ಮಂಗಳೂರು: ಹೈರಿಸ್ಕ್ ದೇಶ ಘಾನಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದನ್ನೂ ಓದಿ: ಭಾರತದಲ್ಲಿ ಓಮಿಕ್ರಾನ್ ಸೆಂಚುರಿ – 101 ಮಂದಿಗೆ ಸೋಂಕು
Advertisement
ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾಗಿದೆ. ಆ ಪ್ರಯಾಣಿಕನ ಹತ್ತಿರದ ಸೀಟಿನ ಒಟ್ಟು 27 ಪ್ರಯಾಣಿಕರಿಗೆ ಟೆಸ್ಟ್ ನಡೆಸಿ ಕ್ವಾರೆಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ಪ್ರಯಾಣಿಕರ ಗಂಟಲು ದ್ರವ್ಯವನ್ನು ಜನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!
Advertisement
Advertisement
ಪಾಸಿಟಿವ್ ಬಂದ ಹಿನ್ನೆಲೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅಧಿಕಾರಿಗಳ ತುರ್ತು ಸಭೆ ನಡೆಸಿದ್ದು, ಏರ್ ಪೋರ್ಟ್ ಮುಖ್ಯಸ್ಥರು, ಏರ್ ಪೋರ್ಟ್ ಆರೋಗ್ಯಾಧಿಕಾರಿ (ಎ.ಪಿ.ಹೆಚ್.ಓ), ಜಿಲ್ಲಾ ಸರ್ವೇಕ್ಷಾಣಾಧಿಕಾರಿ (ಡಿ.ಎಸ್.ಓ), ಕೋವಿಡ್ ನೋಡಲ್ ಅಧಿಕಾರಿ ಹಾಗೂ ಅಪೋಲೋ ಲ್ಯಾಬ್ ಮುಖ್ಯಸ್ಥರೊಂದಿಗೆ ಈ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿಮಾನ ನಿಲ್ದಾಣದಲ್ಲಿ ತಪಾಸಣೆ ಬಿಗಿಗೊಳಿಸಲು ಸೂಚನೆ ನೀಡಿದ್ದಾರೆ.