Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಡಳಿತದಲ್ಲಿ ಪಾರದರ್ಶಕತೆ ತರಲು ಮಾಹಿತಿ ಆಯೋಗ ಪಾತ್ರ ವಹಿಸಿದೆ: ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತ ಡಾ.ಹರೀಶ್‌ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಆಡಳಿತದಲ್ಲಿ ಪಾರದರ್ಶಕತೆ ತರಲು ಮಾಹಿತಿ ಆಯೋಗ ಪಾತ್ರ ವಹಿಸಿದೆ: ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತ ಡಾ.ಹರೀಶ್‌ಕುಮಾರ್

Chikkamagaluru

ಆಡಳಿತದಲ್ಲಿ ಪಾರದರ್ಶಕತೆ ತರಲು ಮಾಹಿತಿ ಆಯೋಗ ಪಾತ್ರ ವಹಿಸಿದೆ: ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತ ಡಾ.ಹರೀಶ್‌ಕುಮಾರ್

Public TV
Last updated: January 3, 2026 9:37 pm
Public TV
Share
2 Min Read
Information Commission Chikkamagaluru Meeting
SHARE

ಚಿಕ್ಕಮಗಳೂರು: ಕರ್ನಾಟಕ ರಾಜ್ಯದಲ್ಲಿ 2005ರ ಅಕ್ಟೋಬರ್ 12ರಂದು ಅಸ್ತಿತ್ವಕ್ಕೆ ಬಂದ ಮಾಹಿತಿ ಆಯೋಗವು (Karnataka Information Commission) ಆಡಳಿತದಲ್ಲಿ ಪಾರದರ್ಶಕತೆ ಮತ್ತು ಬದ್ಧತೆಯನ್ನು ತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾದ ಡಾ.ಹರೀಶ್‌ಕುಮಾರ್ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಇಂದು ನಗರದ ಜಿ.ಪಂ.ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ-2005 ಕುರಿತ ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಅಧ್ಯಯನ ಮತ್ತು ಸಾಮಾನ್ಯ ತಿಳುವಳಿಕೆ ಇರಬೇಕು. ಮಾಹಿತಿ ಬಯಸಿ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಕಾಯ್ದೆಯಲ್ಲಿ ಲಭ್ಯವಿರುವ ಸೆಕ್ಷನ್‌ಗಳ ಆಧಾರದ ಮೇಲೆ ಉತ್ತರ ಮತ್ತು ಮಾಹಿತಿಯನ್ನು ಒದಗಿಸಬೇಕು. ಕಳೆದ ಹತ್ತು ವರ್ಷಗಳಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ವಯ ಮಾಹಿತಿ ನೀಡುವಲ್ಲಿ ವಿಳಂಬ, ಸರಿಯಾದ ಮಾಹಿತಿ ನೀಡದಿರುವುದು ಹಾಗೂ ಇತರ ಕಾರಣಗಳಿಂದಾಗಿ 10 ಕೋಟಿಯಷ್ಟು ದಂಡವು ಸರ್ಕಾರಿ ಅಧಿಕಾರಿಗಳಿಂದ ಆಯೋಗಕ್ಕೆ ಜಮೆ ಆಗಿದೆ. ಆದ್ದರಿಂದ ಮಾಹಿತಿ ಅಧಿಕಾರಿಗಳು ಮಾಹಿತಿ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯಲ್ಲಿ ಉತ್ತರ ಒದಗಿಸಬೇಕೆಂದು ಅವರು ಹೇಳಿದರು.

Information Commission Chikkamagaluru Meeting Badruddin Mani

ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರು ಮಾಹಿತಿ ಕೋರಿ ಸಲ್ಲಿಸುವ ಅರ್ಜಿಗಳನ್ನು ಅರ್ಜಿ ಸಲ್ಲಿಕೆಯಾದ 30 ದಿನಗಳಲ್ಲಿ ವಿಲೇವಾರಿ ಮಾಡಬೇಕು. ಮಾಹಿತಿ ಕೇಳಿ ಯಾವುದೇ ವ್ಯಕ್ತಿಯು ಸರ್ಕಾರದ ಉದ್ಯೋಗ, ಸೌಲಭ್ಯಗಳ ಬಗ್ಗೆ ಮಾಹಿತಿ ಕೇಳಿ ಅರ್ಜಿ ಸಲ್ಲಿಸಿದ್ದಲ್ಲಿ ಮಾಹಿತಿ ನೀಡಬೇಕಾಗುತ್ತದೆ. ಅಧಿಕಾರಿಯ ಹೆಸರು ಮತ್ತು ಹುದ್ದೆ ಸಾರ್ವಜನಿಕ ದಾಖಲೆಯಾಗಿರುವುದರಿಂದ ಅವುಗಳನ್ನು ನೀಡಬೇಕಾಗುತ್ತದೆ. ಯಾವುದೇ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಅಥವಾ ತನಿಖೆ ಮುಕ್ತಾಯವಾಗಿ ಅಂತಿಮ ವರದಿ ಸಲ್ಲಿಸದಿರುವ ಅಥವಾ ತನಿಖೆ ಮುಕ್ತಾಯವಾದ ಬಗ್ಗೆ ಸಂಬAಧಿಸಿದ ಅಧಿಕಾರಿ ಅಥವಾ ಸಂಸ್ಥೆ ದೃಢೀಕರಣ ನೀಡದ ಹೊರತು ಯಾವುದೇ ಮಾಹಿತಿಯನ್ನು ನೀಡುವಂತಿಲ್ಲ. ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಕಾಯ್ದೆ ಮತ್ತು ಕಾನೂನುಗಳ ಸಾಮಾನ್ಯ ಜ್ಞಾನವು ಅಗತ್ಯವಾಗಿದೆ ಎಂದರು.

