bat! ????#TeamIndia | #INDvAUS | @IDFCFIRSTBank pic.twitter.com/2x2J7Njk2Z
— BCCI (@BCCI) September 24, 2023
Advertisement
ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಮಾಡುವ ಅವಕಾಶವನ್ನು ಟೀಂ ಇಂಡಿಯಾಕ್ಕೆ ಬಿಟ್ಟುಕೊಟ್ಟಿತು. ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ಶುಭಮನ್ ಗಿಲ್ ಜೋಡಿ ಉತ್ತಮ ಜೊತೆಯಾಟ ನೀಡುವಲ್ಲಿ ವಿಫಲವಾಯಿತು. ಆರಂಭಿಕ ಋತುರಾಜ್ ಗಾಯಕ್ವಾಡ್ 12 ಎಸೆತಗಳಲ್ಲಿ 8 ರನ್ ಗಳಿಸಿ ಪೆವಿಲಿಯನ್ ಸೇರಿದರು.
ಬಳಿಕ 2ನೇ ವಿಕೆಟ್‌ಗೆ ಜೊತೆಯಾದ ಶುಭಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಬರೋಬ್ಬರಿ 200 ರನ್‌ಗಳ ಜೊತೆಯಾಟ ನೀಡಿದರು. ಆಸೀಸ್ ಬೌಲರ್‌ಗಳನ್ನ ಹಿಗ್ಗಾಮುಗ್ಗ ಬೆಂಡೆತ್ತಿದ ಈ ಜೋಡಿ 164 ಎಸೆತಗಳಲ್ಲಿ 200 ರನ್‌ಗಳ ಜೊತೆಯಾಟ ನೀಡಿತು. ಶ್ರೇಯಸ್ ಅಯ್ಯರ್ 90 ಎಸೆತಗಳಲ್ಲಿ 105 ರನ್ (11 ಬೌಂಡರಿ, 3 ಸಿಕ್ಸರ್) ಬಾರಿಸಿದ್ರೆ. ಶುಭಮನ್ ಗಿಲ್ 97 ಎಸೆತಗಳಲ್ಲಿ 104 ರನ್ (6 ಬೌಂಡರಿ, 4 ಸಿಕ್ಸರ್) ಚಚ್ಚಿದರು.
ನಂತರ ಕ್ರೀಸ್‌ಗಿಳಿದ ಟೀಂ ಇಂಡಿಯಾ ಬ್ಯಾಟರ್ಸ್ ಸ್ಫೋಟಕ ಬ್ಯಾಟಿಂಗ್‌ಗೆ ಮುಂದಾದರು. 136.84 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಕೆ.ಎಲ್ ರಾಹುಲ್ 38 ಎಸೆತಗಳಲ್ಲಿ 52 ರನ್ (3 ಬೌಂಡರಿ, 3 ಸಿಕ್ಸರ್) ಚಚ್ಚಿದರೆ, 172.22 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಇಶಾನ್ ಕಿಶನ್ 18 ಎಸೆತಗಳಲ್ಲಿ 31 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು.
ಸೂರ್ಯ ಬ್ಯಾಕ್ ಟು ಬ್ಯಾಕ್ ಫಿಫ್ಟಿ:
ಕೊನೆಯಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ (Suryakumar Yadav) ಟಿ20 ಶೈಲಿಯಲ್ಲೇ ಬ್ಯಾಟಿಂಗ್ ಮಾಡುವ ಮೂಲಕ ಸ್ಫೋಟಕ ಅರ್ಧಶತಕ ಸಿಡಿಸಿದರು. ಮೊದಲ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದ ಸೂರ್ಯ ಇಂದು 37 ಎಸೆತಗಳಲ್ಲಿ 72 ರನ್ (6 ಸಿಕ್ಸರ್, 6 ಬೌಂಡರಿ) ಬಾರಿಸುವ ಮೂಲಕ ಟೀಂ ಇಂಡಿಯಾ 400 ರನ್‌ಗಳ ಗುರಿ ನೀಡಲು ಸಾಧ್ಯವಾಯಿತು. ರವೀಂದ್ರ ಜಡೇಜಾ 9 ಎಸೆತಗಳಲ್ಲಿ 13 ರನ್ ಗಳಿಸಿ ಕ್ರೀಸ್‌ನಲ್ಲಿ ಉಳಿದರು.
ಆಸೀಸ್ ಪರ ಕ್ಯಾಮರೂನ್ ಗ್ರೀನ್ 2 ವಿಕೆಟ್ ಕಿತ್ತರೆ, ಜೋಶ್ ಹ್ಯಾಜಲ್‌ವುಡ್, ಸೇನ್ ಅಬ್ಬಾಟ್, ಆಡಂ ಝಂಪಾ ತಲಾ ಒಂದೊಂದು ವಿಕೆಟ್ ಪಡೆದರು.
Web Stories