ನವದೆಹಲಿ: ವಿಶ್ವದಾದ್ಯಂತ ರಣಕೇಕೆ ಹಾಕುತ್ತಿರುವ ಡೆಡ್ಲಿ ಕೊರೊನಾ ವೈರಸ್‍ಗೆ 179 ರಾಷ್ಟ್ರ ಹಾಗೂ ಪ್ರಾಂತ್ಯಗಳು ತುತ್ತಾಗಿವೆ. ಈವರೆಗೆ ಸೋಂಕಿಗೆ 10, 048 ಮಂದಿ ಬಲಿಯಾಗಿದ್ದಾರೆ. ಇತ್ತ ಭಾರತದಲ್ಲಿ ಸೋಂಕಿತರ ಸಂಖ್ಯೆ 194ಕ್ಕೆ ಏರಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ 15 ಮಂದಿಗೆ ಕೊರೊನಾ ತಗುಲಿರುವುದು ವರದಿಯಾಗಿದೆ.
Advertisement
ಒಟ್ಟು 179 ರಾಷ್ಟ್ರ ಹಾಗೂ ಪ್ರಾಂತ್ಯಗಳ ಮೇಲೆ ತನ್ನ ಕರಿನೆರಳು ಬೀರುತ್ತಿರುವ ಕೊರೊನಾ ವೈರಸ್‍ಗೆ ಈವರೆಗೆ ಸುಮಾರು 2,45,629 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಅಲ್ಲದೇ ವಿಶ್ವದೆಲ್ಲೆಡೆ ಒಟ್ಟು 10,048 ಮಂದಿ ಕೊರೊನಾ ಸೋಂಕು ತಗುಲಿ ಜೀವ ಕಳೆದುಕೊಂಡಿದ್ದಾರೆ. ಸುಮಾರು 88,437 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಪ್ರಸ್ತುತ 1,47,144 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
Advertisement
Advertisement
ಡೆಡ್ಲಿ ಕೊರೊನಾಗೆ ಭಾರತದಲ್ಲಿ ಈವರೆಗೆ 194 ಮಂದಿ ತುತ್ತಾಗಿದ್ದು, 20 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 170 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಈಗಾಗಲೇ ಕೊರೊನಾಗೆ 4 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟದಲ್ಲಿ ಒಟ್ಟು 15 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
Advertisement
ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ಮರಣ ಮೃದಂಗ ಭಾರಿಸುತ್ತಿತ್ತು. ಆದರೆ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಯ ಸತತ ಪರಿಶ್ರಮ, ಸರ್ಕಾರದ ಕ್ರಮಗಳಿಂದ ಸದ್ಯ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ.
1. ಚೀನಾ – ಈವರೆಗೆ ಕೊರೊನಾ ಸೋಂಕಿಗೆ 80,967 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 71,150 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,248 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 6,569 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ.
2. ಇಟಲಿ – ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 41,035 ಮಂದಿ ತುತ್ತಾಗಿದ್ದು, ಅವರಲ್ಲಿ 5,979 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 11,144 ಮಂದಿ ಕೊರೊನಾದಿಂದ ಬಳಲುತ್ತಿದ್ದು, 3,405 ಮಂದಿ ಮೃತಪಟ್ಟಿದ್ದಾರೆ.
3. ಇರಾನ್ – 18,407 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅವರಲ್ಲಿ 5,710 ಮಂದಿ ಸೊಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 10,516 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದು, 1,284 ಸೋಂಕಿತರು ಸಾವನ್ನಪ್ಪಿದ್ದಾರೆ.
4. ಸ್ಪೇನ್ – 18,077 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 1,107 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 16,139 ರೋಗಿಗಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, 831 ಮಂದಿ ಬಲಿಯಾಗಿದ್ದಾರೆ.
5. ದಕ್ಷಿಣ ಕೊರಿಯಾ – 8,652 ಮಂದಿಗೆ ಸೋಂಕು ತಗುಲಿತ್ತು. ಆದರೆ ಅವರಲ್ಲಿ 2,233 ರೋಗಿಗಳು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. 94 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಪ್ರಸ್ತುತ 6,325 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
6. ಜರ್ಮನಿ – 15,320 ಮಂದಿಯಲ್ಲಿ ಕಾಣಿಕೊಂಡ ಕೊರೊನಾ ಸೋಂಕಿನಿಂದ 115 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸದ್ಯ 44 ಮಂದಿ ಬಲಿಯಾಗಿದ್ದು, ಪ್ರಸ್ತುತ 15,161 ರೋಗಿಗಳು ಕೊರೊನಾದಿಂದ ನರಳುತ್ತಿದ್ದಾರೆ.
7. ಫ್ರಾನ್ಸ್ – 10,995 ಮಂದಿ ಕೊರೊನಾಗೆ ತುತ್ತಾಗಿದ್ದರು. ಅವರಲ್ಲಿ 1,295 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 9,328 ಮಂದಿ ಸೋಂಕಿನಿಂದ ಬಳಲುತ್ತಿದ್ದು, 372 ಮಂದಿ ಜೀವ ಕಳೆದುಕೊಂಡಿದ್ದಾರೆ.
8. ಅಮೆರಿಕ – ಯುಎಸ್‍ಎನಲ್ಲಿ ಕೊರೊನಾಗೆ 218 ಮಂದಿ ಬಲಿಯಾಗಿದ್ದಾರೆ. 14,315 ಮಂದಿಯಲ್ಲಿ ಕಾಣಿಸಿಕೊಂಡ ಸೋಂಕಿನಿಂದ 121 ಮಂದಿ ಗುಣಮುಖರಾಗಿದ್ದಾರೆ. ಸದ್ಯ 13,976 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ. 218 ಮಂದಿ ಮೃತಪಟ್ಟಿದ್ದಾರೆ.
9. ಪಾಕಿಸ್ತಾನ – ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲೂ ಹರಡಿರುವ ಕೊರೊನಾ ವೈರಸ್‍ಗೆ ಈವರೆಗೆ 454 ಮಂದಿ ತುತ್ತಾಗಿದ್ದು, 13 ಮಂದಿ ಚೇತರಿಸಿಕೊಂಡಿದ್ದಾರೆ. ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, 439 ಮಂದಿಗೆ ಸೋಂಕು ತಗುಲಿದೆ.