ಮಾಹಿತಿ ಹಕ್ಕು ಕಾಯ್ದೆ 2005 ರಲ್ಲಿ ಜಾರಿಗೆ ಬಂದಿದ್ದರೂ ಸಹ ಹಿಂದಿನ 20 ವರ್ಷಗಳ ಮಾಹಿತಿಗಳಿಗೂ ಈ ಕಾಯ್ದೆ ಅನ್ವಯವಾಗುತ್ತದೆ. ಕಳೆದ 20 ವರ್ಷಗಳಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಉಚ್ಚ ನ್ಯಾಯಾಲಯ ಹಾಗೂ ಸರ್ವೋಚ್ಚ ನ್ಯಾಯಾಲಯಗಳಿಂದ ಹಲವಾರು ಆದೇಶಗಳು ಬಂದಿವೆ. ಈ ಆದೇಶಗಳು ಮಾಹಿತಿ ಹಕ್ಕು ಕಾಯ್ದೆ ಅನ್ವಯ ಅಳವಡಿಕೆ ಹಾಗೂ ವಿಸ್ತರಣೆಗಳಿಗೆ ಸಾಕಷ್ಟು ಬಲ ತುಂಬಿವೆ ಎಂದು ತಿಳಿಸಿದರು.

ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ. ಮಾತನಾಡಿ, ಮಾಹಿತಿ ಅಧಿಕಾರಿಗಳು ಮಾಹಿತಿ ಕೋರಿ ಬಂದ ಅರ್ಜಿಗಳಿಗೆ ಕಾಯ್ದೆಯನ್ವಯ ಪರಿಶೀಲಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು. ಅರ್ಜಿಗಳ ವಿಲೇವಾರಿಯಲ್ಲಿ ಜಿಲ್ಲೆ ಪ್ರಥಮ ಸ್ಥಾನಕ್ಕೆ ಬರುವಂತೆ ಆಶಿಸಿದ ಅವರು, ಕೇವಲ ಸಿಸಿಟಿವಿ ದೃಶ್ಯಗಳು ಪ್ರಕರಣಗಳ ಬಗ್ಗೆ ಅಂತಿಮ ಆರೋಪ ಪಟ್ಟಿ, ಯಾವ ವ್ಯಕ್ತಿ ಮೇಲೆ ಎಷ್ಟು ಪ್ರಕರಣಗಳಿವೆ ಎಂಬುದು ಸೇರಿದಂತೆ ವೈಯಕ್ತಿಕ ಹಾಗೂ ವ್ಯಕ್ತಿಗತ ಮಾಹಿತಿಯನ್ನು ನೀಡುವಾಗ ಮಾಹಿತಿ ಹಕ್ಕು ಕಾಯ್ದೆಯಲ್ಲಿನ ಸೆಕ್ಷನ್‌ಗಳನ್ನು ಸರಿಯಾಗಿ ತಿಳಿದು ಅರ್ಥೈಸಿಕೊಂಡು ಮುಂದುವರಿಯಬೇಕು. ಯಾವ ಮಾಹಿತಿ ನೀಡಲು ಅವಕಾಶವಿದೆ ಮತ್ತು ಯಾವುದನ್ನು ನೀಡಲು ಅವಕಾಶವಿಲ್ಲ ಎಂಬುದರ ಬಗ್ಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ತಿಳುವಳಿಕೆ ಇರಬೇಕು ಎಂದು ಹೇಳಿದರು.

TAGGED:ChikkamagaluruDr Harish KumarInformation commissionkarnatakaಕರ್ನಾಟಕಚಿಕ್ಕಮಗಳೂರುಡಾ.ಹರೀಶ್‌ಕುಮಾರ್ಮಾಹಿತಿ ಆಯೋಗ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

India EU FTA
Latest

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ

Public TV
By Public TV
20 minutes ago
Bike Taxi Auto Association Supreme Court
Bengaluru City

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

Public TV
By Public TV
21 minutes ago
daily horoscope dina bhavishya
Astrology

ದಿನ ಭವಿಷ್ಯ 27-01-2026

Public TV
By Public TV
47 minutes ago
Raichur Mother Murder By Son copy
Crime

ಆಸ್ತಿಗಾಗಿ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪಾಪಿ ಮಗ

Public TV
By Public TV
1 hour ago
Richa Ghosh
Cricket

ಕೊನೆಯಲ್ಲಿ ರೊಚ್ಚಿಗೆದ್ದ ರಿಚಾ, ಹೋರಾಡಿ ಸೋತ ಆರ್‌ಸಿಬಿ – ಮುಂಬೈಗೆ 15 ರನ್‌ ಜಯ

Public TV
By Public TV
9 hours ago
Yadagiri Fire Accident
Districts

ಆಕಸ್ಮಿಕ ಬೆಂಕಿಗೆ 10 ಲಕ್ಷ ರೂ. ಮೌಲ್ಯದ ಪೈಪ್‌ಗಳು ಸುಟ್ಟು ಭಸ್ಮ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?