ವಿಜಯಪುರ: ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕರ್ನಾಟಕಕ್ಕೆ (Karnataka) ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಹಿನ್ನೆಲೆ ವಿಜಯಪುರದ (Vijayapura) ಆಲಮಟ್ಟಿ ಜಲಾಶಯದಲ್ಲಿ (Almatti Dam) ನೀರಿನ ಒಳಹರಿವು ಹೆಚ್ಚಳವಾಗಿದೆ.
ಮಹಾರಾಷ್ಟ್ರದಲ್ಲಿ ಮಳೆಯಾಗುವ ಮುನ್ನ ಆಲಮಟ್ಟಿಯ ಲಾಲಬಾಹ್ದೂರ ಶಾಸ್ತ್ರಿ ಜಲಾಶಯದಲ್ಲಿ ಕೇವಲ 2 ಟಿಎಂಸಿ ನೀರಿತ್ತು. ಇದೀಗ ಉತ್ತಮ ಮಳೆಯಾಗಿ ನೀರು ಹರಿದು ಬರುತ್ತಿದ್ದು, 123.081 ಟಿಎಂಸಿ ಗರಿಷ್ಠ ಮಟ್ಟದ ಜಲಾಶಯದಲ್ಲಿ 25.536 ಟಿಎಂಸಿ ನೀರಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ – ನಾಳೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಜಾರಿ
ಸದ್ಯ ಜಲಾಶಯದಲ್ಲಿ 80,445 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ನೀರು ಹರಿದು ಬರುತ್ತಿರುವ ಹಿನ್ನೆಲೆ ನೀರಿಲ್ಲದೇ ಕಂಗಾಲಾಗಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.
