ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗುತ್ತಿದ್ದು, ಮಂಡ್ಯ ಜಿಲ್ಲೆಯ ವಿಶ್ವವಿಖ್ಯಾತ ಕೆಆರ್‍ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ,
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‍ಎಸ್ ಡ್ಯಾಂಗೆ ಒಳಹರಿವು ಹೆಚ್ಚಳವಾಗಿದೆ. ಬುಧವಾರ 601 ಕ್ಯೂಸೆಕ್ ಇದ್ದ ಒಳಹರಿವು, ಗುರುವಾರ 1135 ಕ್ಯೂಸೆಕ್‍ಗೆ ಹೆಚ್ಚಳವಾಗಿದೆ. ಅಣೆಕಟ್ಟೆಯ ನೀರು ಸಂಗ್ರಹ ಗರಿಷ್ಠ ಮಟ್ಟ 124.80 ಅಡಿ ಇದೆ. ಪ್ರಸ್ತುತ ಡ್ಯಾಂನಲ್ಲಿರುವ ನೀರು ಸಂಗ್ರಹ ಪ್ರಮಾಣ 67.60 ಅಡಿಗೆ ಏರಿಕೆಯಾಗಿದೆ.
Advertisement
ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು cubic foot per second ಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.
Advertisement